ವಿಜಯ್ ಹಜಾರೆ ಟ್ರೋಫಿ: ಎರಡು ಪಂದ್ಯಗಳಿಂದ ಕೊಹ್ಲಿ ಗಳಿಸಿದ ಪ್ರೈಜ್ ಮನಿ ಎಷ್ಟು?

Published : Dec 28, 2025, 03:20 PM IST

ಬೆಂಗಳೂರು: ಬರೋಬ್ಬರಿ 15 ವರ್ಷಗಳ ಬಳಿಕ ಮೊದಲ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಪಾಲ್ಗೊಂಡ ವಿರಾಟ್ ಕೊಹ್ಲಿ ಅದ್ಬುತ ಪ್ರದರ್ಶನದ ಮೂಲಕ ಮಿಂಚಿದ್ದಾರೆ. ಬನ್ನಿ ನಾವಿಂದು ಟೂರ್ನಿಯಲ್ಲಿ ಕೊಹ್ಲಿ ಗಳಿಸಿದ ಒಟ್ಟು ಪ್ರೈಜ್ ಮನಿ ಎಷ್ಟು ಎನ್ನುವುದನ್ನು ನೋಡೋಣ. 

PREV
17
ಗುಜರಾತ್ ಎದುರು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಕೊಹ್ಲಿ!

2025-26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಡೆಲ್ಲಿ ಪರ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಎರಡನೇ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

27
ಗುಜರಾತ್ ಎದುರು ಮಿಂಚಿದ ಕೊಹ್ಲಿ

ಗುಜರಾತ್ ಎದುರಿನ ಎರಡನೇ ಪಂದ್ಯದಲ್ಲಿ ಡೆಲ್ಲಿ ತಂಡವು ಸಂಕಷ್ಟದಲ್ಲಿದ್ದಾಗ ಕಣಕ್ಕಿಳಿದ ಕೊಹ್ಲಿ ಕೇವಲ 61 ಎಸೆತಗಳಲ್ಲಿ 77 ರನ್ ಸಿಡಿಸುವ ಮೂಲಕ ತಂಡ ಸುಭದ್ರ ಸ್ಥಿತಿಗೆ ತಂದು ನಿಲ್ಲಿಸುವಲ್ಲಿ ಕೊಹ್ಲಿ ಯಶಸ್ವಿಯಾಗಿದ್ದರು.

37
ವಿಜಯ್ ಹಜಾರೆಯಲ್ಲಿ ಕೊಹ್ಲಿ ಒಂದು ಸಾವಿರ ರನ್

ಇನ್ನು ಇದೇ ಪಂದ್ಯದಲ್ಲಿ ಕೊಹ್ಲಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿ ಕೇವಲ 15 ಇನ್ನಿಂಗ್ಸ್‌ಗಳಲ್ಲಿ ಒಂದು ಸಾವಿರ ರನ್ ಪೂರೈಸುವಲ್ಲಿ ಯಶಸ್ವಿಯಾದರು.

47
ಪಂತ್ ಪಡೆಗೆ ಭರ್ಜರಿ ಜಯ

ಗುಜರಾತ್ ಎದುರಿನ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ತಂಡವು 7 ರನ್ ರೋಚಕ ಜಯ ಸಾಧಿಸಿತು. 255 ರನ್ ಗುರಿ ಬೆನ್ನತ್ತಿದ ಗುಜರಾತ್ ತಂಡವು 247 ರನ್‌ಗೆ ಸರ್ವಪತನ ಕಂಡಿತು.

57
ಕೊಹ್ಲಿಗೆ ಒಲಿದ ಪಂದ್ಯಶ್ರೇಷ್ಠ ಪ್ರಶಸ್ತಿ

ವಿರಾಟ್ ಕೊಹ್ಲಿ ಗುಜರಾತ್ ಎದುರು ತಾಳ್ಮೆಯ ಜತೆಗೆ ಜವಾಬ್ದಾರಿಯುತ ಜತೆಯಾಟ ನಿಭಾಯಿಸಿದ್ದು ಹಾಗೂ ಒಂದು ಸಾವಿರ ರನ್ ಮೈಲಿಗಲ್ಲು ತಲುಪಿದ್ದಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದರು.

67
ಕೊಹ್ಲಿಗೆ ಸಿಕ್ಕ ಪ್ರೈಜ್ ಮನಿ ಎಷ್ಟು?

ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ 10 ಸಾವಿರ ರುಪಾಯಿ ನಗದು ಬಹುಮಾನ ನೀಡಲಾಗುತ್ತದೆ. ಅದರಂತೆ ಕೊಹ್ಲಿಗೂ ಕೂಡ 10,000 ನಗದು ಬಹುಮಾನ ಸಿಕ್ಕಿತು.

77
ಭರ್ಜರಿ ಫಾರ್ಮ್‌ನಲ್ಲಿರುವ ಕೊಹ್ಲಿ

ವಿರಾಟ್ ಕೊಹ್ಲಿ ಆಂಧ್ರ ಪ್ರದೇಶ ಎದುರಿನ ಮೊದಲ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ಮುಂಬರುವ ಕಿವೀಸ್ ಎದುರಿನ ಸರಣಿಗೆ ಸಜ್ಜಾಗಿದ್ದಾರೆ. 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories