ಧೋನಿ ಬಯಸಿದ್ರೂ ಟೀಂ ಇಂಡಿಯಾ ಕೋಚ್ ಆಗಲು ಸಾಧ್ಯವಿಲ್ಲ..! ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್

First Published May 29, 2024, 3:05 PM IST

ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಯಶಸ್ವಿಯಾಗಿ ಮುಕ್ತಾಯವಾದ ಬೆನ್ನಲ್ಲೇ ಇದೀಗ ಕ್ರಿಕೆಟ್ ಅಭಿಮಾನಿಗಳ ಚಿತ್ತ ಐಸಿಸಿ ಟಿ20 ವಿಶ್ವಕಪ್ ಮೇಲೆ ನೆಟ್ಟಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಭವಿಷ್ಯದ ಕೋಚ್ ಯಾರಾಗಬಹುದು ಎನ್ನುವ ಪ್ರಶ್ನೆಯು ಎದ್ದಿದೆ. ಆದರೆ ಧೋನಿ ಬಯಸಿದ್ರೂ ಟೀಂ ಇಂಡಿಯಾ ಕೋಚ್ ಆಗಲು ಸಾಧ್ಯವಿಲ್ಲ. ಯಾಕೆ ಅಂತೀರಾ ಈ ಸ್ಟೋರಿ ನೋಡಿ
 

ಮುಂಬರುವ ಜೂನ್ 01ರಿಂದ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದ್ದು, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಕಪ್‌ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

ಇನ್ನು 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಗಿಯುತ್ತಿದ್ದಂತೆಯೇ ಟೀಂ ಇಂಡಿಯಾ ಹೆಡ್‌ ಕೋಚ್ ರಾಹುಲ್ ದ್ರಾವಿಡ್ ಅವರೊಂದಿಗಿನ ಒಪ್ಪಂದಾವಧಿ ಕೂಡಾ ಮುಕ್ತಾಯವಾಗಲಿದೆ. ಹೀಗಾಗಿ ಬಿಸಿಸಿಐ ನೂತನ ಕೋಚ್ ಹುಡುಕಾಟದಲ್ಲಿದೆ.

Latest Videos


ಟೀಂ ಇಂಡಿಯಾ ಹೆಡ್ ಕೋಚ್ ಆಗಲು ಬಯಸುವವರು ಮೇ 27ರೊಳಗಾಗಿ ಅರ್ಜಿ ಸಲ್ಲಿಸಬೇಕಾಗಿತ್ತು. ಮೂಲಗಳ ಪ್ರಕಾರ ಸುಮಾರು ಮೂರು ಸಾವಿರ ಅರ್ಜಿಗಳು ಬಂದಿದ್ದು, ಈ ಪೈಕಿ ಬಹುತೇಕ ಅರ್ಜಿಗಳು ನಕಲಿ ಅರ್ಜಿಗಳು ಎನ್ನಲಾಗುತ್ತಿದೆ.

ಹೌದು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಮಹೇಂದ್ರ ಸಿಂಗ್ ಧೋನಿ, ಸಚಿನ್ ತೆಂಡುಲ್ಕರ್, ಈ ಬಾರಿಯ ಐಪಿಎಲ್ ವಿಜೇತ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಹೆಸರಿನಲ್ಲಿಯೂ ನಕಲಿ ಅರ್ಜಿಗಳು ಬಂದಿವೆ ಎಂದು ವರದಿಯಾಗಿದೆ.

ಒಂದು ವೇಳೆ ಮಹೇಂದ್ರ ಸಿಂಗ್ ಧೋನಿ ಸದ್ಯ ಟೀಂ ಇಂಡಿಯಾ ಹೆಡ್ ಕೋಚ್ ಆಗಲು ಬಯಸಿ ಬಿಸಿಸಿಐಗೆ ಅರ್ಜಿ ಸಲ್ಲಿಸಿದರೂ ಧೋನಿಯನ್ನು ಹೆಡ್ ಕೋಚ್ ಆಗಿ ನೇಮಿಸಲು ಸಾಧ್ಯವಿಲ್ಲ.

ಹೌದು, ಮಹೇಂದ್ರ ಸಿಂಗ್ ಧೋನಿ, ಭಾರತ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಐಸಿಸಿಯ ಮೂರು ಟ್ರೋಫಿ ಗೆದ್ದ ಏಕೈಕ ನಾಯಕ ಎನಿಸಿಕೊಂಡಿರುವ ಧೋನಿಗೆ ಈ ಬಾರಿ ಬಯಸಿದರೂ ಕೋಚ್ ಆಗುವ ಭಾಗ್ಯವಿಲ್ಲ.

ಹೌದು, ಅಚ್ಚರಿ ಎನಿಸಿದರೂ ಇದು ಸತ್ಯ. ಮಹೇಂದ್ರ ಸಿಂಗ್ ಧೋನಿ 2020ರ ಆಗಸ್ಟ್‌ 15ರಂದೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಆದರೆ ಐಪಿಎಲ್ ಟೂರ್ನಿಯಲ್ಲಿ ಧೋನಿ ಚೆನ್ನೈ ಪರ ಆಟವನ್ನು ಮುಂದುವರೆಸಿದ್ದಾರೆ.

ಟೀಂ ಇಂಡಿಯಾ ಹೆಡ್ ಕೋಚ್ ಆಗಿ ನೇಮಕವಾಗಬೇಕಿದ್ದರೇ, ಅವರು ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿರಬೇಕು. ಆದರೆ ಧೋನಿ ಐಪಿಎಲ್‌ ಆಡುತ್ತಿರುವುದರಿಂದ ಟೀಂ ಇಂಡಿಯಾ ಕೋಚ್ ಆಗಲು ಸಾಧ್ಯವಿಲ್ಲ.

ಸದ್ಯ ಕೆಲವು ವರದಿಗಳ ಪ್ರಕಾರ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಭಾರತ ಕ್ರಿಕೆಟ್ ತಂಡದ ಭವಿಷ್ಯದ ಹೆಡ್ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

click me!