ಬೆಂಗಳೂರು: ಭಾರತದ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ ದಾಖಲೆಗಳನ್ನು ಬ್ರೇಕ್ ಮಾಡುವುದು ಹೊಸತೇನಲ್ಲ. ಇದೀಗ ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರೂ, ಕೊಹ್ಲಿ ಐಸಿಸಿ ರ್‍ಯಾಂಕಿಂಗ್‌ನಲ್ಲಿ ಮೂರು ಮಾದರಿಯಲ್ಲಿ ಯಾರೊಬ್ಬರು ಮಾಡಿರದ ಅಪರೂಪದಲ್ಲೇ ಅಪರೂಪದ ದಾಖಲೆ ಮಾಡಿದ್ದಾರೆ.
ಭಾರತದ ರನ್ ಮಷೀನ್ ವಿರಾಟ್ ಕೊಹ್ಲಿ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಹಲವಾರು ದಾಖಲೆಗಳನ್ನು ಬ್ರೇಕ್ ಮಾಡಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ.
210
ಸದ್ಯ ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಕ್ರಿಯರಾಗಿ ಮುಂದುವರೆಯುವ ನಿರೀಕ್ಷೆಯಲ್ಲಿದ್ದಾರೆ.
310
ಕಳೆದ ಐಸಿಸಿ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇನ್ನು ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೂ ಮುನ್ನ ದಿಢೀರ್ ಎನ್ನುವಂತೆ ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು.
ಇನ್ನು ಇದೆಲ್ಲದರ ನಡುವೆ ಐಸಿಸಿ ಮಹತ್ವದ ಅಪ್‌ಡೇಟ್ ಹೊರಡಿಸಿದ್ದು, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ರ್‍ಯಾಂಕಿಂಗ್ ಇತಿಹಾಸದಲ್ಲಿ ಗರಿಷ್ಠ ರೇಟಿಂಗ್ ಅಂಕ ಹೊಂದಿದ ಆಟಗಾರ ಎನ್ನುವ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
510
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ರ್‍ಯಾಂಕಿಂಗ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ 909 ರೇಟಿಂಗ್ ಅಂಕ ಹೊಂದಿದ್ದರು. ಈ ಮೂಲಕ ಮೂರು ಮಾದರಿಯ ಕ್ರಿಕೆಟ್‌ನಲ್ಲೂ 900+ ರೇಟಿಂಗ್ ಅಂಕ ಹೊಂದಿದ ಏಕೈಕ ಕ್ರಿಕೆಟಿಗ ಎನ್ನುವ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
610
ವಿರಾಟ್ ಕೊಹ್ಲಿ 2018ರಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆಯಲ್ಲಿ ಟೆಸ್ಟ್ ಐಸಿಸಿ ರ್‍ಯಾಂಕಿಂಗ್‌ನಲ್ಲಿ 937 ರೇಟಿಂಗ್ ಅಂಕಗಳನ್ನು ಗಳಿಸಿದ್ದರು.
710
ಇನ್ನು ಇದಷ್ಟೇ ಅಲ್ಲದೇ 2018ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲೇ ಮೂರು ಏಕದಿನ ಸರಣಿಯಲ್ಲಿ ಎರಡು ಅರ್ಧಶತಕ ಸಹಿತ 191 ರನ್ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ನ ಐಸಿಸಿ ರ್‍ಯಾಂಕಿಂಗ್‌ನಲ್ಲಿ 909 ರೇಟಿಂಗ್ ಅಂಕ ಗಳಿಸಿದ್ದರು.
810
ಯಶಸ್ಸಿನ ಉತ್ತುಂಗದಲ್ಲಿದ್ದಾಗ ವಿರಾಟ್ ಕೊಹ್ಲಿ, ಐಸಿಸಿ ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಏಕಕಾಲದಲ್ಲಿ ಐಸಿಸಿ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿ ಹೊಸ ಮೈಲಿಗಲ್ಲು ನೆಟ್ಟಿದ್ದರು.
910
ವಿರಾಟ್ ಕೊಹ್ಲಿ ಎಲ್ಲಾ ಮಾದರಿಯಿಂದ ಒಟ್ಟು 617 ಇನ್ನಿಂಗ್ಸ್‌ಗಳನ್ನಾಡಿ 52.27ರ ಬ್ಯಾಟಿಂಗ್ ಸರಾಸರಿಯಲ್ಲಿ 82 ಶತಕ, 143 ಅರ್ಧಶತಕ ಸಹಿತ ಒಟ್ಟಾರೆ 27,599 ರನ್ ಸಿಡಿಸಿದ್ದಾರೆ.
1010
ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ರನ್ ಬಾರಿಸಿದ ಭಾರತ ಎರಡನೇ ಹಾಗೂ ಒಟ್ಟರೆ ಮೂರನೇ ಕ್ರಿಕೆಟಿಗ ಎನ್ನುವ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದರು.