ಬೆಂಗಳೂರು: ಬೆಂಗಳೂರಿನ ದತ್ತುಪುತ್ರ, ಟೀಂ ಇಂಡಿಯಾ ರನ್ ಮಷೀನ್, ಮುಂಬರುವ ವಿಜಯ್ ಹಜಾರೆ ಟ್ರೋಫಿ ಆಡಲು ಸಜ್ಜಾಗಿದ್ದಾರೆ. ಡೆಲ್ಲಿ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಕೊಹ್ಲಿ ಆಟವನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣ್ತುಂಬಿಕೊಳ್ಳಲು ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ.
ಹೀಗಾಗಿ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಪ್ರವೇಶ ಇದೆಯೇ ಎಂಬ ಕುತೂಹಲವಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ಹಂಗಾಮಿ ಕಾರ್ಯದರ್ಶಿ ಎಂ.ಎಸ್.ವಿನಯ್ ಅವರು ‘ಕನ್ನಡಪ್ರಭ’ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
58
ಫ್ಯಾನ್ಸ್‌ಗೆ ನಿಷೇಧ ಹೇರಿಲ್ಲ!
‘ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅಭಿಮಾನಿಗಳಿಗೆ ಪ್ರವೇಶವಿದೆ. ಅವರಿಗೆ ನಿಷೇಧ ಹೇರಲಾಗಿಲ್ಲ. ವಿರಾಟ್ ಕೊಹ್ಲಿ ಆಡಿದರೆ ಹೆಚ್ಚಿನ ಜನರು ಆಗಮಿಸಬಹುದು. ಇದರ ಬಗ್ಗೆ ಶೀಘ್ರದಲ್ಲೇ ಸಭೆ ನಡೆಸಿ, ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೂ ಚರ್ಚೆ ನಡೆಸಲಿದ್ದೇವೆ. ಎಷ್ಟು ಜನರಿಗೆ ಪ್ರವೇಶ ನೀಡಬಹುದು ಎಂಬುದರ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುತ್ತೇವೆ’ ಎಂದಿದ್ದಾರೆ.
68
ಕಾಲ್ತುಳಿತದಲ್ಲಿ 11 ಮಂದಿ ದುರ್ಮರಣ
ಜೂನ್ 04ರಂದು ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇನ್ನು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
78
ಸರ್ಕಾರದಿಂದ ಬಿಗಿ ನಿಲುವು
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಸರ್ಕಾರವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದಾದ ಬಳಿಕ ಯಾವುದೇ ಸ್ಪರ್ಧಾತ್ಮಕ ಪಂದ್ಯ ನಡೆಸಲು ಅವಕಾಶ ನೀಡಿರಲಿಲ್ಲ.
88
ಚಿನ್ನಸ್ವಾಮಿಯಿಂದ ಮಹತ್ವದ ಪಂದ್ಯಗಳು ಎತ್ತಂಗಡಿ
ಇದೇ ಕಾರಣಕ್ಕೆ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ಎಂ ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದವು. ಮುಂಬರುವ ಐಪಿಎಲ್ ಆಯೋಜನೆಯ ಕುರಿತಂತೆಯೂ ಇದುವರೆಗೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.