Team India ಏಕದಿನ ನಾಯಕತ್ವಕ್ಕೂ ವಿರಾಟ್‌ ಕೊಹ್ಲಿ ಗುಡ್‌ಬೈ?

Suvarna News   | Asianet News
Published : Nov 05, 2021, 02:29 PM IST

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಯಲ್ಲಿ ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ (Team India) ಸೆಮಿಫೈನಲ್ ಪ್ರವೇಶಿಸಲು ಪರದಾಡುತ್ತಿದೆ. ಸೂಪರ್ 12 ಹಂತದ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ (Pakistan) ಹಾಗೂ ನ್ಯೂಜಿಲೆಂಡ್ (New Zealand) ಎದುರು ವಿರಾಟ್ ಕೊಹ್ಲಿ ಪಡೆ ಸೋಲಿನ ಕಹಿಯುಂಡಿದೆ. ಈ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿಯುವುದಾಗಿ ಈಗಾಗಲೇ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಇದೆಲ್ಲದರ ನಡುವೆ ವಿರಾಟ್ ಕೊಹ್ಲಿ ಏಕದಿನ ನಾಯಕತ್ವದಿಂದಲೂ ಕೆಳಗಿಳಿಯುವ ಕುರಿತಂತೆ ಗಾಳಿ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

PREV
16
Team India ಏಕದಿನ ನಾಯಕತ್ವಕ್ಕೂ ವಿರಾಟ್‌ ಕೊಹ್ಲಿ ಗುಡ್‌ಬೈ?

ಟಿ20 ವಿಶ್ವಕಪ್‌ ಬಳಿಕ ಭಾರತ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿರುವ ವಿರಾಟ್‌ ಕೊಹ್ಲಿ, ಏಕದಿನ ತಂಡದ ನಾಯಕತ್ವವನ್ನೂ ಬಿಡಲಿದ್ದು ರೋಹಿತ್‌ ಶರ್ಮಾ ಟಿ20 ಹಾಗೂ ಏಕದಿನ ತಂಡಗಳ ನಾಯಕರಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

26

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ವಿರಾಟ್ ಕೊಹ್ಲಿ ತಾವು ಟಿ20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್‌ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕರಾಗಿ ಮುಂದುವರೆಯುವುದಾಗಿ ತಿಳಿಸಿದ್ದರು.

36

ಇದೀಗ ನೂತನ ಕೋಚ್‌ ರಾಹುಲ್‌ ದ್ರಾವಿಡ್‌ ಸೀಮಿತ ಓವರ್‌ ತಂಡಗಳಿಗೆ ಒಬ್ಬನೇ ನಾಯಕ ಇರಬೇಕೆಂದು ಉದ್ದೇಶಿಸಿದ್ದು, ಅವರ ಸಲಹೆ ಮೇರೆಗೆ ಬಿಸಿಸಿಐ ಕೊಹ್ಲಿಯನ್ನು ಏಕದಿನ ನಾಯಕತ್ವ ತ್ಯಜಿಸುವಂತೆ ಸೂಚಿಸಲಿದೆ ಎಂದು ವರದಿಗಳಲ್ಲಿ ಹೇಳಲಾಗಿದೆ. 

46

ಇತ್ತೀಚೆಗೆ ಕೋಚ್‌ ಹುದ್ದೆಗೆ ನಡೆದ ಸಂದರ್ಶನದ ವೇಳೆ ಬಿಸಿಸಿಐನ ಕ್ರಿಕೆಟ್‌ ಸಲಹಾ ಸಮಿತಿ(ಸಿಎಸಿ) ದ್ರಾವಿಡ್‌ರನ್ನು ಸೀಮಿತ ಓವರ್‌ ನಾಯಕತ್ವದ ಬಗ್ಗೆ ಪ್ರಶ್ನಿಸಿದಾಗ ಅವರು ಏಕದಿನ, ಟಿ20 ಎರಡೂ ತಂಡಗಳಿಗೆ ಒಬ್ಬರೇ ನಾಯಕರಿದ್ದರೆ ಸೂಕ್ತ. ರೋಹಿತ್‌ ಉತ್ತಮ ಆಯ್ಕೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

56

ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಒಂದೇ ಒಂದು ಮಹತ್ವದ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ. 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ, 2019ರ ಐಸಿಸಿ ಏಕದಿನ ವಿಶ್ವಕಪ್ ಹಾಗೂ 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಕಪ್‌ ಗೆಲ್ಲಲು ವಿಫಲವಾಗಿತ್ತು.
 

66

2023ರಲ್ಲಿ ಏಕದಿನ ವಿಶ್ವಕಪ್ ಟೂರ್ನಿಯು ಭಾರತದಲ್ಲೇ ಜರುಗಲಿದ್ದು, ಮುಂಬರುವ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಸೀಮಿತ ಓವರ್‌ಗಳ ತಂಡದ ನಾಯಕತ್ವವನ್ನು ಒಬ್ಬರಿಗೆ ನೀಡಲು ಬಿಸಿಸಿಐ ಒಲವು ತೋರಿದೆ ಎನ್ನಲಾಗಿದೆ. 
 

Read more Photos on
click me!

Recommended Stories