ಸೂರ್ಯಕುಮಾರ್ ಯಾದವ್ ಬಳಿಕ ಭಾರತದ ಟಿ20 ಕ್ಯಾಪ್ಟನ್ ಯಾರು? ಶುರುವಾಯ್ತು ಹೊಸ ಚರ್ಚೆ

Published : Jun 04, 2026, 10:29 AM IST

ಭಾರತದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್, ಭಾರತ ಟಿ20 ನಾಯಕತ್ವದಿಂದ ಕೆಳಗಿಳಿಯುವುದು ಬಹುತೇಕ ಖಚಿತ ಎನಿಸಿದೆ. ಇದರ ಬೆನ್ನಲ್ಲೇ ಭಾರತದ ಮುಂದಿನ ಕ್ಯಾಪ್ಟನ್ ಯಾರು ಎನ್ನುವ ಚರ್ಚೆ ಜೋರಾಗಿದೆ. 

PREV
15
ಸೂರ್ಯ ನಾಯಕತ್ವ ಶೇಕ್?

ಕೆಲ ತಿಂಗಳ ಹಿಂದಷ್ಟೇ ಭಾರತ ತಂಡಕ್ಕೆ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ಸೂರ್ಯಕುಮಾರ್ ಯಾದವ್ ಅವರ ಸ್ಥಾನ ಇದೀಗ ಅಲುಗಾಡಲಾರಂಭಿಸಿದೆ. ಫಾರ್ಮ್‌ ಸಮಸ್ಯೆ ಹಾಗೂ ವಯಸ್ಸಿನ ಕಾರಣದಿಂದಾಗಿ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ನಾಯಕತ್ವದಿಂದ ಕೆಳಗಿಳಿಸುವ ಸಾಧ್ಯತೆಯಿದೆ ಎನ್ನುವ ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ.

25
ಸೂರ್ಯರನ್ನು ಕೆಳಗಿಳಿಸುವುದು ಸುಲಭವಲ್ಲ

ಸೂರ್ಯಕುಮಾರ್ ಯಾದವ್ ಅವರನ್ನು ಕೆಳಗಿಳಿಸುವುದು ಅಂದುಕೊಂಡಷ್ಟು ಸುಲಭವಲ್ಲ ಎನ್ನುವುದು ಸ್ವತಃ ಬಿಸಿಸಿಐಗೂ ಗೊತ್ತಿದೆ. ಭವಿಷ್ಯದ ನಾಯಕನನ್ನು ಆಯ್ಕೆ ಮಾಡುವ ಮುನ್ನ ಆಯ್ಕೆ ಸಮಿತಿಯು ಸಾಕಷ್ಟು ಅಳೆದು-ತೂಗಿ ಹೊಸ ನಾಯಕನನ್ನು ನೇಮಕ ಮಾಡಬೇಕಿದೆ.

35
ಗಂಭೀರ್ ಪ್ಲಾನ್ ಕಾರ್ಯಗತಗೊಳಿಸುವವರು ಬೇಕು

ಮುಂದಿನ ನಾಯಕರಾದವರು ನಿರ್ಭೀತಿಯಿಂದ ಬ್ಯಾಟ್ ಬೀಸಬೇಕು, ಪಂದ್ಯದಲ್ಲಿ ಪರಿಸ್ಥಿತಿಗೆ ತಕ್ಕಂತೆ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಇದೆಲ್ಲಕ್ಕಿಂತ ಮುಖ್ಯವಾಗಿ ಹೆಡ್ ಕೋಚ್ ಗೌತಮ್ ಗಂಭೀರ್ ಅವರ ಆಲೋಚನೆಯನ್ನು ಮೈದಾನದಲ್ಲಿ ಕಾರ್ಯಗತಗೊಳಿಸುವ ಟ್ಯಾಲೆಂಟ್ ಹೊಂದಿರಬೇಕು.

45
ರೇಸ್‌ನಲ್ಲಿದ್ದಾರೆ ಶ್ರೇಯಸ್ ಅಯ್ಯರ್

ಈಗಾಗಲೇ ಭಾರತ ಏಕದಿನ ತಂಡದ ಉಪನಾಯಕರಾಗಿರುವ ಶ್ರೇಯಸ್ ಅಯ್ಯರ್, ಭಾರತದ ಮುಂದಿನ ಟಿ20 ನಾಯಕರಾಗುವ ಸಾಧ್ಯತೆಯಿದೆ ಎನ್ನುವ ಚರ್ಚೆಯೂ ಜೋರಾಗಿದೆ. ಈ ಮೊದಲು ಗಂಭೀರ್ ಕೆಕೆಆರ್ ತಂಡದ ಮೆಂಟರ್‌ ಆಗಿದ್ದಾಗ, ಶ್ರೇಯಸ್ ಅಯ್ಯರ್ ನಾಯಕನಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ಐಪಿಎಲ್ ಟ್ರೋಫಿ ಗೆದ್ದುಕೊಟ್ಟಿದ್ದರು.

55
ಭಾರತದ ಮುಂದಿನ ಟಿ20 ಕ್ಯಾಪ್ಟನ್ ಯಾರು?

ಈಗಲೂ ಗೌತಮ್ ಗಂಭೀರ್‌ ಅವರಿಗೆ ಸೂರ್ಯಕುಮಾರ್ ನೆಚ್ಚಿನ ನಾಯಕರಾಗಿದ್ದಾರೆ. ಇನ್ನು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಕಠಿಣ ನಿರ್ಧಾರಕ್ಕೆ ಮುಂದಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಇಬ್ಬರ ಸಮ್ಮತಿಯ ಕ್ಯಾಪ್ಟನ್ ಯಾರಾಗಬಹುದು ಎನ್ನುವದು ಸದ್ಯಕ್ಕಿರುವ ಕುತೂಹಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories