ಡೆಲ್ಲಿ ಪರ ವಿರಾಟ್ ಕೊಹ್ಲಿ ಮತ್ತೆ ವಿಜಯ್ ಹಜಾರೆ ಟ್ರೋಫಿ ಆಡೋದು ಯಾವಾಗ?

Published : Dec 28, 2025, 05:22 PM IST

ಬೆಂಗಳೂರು: ಭಾರತದ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ ಬರೋಬ್ಬರಿ 15 ವರ್ಷಗಳ ಬಳಿಕ ಮೊದಲ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಪಾಲ್ಗೊಂಡು ಗಮನಾರ್ಹ ಪ್ರದರ್ಶನ ತೋರಿದ್ದಾರೆ. ಸದ್ಯ ಬಿಡುವು ಪಡೆದುಕೊಂಡಿರುವ ಕೊಹ್ಲಿ ಮತ್ತೆ ವಿಜಯ್ ಹಜಾರೆ ಟ್ರೋಫಿ ಟೂರ್ನಿ ಆಡೋದು ಯಾವಾಗ ನೋಡೋಣ ಬನ್ನಿ.

PREV
16
ಕೊಹ್ಲಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಗೆ ಕಮ್‌ಬ್ಯಾಕ್

ಭಾರತ ತಂಡದ ರನ್ ಮಷೀನ್ ವಿರಾಟ್ ಕೊಹ್ಲಿ 2010ರ ಬಳಿಕ ಅಂದರೆ ಬರೋಬ್ಬರಿ 15 ವರ್ಷಗಳ ಬಳಿಕ ಈ ಬಾರಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಡೆಲ್ಲಿ ಪರ ಕಣಕ್ಕಿಳಿದು ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ.

26
ಎರಡು ಪಂದ್ಯಗಳಲ್ಲೇ ಇಂಪ್ಯಾಕ್ಟ್ ಮಾಡಿದ ಕೊಹ್ಲಿ

ವಿಜಯ್ ಹಜಾರೆ ಟೂರ್ನಿಯಲ್ಲಿ ಕೊಹ್ಲಿ ಆಡಿದ ಎರಡು ಪಂದ್ಯಗಳಲ್ಲಿ ಒಂದು ಶತಕ ಹಾಗೂ ಅರ್ಧಶತಕ ಸಹಿತ 208 ರನ್ ಸಿಡಿಸುವ ಮೂಲಕ ಡೆಲ್ಲಿ ತಂಡವು ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಮೂಲಕ ಟೂರ್ನಿಯಲ್ಲಿ ಕೊಹ್ಲಿ ಇಂಪ್ಯಾಕ್ಟ್ ಮಾಡಿದ್ದಾರೆ.

36
ದಾಖಲೆ ಬರೆದ ಕಿಂಗ್ ಕೊಹ್ಲಿ:

ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸ್‌ಲೆನ್ಸ್ ಮೈದಾನದಲ್ಲಿ ಆಂಧ್ರಪ್ರದೇಶ ಎದುರಿನ ಪಂದ್ಯದಲ್ಲಿ ಕೊಹ್ಲಿ 101 ಎಸೆತಗಳಲ್ಲಿ 131 ರನ್ ಸಿಡಿಸಿದ್ದರು. ಇದರ ಜತೆಗೆ ಲಿಸ್ಟ್‌ 'ಎ' ಕ್ರಿಕೆಟ್‌ನಲ್ಲಿ 16000 ರನ್ ಸಿಡಿಸಿದ ಭಾರತದ ಎರಡನೇ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದರು.

46
ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಕೊಹ್ಲಿ

ಇದಾದ ಬಳಿಕ ಗುಜರಾತ್ ಎದುರಿನ ಪಂದ್ಯದಲ್ಲಿ 61 ಎಸೆತಗಳಲ್ಲಿ 77 ರನ್ ಸಿಡಿಸುವ ಮೂಲಕ ಕೊಹ್ಲಿ ಡೆಲ್ಲಿ 7 ರನ್ ರೋಚಕ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೇ ಕಾರಣಕ್ಕೆ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

56
ಮತ್ತೆ ಕೊಹ್ಲಿ ವಿಜಯ್ ಹಜಾರೆ ಆಡೋದು ಯಾವಾಗ?

ವಿರಾಟ್ ಕೊಹ್ಲಿ ಈ ಬಾರಿಯ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಡೆಲ್ಲಿ ಪರ ಇನ್ನೊಂದು ಪಂದ್ಯ ಅಡುವ ಸಾಧ್ಯತೆಯಿದೆ. ಜನವರಿ 06ರಂದು ರೈಲ್ವೇಸ್ ಎದುರು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

66
ಟೀಂ ಇಂಡಿಯಾ ಕೂಡಿಕೊಳ್ಳಲಿರುವ ಕೊಹ್ಲಿ

ಇದಾದ ಬಳಿಕ ವಿರಾಟ್ ಕೊಹ್ಲಿ ರಾಷ್ಟ್ರೀಯ ತಂಡ ಕೂಡಿಕೊಳ್ಳಲಿದ್ದು, ಜನವರಿ 11ರಿಂದ ತವರಿನಲ್ಲಿ ಆರಂಭವಾಗಲಿರುವ ನ್ಯೂಜಿಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಕೂಡಿಕೊಳ್ಳಲಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories