Virat Kohli Playoff Stats: 2026ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ಅತ್ಯದ್ಭುತವಾಗಿದೆ. ಇದೀಗ ಆರ್‌ಸಿಬಿ ತಂಡವಿಂದು ಕ್ವಾಲಿಫೈಯರ್-1 ಪಂದ್ಯಕ್ಕೆ ಸಜ್ಜಾಗಿದೆ. ಹೀಗಿರುವಾಗಲೇ ವಿರಾಟ್ ಕೊಹ್ಲಿ ವಿಚಾರವಾಗಿ ಆರ್‌ಸಿಬಿ ತಂಡಕ್ಕೆ ಹೊಸ ತಲೆನೋವು ಶುರುವಾಗಿದೆ.
ಧರ್ಮಶಾಲಾದಲ್ಲಿಂದು ಹಾಲಿ ಚಾಂಪಿಯನ್ ಆರ್‌ಸಿಬಿ ಹಾಗೂ ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಹೀಗಿರುವಾಗಲೇ ಪ್ಲೇ ಆಫ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನ ಆರ್‌ಸಿಬಿಗೆ ಹೊರ ತಲೆನೋವು ತಂದುಕೊಟ್ಟಿದೆ. ಇಂದಿನ ಪಂದ್ಯದಲ್ಲಿ ಒಂದುವೇಳೆ ಗುಜರಾತ್ ಟೈಟಾನ್ಸ್ ಆರಂಭದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಕಬಳಿಸಿದರೆ, ಫೈನಲ್ ಪ್ರವೇಶದ ಹಾದಿ ಮತ್ತಷ್ಟು ಸುಗಮವಾಗಲಿದೆ.
26
ವಿರಾಟ್ ಕೊಹ್ಲಿ ಪ್ಲೇ ಆಫ್ ರೆಕಾರ್ಡ್ ಹೇಗಿದೆ?
ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಇದುವರೆಗೂ 17 ಪ್ಲೇ ಆಫ್ ಮ್ಯಾಚ್‌ಗಳನ್ನಾಡಿ ಕೇವಲ 26.40 ಬ್ಯಾಟಿಂಗ್ ಸರಾಸರಿಯಲ್ಲಿ 396 ರನ್ ಬಾರಿಸಿದ್ದಾರೆ. ಈ 17 ಪ್ಲೇ ಆಫ್ ಮ್ಯಾಚ್‌ಗಳ ಪೈಕಿ ಕೊಹ್ಲಿ ಕೇವಲ ಎರಡು ಬಾರಿ ಮಾತ್ರ 50+ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.
36
ಪ್ಲೇ ಆಫ್‌ನಲ್ಲಿ ಆರ್‌ಸಿಬಿ ಟ್ರ್ಯಾಕ್ ರೆಕಾರ್ಡ್ ಹೇಗಿದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೂ 17 ಐಪಿಎಲ್ ಪ್ಲೇ ಆಫ್ ಪಂದ್ಯಗಳನ್ನಾಡಿದ್ದು ಈ ಪೈಕಿ ಕೇವಲ ಏಳು ಪಂದ್ಯಗಳಲ್ಲಿ ಮಾತ್ರ ಗೆಲುವಿನ ರುಚಿ ಕಂಡಿದೆ. ಇನ್ನುಳಿದ 10 ಪಂದ್ಯಗಳಲ್ಲಿ ಆರ್‌ಸಿಬಿ ಸೋಲು ಕಂಡಿದೆ. ಪ್ಲೇ ಆಫ್‌ನಲ್ಲಿ ಆರ್‌ಸಿಬಿ ಗೆಲುವಿನ ಪ್ರತಿಶತ 41.18% ಆಗಿದೆ.
19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 14 ಪಂದ್ಯಗಳನ್ನಾಡಿ 50.63ರ ಬ್ಯಾಟಿಂಗ್ ಸರಾಸರಿಯಲ್ಲಿ 557 ರನ್ ಸಿಡಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ 4 ಅರ್ಧಶತಕಗಳು ಸೇರಿವೆ.
56
ಫೈನಲ್ ಟಿಕೆಟ್ ತಂದುಕೊಡಲಿದೆ ಕೊಹ್ಲಿ ವಿಕೆಟ್:
ವಿರಾಟ್ ಕೊಹ್ಲಿ ಆರ್‌ಸಿಬಿ ತಂಡದ ರನ್ ಮಷೀನ್ ಆಗಿ ಗುರುತಿಸಿಕೊಂಡಿದ್ದಾರೆ. ಪ್ಲೇ ಆಫ್‌ನಲ್ಲಿ ಕೊಹ್ಲಿ ರೆಕಾರ್ಡ್ ಸಾಮಾನ್ಯವಾಗಿದ್ದರೂ, ಯಾವ ಕ್ಷಣದಲ್ಲಿ ಬೇಕಿದ್ದರೂ ಕಮ್‌ಬ್ಯಾಕ್ ಮಾಡುವ ಕ್ಷಮತೆ ಕೊಹ್ಲಿಗಿದೆ. ಒಂದು ವೇಳೆ ವಿರಾಟ್ ಕೊಹ್ಲಿ ವಿಕೆಟ್ ಆರಂಭದಲ್ಲೇ ಗುಜರಾತ್ ಕಬಳಿಸಲು ಯಶಸ್ವಿಯಾದರೆ, ಗಿಲ್ ಪಡೆಯ ಫೈನಲ್ ಟಿಕೆಟ್ ಬಹುತೇಕ ಖಚಿತವಾಗಲಿದೆ.
66
ಕ್ವಾಲಿಫೈಯರ್-1 ಮ್ಯಾಚ್ ಎಲ್ಲಿ, ಎಷ್ಟು ಗಂಟೆಗೆ ಆರಂಭ?
ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಕ್ವಾಲಿಫೈಯರ್-1 ಪಂದ್ಯವು ಇಂದು ಸಂಜೆ 7.30ರಿಂದ ಆರಂಭವಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ HPCA ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.