ಒಂದೂ ಮ್ಯಾಚ್ ಸೋಲದೇ ಎರಡು ಐಸಿಸಿ ಟ್ರೋಫಿ ಗೆದ್ರೂ ರೋಹಿತ್ ಶರ್ಮಾಗೆ ಕ್ಯಾಪ್ಟನ್ಸಿಯಿಂದ ಗೇಟ್‌ಪಾಸ್ ನೀಡಿದ್ದೇಕೆ?

Published : Oct 04, 2025, 04:59 PM IST

ಮುಂಬೈ: ಭಾರತ ಕಂಡ ಯಶಸ್ವಿ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ರೋಹಿತ್ ಶರ್ಮಾ ಕ್ಯಾಪ್ಟನ್ಸಿ ಯುಗಾಂತ್ಯವಾಗಿದೆ. ಸತತ ಎರಡು ಐಸಿಸಿ ಟ್ರೋಫಿ ಗೆದ್ದುಕೊಟ್ಟ ನಾಯಕ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ್ದೇಕೆ ಎನ್ನುವುದನ್ನು ನೋಡೋಣ ಬನ್ನಿ. 

PREV
112
ಭಾರತ ಏಕದಿನ ತಂಡಕ್ಕೆ ಗಿಲ್ ಕ್ಯಾಪ್ಟನ್

ಇದೇ ಅಕ್ಟೋಬರ್ 19ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಶುಭ್‌ಮನ್ ಗಿಲ್‌ಗೆ ನಾಯಕತ್ವ ಪಟ್ಟ ಕಟ್ಟಲಾಗಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಕಾರ್ಯ ನಿರ್ವಹಿಸಲಿದ್ದಾರೆ.

212
ಸತತ ಎರಡು ಐಸಿಸಿ ಟ್ರೋಫಿ ಗೆದ್ದುಕೊಟ್ಟ ನಾಯಕ

ಇನ್ನು ಸತತ ಎರಡು ಐಸಿಸಿ ಟೂರ್ನಿಗಳಲ್ಲಿ ಎರಡು ಐಸಿಸಿ ಟ್ರೋಫಿ ಗೆದ್ದುಕೊಟ್ಟ ನಾಯಕ ರೋಹಿತ್ ಶರ್ಮಾ ಅವರನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

312
ಒಂದು ದಶಕದಿಂದ ಐಸಿಸಿ ಟ್ರೋಫಿ ಬರ ಎದುರಿಸಿದ್ದ ಭಾರತ

ಹೌದು, ಕಳೆದೊಂದು ದಶಕದಿಂದ ಅಂದರೆ 2013ರಿಂದೀಚೆಗೆ ಭಾರತ ತಂಡವು ಐಸಿಸಿ ಟೂರ್ನಿಗಳಲ್ಲಿ ಟ್ರೋಫಿ ಬರ ಅನುಭವಿಸುತ್ತಾ ಬಂದಿತ್ತು. ಆದರೆ ರೋಹಿತ್ ಶರ್ಮಾ ನಾಯಕನಾಗಿ ಭಾರತಕ್ಕೆ ಸತತ 2 ಐಸಿಸಿ ಟ್ರೋಫಿ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದರು.

412
2023ರ ಏಕದಿನ ವಿಶ್ವಕಪ್

2022ರಿಂದ ಭಾರತದ ಮೂರು ಮಾದರಿಯಲ್ಲೂ ನಾಯಕರಾದ ರೋಹಿತ್ ಶರ್ಮಾ, 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಫೈನಲ್‌ಗೆ ಕೊಂಡೊಯ್ದಿದ್ದರು. 

512
ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ನಿರಾಸೆ

ಆದರೆ ಪ್ರಶಸ್ತಿ ಸುತ್ತಿನಲ್ಲಿ ಆಸೀಸ್ ಎದುರು ಮುಗ್ಗರಿಸುವ ಮೂಲಕ ರೋಹಿತ್ ಶರ್ಮಾ ನಿರಾಸೆ ಅನುಭವಿಸಿದ್ದರು.

