ವಿರಾಟ್ ಕೊಹ್ಲಿ ಫ್ಯಾನ್ಸ್‌ಗಿದು ಬ್ಯಾಡ್‌ ನ್ಯೂಸ್; ಕಿಂಗ್ ಕೊಹ್ಲಿ ಟೀಂ ಇಂಡಿಯಾದಿಂದ ಔಟ್..!

Published : Jun 04, 2026, 11:49 AM IST

ಬೆಂಗಳೂರು: ಇತ್ತೀಚೆಗಷ್ಟೇ ನಡೆದ 19ನೇ ಸೀಸನ್‌ ಐಪಿಎಲ್ ಟೂರ್ನಿಯಲ್ಲಿ ಅಬ್ಬರಿಸಿದ್ದ ವಿರಾಟ್ ಕೊಹ್ಲಿ, ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಗೆ ಸಜ್ಜಾಗಿದ್ದರು. ಹೀಗಿರುವಾಗಲೇ ಕಿಂಗ್ ಕೊಹ್ಲಿ ಫ್ಯಾನ್ಸ್‌ ಪಾಲಿಗೆ ಒಂದು ಬ್ಯಾಡ್ ನ್ಯೂಸ್ ಹೊರಬಿದ್ದಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ. 

PREV
16
ಆರ್‌ಸಿಬಿಯನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಕೊಹ್ಲಿ

ಆರ್‌ಸಿಬಿ ರನ್ ಮಷೀನ್ ವಿರಾಟ್‌ ಕೊಹ್ಲಿ 19ನೇ ಸೀಸನ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡನೇ ಬಾರಿ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕಳೆದೆರಡೂ ಸೀಸನ್‌ನಲ್ಲೂ ಆರ್‌ಸಿಬಿ ಪರ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಆಗಿ ಕೊಹ್ಲಿ ಹೊರಹೊಮ್ಮಿದ್ದರು.

26
ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಯಿಂದ ಕೊಹ್ಲಿ ಔಟ್

ಐಪಿಎಲ್ ಟೂರ್ನಿ ಮುಕ್ತಾಯವಾದ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ತವರಿನಲ್ಲಿ ಇದೇ ಜೂನ್ 13ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದ್ದರು. ಹೀಗಿರುವಾಗಲೇ ಸ್ನಾಯು ಸೆಳೆತಕ್ಕೆ ಒಳಗಾಗಿರುವ ವಿರಾಟ್ ಕೊಹ್ಲಿ, ಆಫ್ಘಾನ್ ಎದುರಿನ ಸರಣಿಗೆ ಭಾರತ ತಂಡದಿಂದ ಹೊರಬಿದ್ದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

36
ಸ್ನಾಯು ಸೆಳೆತದಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ

ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಧರ್ಮಶಾಲಾದಲ್ಲಿ ನಿಗದಿಯಾಗಿತ್ತು. ಸ್ನಾಯು ಸೆಳೆತಕ್ಕೆ ಒಳಗಾಗಿರುವ ವಿರಾಟ್ ಕೊಹ್ಲಿ, ಆಫ್ಘಾನ್ ಎದುರಿನ ಮೂರು ಪಂದ್ಯಗಳ ಸರಣಿಗೆ ಸಂಪೂರ್ಣವಾಗಿ ಅಲಭ್ಯರಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ.

46
ರೋಹಿತ್ ಶರ್ಮಾ ಫಿಟ್ನೆಸ್ ಬಗ್ಗೆ ಶುರುವಾಯ್ತು ಚರ್ಚೆ

ಇನ್ನೊಂದೆಡೆ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಕೂಡಾ ಈ ಸರಣಿಯಲ್ಲಿ ಪಾಲ್ಗೊಳ್ಳುವುದು ಇನ್ನೂ ಖಚಿತವಾಗಿಲ್ಲ. ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇಬ್ಬರೂ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ರೋಹಿತ್ ಶರ್ಮಾ ಐಪಿಎಲ್ ವೇಳೆಯಲ್ಲಿಯೇ ಗಾಯಗೊಂಡಿದ್ದರು. ಇದೀಗ ಹಿಟ್‌ಮ್ಯಾನ್ ಸಂಪೂರ್ಣ ಫಿಟ್ ಆಗಿದ್ದಾರೆಯೇ ಅಥವಾ ಇಲ್ಲವೇ ಎನ್ನುವುದರ ಬಗ್ಗೆ ಸ್ಪಷ್ಟ ಚಿತ್ರಣ ಹೊರಬಿದ್ದಿಲ್ಲ.

56
ಆಫ್ಘಾನ್ ಎದುರಿನ ಸರಣಿಗೆ ರೋ-ಕೊ ಜೋಡಿ ಇಲ್ಲ

2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣ್ಣಿಟ್ಟಿದ್ದಾರೆ. ಇದೇ ಕಾರಣಕ್ಕಾಗಿ ಈ ಇಬ್ಬರು ಕ್ರಿಕೆಟಿಗರು ಅಂತಾರಾಷ್ಟ್ರೀಯ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಆದರೆ ರೋ-ಕೊ ಜೋಡಿ ಇದೀಗ ಆಫ್ಘಾನಿಸ್ತಾನ ಎದುರಿನ ಸರಣಿಯಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುವುದಿಲ್ಲ ಎನ್ನುವುದು ಖಚಿತವಾಗಿದೆ.

66
ಭಾರತ-ಆಫ್ಘಾನಿಸ್ತಾನ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ:

ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜೂನ್ 13ರಿಂದ ಆರಂಭವಾಗಲಿದೆ. ಜೂನ್ 13ರಂದು ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಧರ್ಮಶಾಲಾ ಆತಿಥ್ಯ ವಹಿಸಿದೆ. ಇನ್ನು ಜೂನ್ 17ರಂದು ಲಖನೌದಲ್ಲಿ ಹಾಗೂ ಜೂನ್ 20ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories