ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ 10 ತಂಡಗಳು ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿವೆ. 2019ರ ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತಿಹೆಚ್ಚು ರನ್ ಬಾರಿಸಿದ ಟಾಪ್ 5 ಬ್ಯಾಟರ್ ಯಾರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. ತುಂಬಾ ಅಚ್ಚರಿಯ ಸಂಗತಿಯೆಂದರೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ಬಲಿಷ್ಠ ಆಸ್ಟ್ರೇಲಿಯಾದ ತಂಡದ ಯಾವೊಬ್ಬ ಬ್ಯಾಟರ್ ಕೂಡಾ ಟಾಪ್ 5 ಗರಿಷ್ಠ ರನ್ ಸರದಾರರ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ ಎನ್ನುವುದು ವಿಶೇಷ.
ಐರ್ಲೆಂಡ್‌ನ ಸ್ಪೋಟಕ ಬ್ಯಾಟರ್ ಪೌಲ್ ಸ್ಟರ್ಲಿಂಗ್, 2019ರ ವಿಶ್ವಕಪ್ ಬಳಿಕ 38 ಇನಿಂಗ್ಸ್‌ಗಳನ್ನಾಡಿ 42.16ರ ಬ್ಯಾಟಿಂಗ್ ಸರಾಸರಿಯಲ್ಲಿ 1560 ರನ್ ಬಾರಿಸಿ ಗರಿಷ್ಠ ರನ್ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.
25
4. ವಿರಾಟ್ ಕೊಹ್ಲಿ:
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, 2019ರ ಐಸಿಸಿ ಏಕದಿನ ವಿಶ್ವಕಪ್ ಬಳಿಕ 37 ಇನಿಂಗ್ಸ್‌ಗಳನ್ನಾಡಿ 46.05ರ ಬ್ಯಾಟಿಂಗ್ ಸರಾಸರಿಯಲ್ಲಿ 1612 ರನ್ ಬಾರಿಸಿ, 4ನೇ ಸ್ಥಾನದಲ್ಲಿದ್ದಾರೆ.
35
3. ನಿಕೋಲಸ್ ಪೂರನ್:
ವೆಸ್ಟ್ ಇಂಡೀಸ್ ಮಧ್ಯಮ ಕ್ರಮಾಂಕದ ಸ್ಪೋಟಕ ಬ್ಯಾಟರ್ ನಿಕೋಲಸ್ ಪೂರನ್, 49 ಇನಿಂಗ್ಸ್‌ಗಳನ್ನಾಡಿ 38.47ರ ಬ್ಯಾಟಿಂಗ್ ಸರಾಸರಿಯಲ್ಲಿ 1616 ರನ್ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ.
45
2. ಬಾಬರ್ ಅಜಂ:
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಬಾಬರ್ ಅಜಂ, 2019ರ ವಿಶ್ವಕಪ್ ಬಳಿಕ ಕೇವಲ 28 ಇನಿಂಗ್ಸ್‌ಗಳನ್ನಾಡಿ 72.15ರ ಬ್ಯಾಟಿಂಗ್ ಸರಾಸರಿಯಲ್ಲಿ 1876 ರನ್ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.
55
1. ಶಾಯ್ ಹೋಪ್:
ವೆಸ್ಟ್ ಇಂಡೀಸ್ ತಂಡದ ನಾಯಕ ಶಾಯ್ ಹೋಪ್, 55 ಇನಿಂಗ್ಸ್‌ಗಳನ್ನಾಡಿ 52.28ರ ಬ್ಯಾಟಿಂಗ್ ಸರಾಸರಿಯಲ್ಲಿ 2419 ರನ್ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆದರೆ ದುರಾದೃಷ್ಟವಶಾತ್, ವೆಸ್ಟ್ ಇಂಡೀಸ್ ತಂಡವು 2023ರ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ.