ಭಾರತ ಟಿ20 ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಈಗಲೂ ತಂಡದ ಪ್ರಮುಖ ಆಟಗಾರನಾಗಿದ್ದು, ಅವರ ಪಾತ್ರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಟಿ20 ತಂಡದ ನೂತನ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಹ್ಲಿ ಇದುವರೆಗೆ ಏನು ಮಾಡುತ್ತಿದ್ದರೋ, ಅದೇ ಜವಾಬ್ದಾರಿ ನಿಭಾಯಿಸಲಿದ್ದಾರೆ. ಅವರು ತಂಡದ ಪ್ರಮುಖ ಆಟಗಾರ. ಅವರು ಪ್ರತಿ ಬಾರಿಯೂ ತಂಡಕ್ಕೆ ನೆರವಾಗಿದ್ದಾರೆ. ತಮ್ಮ ಅನುಭವದ ಮೂಲಕ ತಂಡಕ್ಕೆ ಶಕ್ತಿ ತುಂಬಲಿದ್ದಾರೆ’ ಎಂದು ರೋಹಿತ್ ಹೇಳಿದರು.
ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ ಬಳಿಕ ಟೀಂ ಇಂಡಿಯಾ ಮತ್ತಷ್ಟು ಬಲಿಷ್ಠವಾಗಲಿದೆ ಎನ್ನುವ ವಿಶ್ವಾಸವಿದೆ. ಯಾಕೆಂದರೆ ವಿರಾಟ್ ಕೊಹ್ಲಿ ಸಾಕಷ್ಟು ಅನುಭವಿ ಆಟಗಾರರಾಗಿದ್ದು, ಅವರ ಉಪಸ್ಥಿತಿ ತಂಡದ ಪಾಲಿಗೆ ಪರಿಣಾಮಕಾರಿಯಾಗಿರಲಿದೆ ಎಂದು ರೋಹಿತ್ ಅಭಿಪ್ರಾಯಪಟ್ಟಿದ್ದಾರೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಅಭಿಯಾನ ಅಂತ್ಯವಾಗುತ್ತಿದ್ದಂತೆಯೇ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಸದ್ಯದಲ್ಲಿಯೇ ಏಕದಿನ ತಂಡದ ನಾಯಕತ್ವಕ್ಕೂ ಕೊಹ್ಲಿ ಗುಡ್ ಬೈ ಹೇಳಲಿದ್ದಾರೆ ಎನ್ನುವ ಗಾಳಿ ಸುದ್ದಿಯೂ ಹರಿದಾಡುತ್ತಿದೆ.
Virat Kohli
ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ತವರಿನಲ್ಲಿ ಇಂದಿನಿಂದ(ನ.17) ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ದದ ಮೂರು ಪಂದ್ಯಗಳ ಟಿ20 ಸರಣಿಯಿಂದ ವಿಶ್ರಾಂತಿ ಬಯಸಿ ಕೊಹ್ಲಿ ತಂಡದಿಂದ ಹೊರಗುಳಿದಿದ್ದಾರೆ.
Dravid and Rohit
ಇದೇ ವೇಳೆ, ಮೂರು ಮಾದರಿಗಳಲ್ಲಿ ಬೇರೆ ಬೇರೆ ತಂಡಗಳನ್ನು ಆಡಿಸುವ ಯೋಚನೆ ಸದ್ಯಕ್ಕಿಲ್ಲ ಎಂದು ಟೀಂ ಇಂಡಿಯಾ ನೂತನ ಹೆಡ್ ಕೋಚ್ ರಾಹುಲ್ ದ್ರಾವಿಡ್ ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯಕ್ಕೆ ಈ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ನಮ್ಮಲ್ಲಿ ಕೇವಲ ಒಂದು ಮಾದರಿಯಲ್ಲಿ ಆಡುತ್ತಿರುವ ಆಟಗಾರರಿದ್ದಾರೆ. ರೋಹಿತ್ ಶರ್ಮಾರಂತಹ ಆಟಗಾರರು 3 ಮಾದರಿಗಳಲ್ಲಿ ಆಡಬೇಕು ಎಂದು ಹೇಳಿದ್ದಾರೆ.