ಹಿಂದಿನ ದಾಖಲೆಗಳ ಆಧಾರದ ಮೇಲೆ ಆಟಗಾರರ ಆಯ್ಕೆ ಮಾಡುವ ಕಾಲ ಮುಗಿದಿದೆ. ಈಗ ಚೆನ್ನಾಗಿ ಆಡುವವರಿಗೆ ಮಾತ್ರ ಭಾರತ ತಂಡದಲ್ಲಿ ಸ್ಥಾನ ಸಿಗುತ್ತದೆ. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ಗೆದ್ದ ಉತ್ಸಾಹದಲ್ಲಿರುವ ಟೀಮ್ ಇಂಡಿಯಾ ಭಾನುವಾರ ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೆ ತಂಡಕ್ಕೆ ಮರಳುತ್ತಾರಾ ಎಂಬ ಕುತೂಹಲ ಎಲ್ಲರಲ್ಲೂ ಇದೆ.
ಗಾಯದ ಕಾರಣ ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಆಡಲಿಲ್ಲ. ಆದರೆ, ಭಾನುವಾರ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಒಂದು ವೇಳೆ ಮೊದಲ ಏಕದಿನ ಪಂದ್ಯದಲ್ಲಿ ಗೆದ್ದ ತಂಡವನ್ನೇ ಕಣಕ್ಕಿಳಿಸಲು ನಿರ್ಧರಿಸಿದರೆ ಕೊಹ್ಲಿ ಆಡುವುದು ಅನುಮಾನ.
24
ಚಾಂಪಿಯನ್ಸ್ ಟ್ರೋಫಿಗೆ ಮುನ್ನ
ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಎರಡು ಏಕದಿನ ಪಂದ್ಯಗಳಲ್ಲಿ ಆಡುವ ಮೂಲಕ ಕೊಹ್ಲಿ ಸಿದ್ಧತೆ ನಡೆಸುವ ಸಾಧ್ಯತೆ ಇದೆ.
34
ಕೊಹ್ಲಿ ಬಂದ್ರೆ ಜೈಸ್ವಾಲ್‌ಗೆ ಜಾಗ?
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ ಜೈಸ್ವಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಆದರೆ ಹೆಚ್ಚು ರನ್ ಗಳಿಸಲಿಲ್ಲ. ಕೊಹ್ಲಿ ಬಂದರೆ ಜೈಸ್ವಾಲ್‌ಗೆ ಸ್ಥಾನ ಸಿಗುವುದು ಅನುಮಾನ.
44
ಶಮಿ, ಜಡೇಜಾ ಇರ್ತಾರ?
ಕಟಕ್ ಏಕದಿನ ಪಂದ್ಯದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗಬಹುದು. ಶಮಿ, ಜಡೇಜಾ ಬದಲು ಅರ್ಷ್‌ದೀಪ್, ವರುಣ್ ಚಕ್ರವರ್ತಿ ಆಡುವ ಸಾಧ್ಯತೆ ಇದೆ.