ಕೊಹ್ಲಿ-ರೋಹಿತ್‌ಗೆ ಶಾಕ್: 2027ರ ವಿಶ್ವಕಪ್ ತಂಡದಿಂದಲೂ ಔಟ್?

Published : Aug 10, 2025, 04:45 PM IST

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಭಾರತಕ್ಕೆ ಅನೇಕ ಗೆಲುವುಗಳನ್ನು ತಂದುಕೊಟ್ಟಿದ್ದಾರೆ. ಪ್ರಸ್ತುತ, ಅವರು ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಆಡುತ್ತಿದ್ದಾರೆ. ಆದರೆ, ಕೊಹ್ಲಿ ಮತ್ತು ರೋಹಿತ್ 2027ರ ಏಕದಿನ ವಿಶ್ವಕಪ್‌ನ ಭಾರತ ತಂಡದಲ್ಲಿ ಸ್ಥಾನ ಪಡೆಯೋದು ಡೌಟ್ ಎನ್ನಲಾಗುತ್ತಿದೆ

PREV
15
ಭಾರತ ಕ್ರಿಕೆಟ್ ದಿಗ್ಗಜರು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟೆಸ್ಟ್, ಟಿ20 ಅಂತರರಾಷ್ಟ್ರೀಯ ಮಾದರಿಗಳಿಂದ ನಿವೃತ್ತಿ ಹೊಂದಿದ್ದಾರೆ. ಆದರೆ, ಏಕದಿನ ಮಾದರಿಯನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಅಭಿಮಾನಿಗಳು ಅವರನ್ನು ಮತ್ತೆ ಮೈದಾನದಲ್ಲಿ ನೋಡಬೇಕಾದರೆ ಅಕ್ಟೋಬರ್ ವರೆಗೆ ಕಾಯಬೇಕು.
25

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಈಗ ನೇರವಾಗಿ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಆಡಲಿದ್ದಾರೆ.

35

2027ರ ಏಕದಿನ ವಿಶ್ವಕಪ್‌ನ ದೃಷ್ಟಿಯಿಂದ ಏಕದಿನ ತಂಡದಲ್ಲಿ ಮುಂದುವರಿಯಬೇಕಾದರೆ ಹಿರಿಯ ಆಟಗಾರರು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಈ ವರ್ಷದ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಡ್ಡಾಯವಾಗಿ ಆಡಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

45

ಬಿಸಿಸಿಐ ಮತ್ತು ಟೀಂ ಮ್ಯಾನೇಜ್‌ಮೆಂಟ್ 2027ರ ವಿಶ್ವಕಪ್‌ಗಾಗಿ ಯುವ ಕ್ರಿಕೆಟಿಗರೊಂದಿಗೆ ಬಲಿಷ್ಠ ತಂಡವನ್ನು ಸಿದ್ಧಪಡಿಸುತ್ತಿದೆ.

55

ಪ್ರಸ್ತುತ ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರ ವೃತ್ತಿಜೀವನದ ಬಗ್ಗೆ ಪ್ರಶ್ನೆಗಳು ಉದ್ಭವಿಸಿದ್ದು, 2027ರ ಏಕದಿನ ವಿಶ್ವಕಪ್‌ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯೋದು ಅನುಮಾನ ಎನಿಸಿದೆ.

Read more Photos on
click me!

Recommended Stories