ಇಶಾನ್ ಕಿಶನ್ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಿಂದ ಹೊರಬಿದ್ದಿದ್ದೇಕೆ?

Published : Dec 26, 2025, 06:30 PM IST

ಬೆಂಗಳೂರು: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ ವಿಜಯ್ ಹಜಾರೆ ಟೂರ್ನಿಯ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದು ಏಕೆ ಎನ್ನುವುದನ್ನು ನೋಡೋಣ ಬನ್ನಿ. 

PREV
17
ಎರಡನೇ ಪಂದ್ಯಕ್ಕಿಲ್ಲ ಇಶಾನ್ ಕಿಶನ್

ಭಾರತದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅದ್ಭುತ ಫಾರ್ಮ್‌ನಲ್ಲಿದ್ದು, ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಮೊದಲ ಪಂದ್ಯದಲ್ಲೇ ಸ್ಪೋಟಕ ಶತಕ ಸಿಡಿಸುವ ಮೂಲಕ ತಮ್ಮ ಫಾರ್ಮ್‌ ಮುಂದುವರೆಸಿದ್ದಾರೆ. ಹೀಗಿದ್ದೂ ರಾಜಸ್ಥಾನ ಎದುರಿನ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್, ಜಾರ್ಖಂಡ್ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ.

27
ಭರ್ಜರಿ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್

ಇತ್ತೀಚೆಗಷ್ಟೇ ಮುಕ್ತಾಯವಾದ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ 517 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಆಯ್ಕೆ ಸಮಿತಿ ಗಮನ ಸೆಳೆದಿದ್ದ ಇಶಾನ್ ಕಿಶನ್, ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಕರ್ನಾಟಕ ಎದುರು ಕೇವಲ 33 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು.

37
ಎರಡನೇ ಪಂದ್ಯಕ್ಕೆ ಇಶಾನ್ ಕಿಶನ್ ಗೈರು

ಹೀಗಿದ್ದೂ ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್, ಜಾರ್ಖಂಡ್ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಸಾಕಷ್ಟು ಅಚ್ಚರಿಗೆ ಕಾರಣವಾಗಿತ್ತು.

47
ಮುನ್ನೆಚ್ಚರಿಕಾ ಕ್ರಮವಾಗಿ ಇಶಾನ್ ಕಿಶನ್‌ಗೆ ವಿಶ್ರಾಂತಿ

ಯಾಕೆ ಹೀಗೆ ಎನ್ನುವ ಕುತೂಹಲಕ್ಕೆ ಇದೀಗ ಉತ್ತರ ಸಿಕ್ಕಿದ್ದು, ಮುಂಬರುವ ಮಹತ್ವದ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಗಾಯಗಳಾಗದಿರಲಿ ಎಂದು ಮುನ್ನೆಚ್ಚರಿಕಾ ಕ್ರಮವಾಗಿ ಬಿಸಿಸಿಐ, ಇಶಾನ್ ಕಿಶನ್‌ಗೆ ವಿಶ್ರಾಂತಿ ನೀಡಿದೆ ಎಂದು ವರದಿಯಾಗಿದೆ.

57
ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿರುವ ಕಿಶನ್

ಇಶಾನ್ ಕಿಶನ್, ನ್ಯೂಜಿಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿ ಹಾಗೂ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 2023ರ ಬಳಿಕ ಇದೇ ಮೊದಲ ಬಾರಿಗೆ ಭಾರತ ತಂಡಕ್ಕೆ ಇಶಾನ್ ಕಿಶನ್ ಕಮ್‌ಬ್ಯಾಕ್ ಮಾಡಿದ್ದಾರೆ.

67
ವಿಶ್ರಾಂತಿಗೆ ಜಾರಿರುವ ಇಶಾನ್ ಕಿಶನ್

ಸದ್ಯ ಇಶಾನ್ ಕಿಶನ್ ವಿಶ್ರಾಂತಿಗಾಗಿ ತಮ್ಮ ಮನೆಗೆ ವಾಪಾಸ್ಸಾಗಿದ್ದು, ಜನವರಿ 02ರ ವೇಳೆಗೆ ಮತ್ತೆ ತಂಡ ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

77
ಇಶಾನ್ ಕಿಶನ್ ಎರಡನೇ ಆಯ್ಕೆಯ ವಿಕೆಟ್ ಕೀಪರ್

ಇಶಾನ್ ಕಿಶನ್ ಭಾರತದ ಎರಡನೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಸಂಜು ಸ್ಯಾಮ್ಸನ್ ಭಾರತದ ಮೊದಲ ಆಯ್ಕೆಯ ವಿಕೆಟ್ ಕೀಪರ್ ಬ್ಯಾಟರ್ ಆಗಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories