IPL ಇಬ್ಬರು ಸಾರ್ವಕಾಲಿಕ ಶ್ರೇಷ್ಠ ಆಟಗಾರರನ್ನು ಹೆಸರಿಸಿದ ವಿರಾಟ್ ಕೊಹ್ಲಿ..! ಧೋನಿ, ರೋಹಿತ್ ಅಲ್ಲವೇ ಅಲ್ಲ

Published : Apr 20, 2023, 04:38 PM IST

ಮೊಹಾಲಿ(ಏ.20): ಆಧುನಿಕ ಕ್ರಿಕೆಟ್‌ನ ಸೂಪರ್‌ ಸ್ಟಾರ್‌ ಕ್ರಿಕೆಟಿಗ ವಿರಾಟ್ ಕೊಹ್ಲಿ, ಇಂಡಿಯನ್ ಪ್ರೀಮಿಯರ್ ಲೀಗ್‌ ಟೂರ್ನಿಯಲ್ಲಿ ರನ್‌ ಮಳೆಯನ್ನೇ ಸುರಿಸಿದ್ದಾರೆ. ಐಪಿಎಲ್‌ನಲ್ಲಿ ಎಂ ಎಸ್ ಧೋನಿ, ಸುರೇಶ್ ರೈನಾ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಡ್ವೇನ್‌ ಬ್ರಾವೋ ಸೇರಿದಂತೆ ಹಲವು ಕ್ರಿಕೆಟಿಗರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹೀಗಿರುವಾಗಲೇ ಇವರೆಲ್ಲರನ್ನು ಬಿಟ್ಟು ವಿರಾಟ್ ಕೊಹ್ಲಿ, ಐಪಿಎಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರನ್ನು ಹೆಸರಿಸಿದ್ದಾರೆ, ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ..  

PREV
18
IPL ಇಬ್ಬರು ಸಾರ್ವಕಾಲಿಕ ಶ್ರೇಷ್ಠ ಆಟಗಾರರನ್ನು ಹೆಸರಿಸಿದ ವಿರಾಟ್ ಕೊಹ್ಲಿ..! ಧೋನಿ, ರೋಹಿತ್ ಅಲ್ಲವೇ ಅಲ್ಲ
Virat Kohli

ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ, ಪಂಜಾಬ್ ಕಿಂಗ್ಸ್‌ ಎದುರಿನ ಪಂದ್ಯಕ್ಕೂ ಮುನ್ನ, ಜಿಯೋ ಸಿನಿಮಾದ ಡಿಜಿಟಲ್‌ ಪ್ಲಾಟ್‌ಫಾರ್ಮ್‌ನಲ್ಲಿ ಐಪಿಎಲ್‌ ಕುರಿತಾಗಿ ಹಲವು ವಿಚಾರಗಳನ್ನು ಮನಬಿಚ್ಚಿ ಮಾತನಾಡಿದ್ದಾರೆ. 

28

ಈ ಸಂದರ್ಭದಲ್ಲಿ ಐಪಿಎಲ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎನ್ನುವ ಕ್ಲಿಷ್ಠಕರ ಪ್ರಶ್ನೆಗೆ ವಿರಾಟ್ ಕೊಹ್ಲಿ, ಒಬ್ಬರನ್ನು ಹೆಸರಿಸದೇ, ಇಬ್ಬರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಅದು ಧೋನಿ ಅಥವಾ ರೋಹಿತ್ ಶರ್ಮಾ ಅಲ್ಲ ಎನ್ನುವುದು ಅಚ್ಚರಿಯಾದರೂ ಸತ್ಯ.
 

38

ಐಪಿಎಲ್‌ನ ಇಬ್ಬರು ಸಾರ್ವಕಾಲಿಕ ಶ್ರೇಷ್ಠ ಆಟಗಾರರೆಂದರೆ ಅದು ಮಿಸ್ಟರ್ 360 ಖ್ಯಾತಿಯ ಎಬಿ ಡಿ ವಿಲಿಯರ್ಸ್‌ ಹಾಗೂ ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಾಲಿಂಗ ಎಂದು ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. 
 

48

ಎಬಿ ಡಿವಿಲಿಯರ್ಸ್‌, ವಿರಾಟ್ ಕೊಹ್ಲಿ ಜತೆ ನೂರಾರು ಐಪಿಎಲ್ ಪಂದ್ಯಗಳನ್ನಾಡಿದ್ದಾರೆ. ಎಬಿಡಿ ಒಟ್ಟು 184 ಐಪಿಎಲ್ ಪಂದ್ಯಗಳನ್ನಾಡಿ 39.71ರ ಬ್ಯಾಟಿಂಗ್ ಸರಾಸರಿಯಲ್ಲಿ 5162 ರನ್‌ ಬಾರಿಸಿದ್ದಾರೆ. ಇದಷ್ಟೇ ಅಲ್ಲದೇ ಹಲವಾರು ಪಂದ್ಯಗಳಲ್ಲಿ ಏಕಾಂಗಿಯಾಗಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. 
 

58

ಇನ್ನು ಡೆತ್‌ ಓವರ್‌ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿದ್ದ ಲಸಿತ್ ಮಾಲಿಂಗ ಕೂಡಾ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಏಕಾಂಗಿಯಾಗಿ ಗೆಲುವನ್ನು ತಂದುಕೊಟ್ಟಿದ್ದಾರೆ. ಮಾಲಿಂಗ ಒಟ್ಟು122 ಪಂದ್ಯಗಳನ್ನಾಡಿ 7.14ರ ಎಕನಮಿಯಲ್ಲಿ 170 ವಿಕೆಟ್ ಕಬಳಿಸಿ ಮಿಂಚಿದ್ದರು.
 

68

ಇನ್ನು ಸುನಿಲ್ ನರೈನ್ ಹಾಗೂ ರಶೀದ್ ಖಾನ್ ಈ ಇಬ್ಬರಲ್ಲಿ ಅತ್ಯುತ್ತಮ ಸ್ಪಿನ್ನರ್ ಯಾರು ಎನ್ನುವ ಪ್ರಶ್ನೆಗೆ ವಿರಾಟ್ ಕೊಹ್ಲಿ, ಗುಜರಾತ್ ಟೈಟಾನ್ಸ್ ತಂಡದ ರಶೀದ್ ಖಾನ್ ಒಳ್ಳೆಯ ಸ್ಪಿನ್ನರ್ ಎಂದು ಹೇಳಿದ್ದಾರೆ.

78

ಇನ್ನು ಐಪಿಎಲ್‌ನ ಸಾರ್ವಕಾಲಿಕ ಶ್ರೇಷ್ಠ ಆಲ್ರೌಂಡರ್ ಯಾರು ಎನ್ನುವ ಪ್ರಶ್ನೆಗೆ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಶೇನ್ ವಾಟ್ಸನ್ ಅವರ ಹೆಸರನ್ನು ಹೇಳಿದ್ದಾರೆ.

88

ಇನ್ನು ನೀವು ಯಾವ ತಂಡದ ಎದುರು ಆಡಲು ಇಷ್ಟಪಡುತ್ತೀರಾ ಎನ್ನುವ ಪ್ರಶ್ನೆಗೆ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಎಂದಿದ್ದಾರೆ. ಯಾಕೆಂದರೆ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಕೂಡಾ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories