ಸ್ಟೀವ್ಹಾ ಹಿಂದಿಕ್ಕಿ, ಪಾಂಟಿಂಗ್, ಲಾಯ್ಡ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ!

First Published Mar 6, 2021, 6:28 PM IST

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಸರಣಿಯನ್ನು 3-1 ಅಂತರದಲ್ಲಿ ಗೆದ್ದುಕೊಂಡಿದೆ. ಈ ಗೆಲುವಿನ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಿಗ್ಗಜರ ದಾಖಲೆ ಪುಡಿ ಮಾಡಿದ್ದಾರೆ. ರಿಕಿ ಪಾಂಟಿಂಗ್, ಸ್ಟೀವ್ ವ್ಹಾ, ಕ್ಲೈವ್ ಲಾಯ್ಡ್ ದಾಖಲೆಗಳು ಇದೀಗ ಪುಡಿ ಪುಡಿಯಾಗಿದೆ. ಕೊಹ್ಲಿ ದಾಖಲೆ ವಿವರ ಇಲ್ಲಿದೆ.
 

ಅಹಮ್ಮದಾಬಾದ್‌ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಇನ್ನಿಂಗ್ಸ್ ಹಾಗೂ 25 ರನ್ ಗೆಲವು ಸಾಧಿಸಿದೆ. ಈ ಗೆಲುವಿನ ಮೂಲಕ ಭಾರತ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಲಗ್ಗೆ ಇಟ್ಟಿದೆ.
undefined
ಈ ಗೆಲುವು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವರವಾಗಿದೆ. ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕೊಹ್ಲಿ, ನಾಯಕತ್ವದಲ್ಲಿ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್, ಸ್ಟೀವ್ ವ್ಹಾ ಹಾಗೂ ವೆಸ್ಟ್ ಇಂಡೀಸ್‌ನ ದಿಗ್ಗಜ ನಾಯಕ ಕ್ಲೈವ್ ಲಾಯ್ಡ್ ದಾಖಲೆ ಪುಡಿ ಮಾಡಿದ್ದಾರೆ.
undefined
ತವರಿನಲ್ಲಿ ಅತೀ ಹೆಚ್ಚು ಟೆಸ್ಟ್ ಗಲುವು ದಾಖಲಿಸಿದ ನಾಯಕರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. 23ನೇ ಗೆಲುವಿನೊಂದಿಗೆ ಕೊಹ್ಲಿ ಆಸೀಸ್ ದಿಗ್ಗಜ ಸ್ಟೀವ್ ವ್ಹಾ ಹಿಂದಿಕ್ಕಿದ್ದಾರೆ. 30 ಗೆಲುವಿನೊಂದಿಗೆ ಮೊದಲ ಸ್ಥಾನದಲ್ಲಿ ಸೌತ್ ಆಫ್ರಿಕಾ ಮಾಜಿ ನಾಯಕ ಗ್ರೇಮ್ ಸ್ಮಿತ್ ವಿರಾಜಮಾನರಾಗಿದ್ದಾರೆ.
undefined
ತವರಿನಲ್ಲಿ ಅತೀ ಹೆಚ್ಚು ಟೆಸ್ಟ್ ಸರಣಿ ಗೆಲುವು ದಾಖಲಿಸಿದ ನಾಯಕರ ಪೈಕಿ ವಿರಾಟ್ ಕೊಹ್ಲಿ, ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ್ದಾರೆ. ಇದೀಗ ಕೊಹ್ಲಿ ತವರಿನಲ್ಲಿ 10 ಟೆಸ್ಟ್ ಸರಣಿ ಗೆಲುವು ದಾಖಲಿಸಿದ್ದಾರೆ.
undefined
ನಾಯಕನಾಗಿ ವಿರಾಟ್ ಕೊಹ್ಲಿಗೆ ಇದು 36ನೇ ಟೆಸ್ಟ್ ಗೆಲುವಾಗಿದೆ. ಈ ಮೂಲಕ ವೆಸ್ಟ್ ಇಂಡೀಸ್ ದಿಗ್ಗಜ ಕ್ಲೈವ್ ಲಾಯ್ಡ್ ದಾಖಲೆ ಸರಿಗಟ್ಟಿದ್ದಾರೆ.
undefined
ಕ್ಲೈವಲ್ ಲಾಯ್ಡ್ 74 ಟೆಸ್ಟ್ ಪಂದ್ಯಗಳಲ್ಲಿ 36 ಗೆಲುವು ದಾಖಲಿಸಿದ್ದರು. ಆದರೆ ವಿರಾಟ್ ಕೊಹ್ಲಿ ಕೇವಲ 60 ಪಂದ್ಯಗಳಲ್ಲಿ 36 ಟೆಸ್ಟ್ ಗಲುವು ದಾಖಲಿಸಿದ್ದಾರೆ.
undefined
ಅಹಮ್ಮದಾಬಾದ್ ಗೆಲುವಿನೊಂದಿಗೆ ಟೀಂ ಇಂಡಿಯಾ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಟೆಸ್ಟ್ ಚಾಂಪಿಯನ್‌ಶಿಫ್ ಫೈನಲ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ.
undefined
ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ ಹೋರಾಟ ಮಾಡಲಿದೆ. 2021ರ ಜೂನ್ ತಿಂಗಳಲ್ಲಿ ಫೈನಲ್ ಪಂದ್ಯ ನಡೆಯಲಿದೆ.
undefined
click me!