612
ದಶಕದ ಬಳಿಕ ಭಾರತಕ್ಕೆ ಮೊದಲ ಐಸಿಸಿ ಟ್ರೋಫಿ

ಆದರೆ ಛಲಬಿಡದ ರೋಹಿತ್ ಶರ್ಮಾ ಮರು ವರ್ಷವೇ ಅಂದರೆ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಯುವ ಹಾಗೂ ಅನುಭವಿ ಆಟಗಾರರ ಬಳಗ ಕಟ್ಟಿಕೊಂಡು ಐಸಿಸಿ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಯಶಸ್ವಿಯಾದರು. ಈ ಮೂಲಕ ಹಿಟ್‌ಮ್ಯಾನ್ ದಶಕದ ಬಳಿಕ ಭಾರತಕ್ಕೆ ಐಸಿಸಿ ಟ್ರೋಫಿ ಬರ ನೀಗಿಸಿದರು.

712
ಅಂತಾರಾಷ್ಟ್ರೀಯ ಟಿ20, ಟೆಸ್ಟ್‌ಗೆ ವಿದಾಯ

ಐಸಿಸಿ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆಯೇ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಘೋಷಿಸಿದ್ದರು. ಇದಾದ ಬಳಿಕ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಫಾರ್ಮ್ ಕಳೆದುಕೊಂಡ ರೋಹಿತ್, ಇಂಗ್ಲೆಂಡ್ ಎದುರಿನ ಟೆಸ್ಟ್‌ ಸರಣಿಗೂ ಟೆಸ್ಟ್ ಮಾದರಿಗೆ ವಿದಾಯ ಘೋಷಿಸಿದರು.

812
ಮಿನಿ ವಿಶ್ವಕಪ್ ಗೆದ್ದ ಭಾರತ

ಇನ್ನು ಚುಟುಕು ವಿಶ್ವಕಪ್ ಗೆದ್ದ ರೋಹಿತ್ ಶರ್ಮಾ ಮುಂದೆ ಮಿನಿ ವಿಶ್ವಕಪ್ ಎಂದೇ ಕರೆಸಿಕೊಳ್ಳುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಸವಾಲು ಎದುರಾಯಿತು. ರೋಹಿತ್ ಶರ್ಮಾ ನಾಯಕತ್ವದಲ್ಲಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕೂಡಾ ಭಾರತದ ಪಾಲಾಯಿತು.

912
ರೋಹಿತ್ ನಾಯಕತ್ವದಲ್ಲಿ ಭಾರತ ಭರ್ಜರಿ ಪ್ರದರ್ಶನ

ಕಳೆದ ಮೂರು ಐಸಿಸಿ ಟೂರ್ನಿಗಳಲ್ಲಿ ರೋಹಿತ್ ಶರ್ಮಾ ಒಟ್ಟು 26 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿ 25 ಪಂದ್ಯಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. 2023ರ ಏಕದಿನ ಫೈನಲ್‌ನಲ್ಲಿ ಮಾತ್ರ ಭಾರತ ಸೋತಿದೆ. ಇನ್ನು 2024ರ ಏಕದಿನ ವಿಶ್ವಕಪ್ ಹಾಗೂ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಒಂದೇ ಪಂದ್ಯ ಪಂದ್ಯ ಸೋಲದೇ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

1012
ಫಿಟ್ನೆಸ್ ಕಡೆ ಗಮನ ಕೊಟ್ಟಿದ್ದ ಹಿಟ್‌ಮ್ಯಾನ್

2027ರ ಏಕದಿನ ವಿಶ್ವಕಪ್ ಟೂರ್ನಿಯ ಮೇಲೆ ಕಣ್ಣಿಟ್ಟಿದ್ದ ರೋಹಿತ್ ಶರ್ಮಾ, ಫಿಟ್ನೆಸ್ ಕಡೆಯೂ ಗಮನ ಹರಿಸಿ 10 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದರು. ಇದರ ಜತೆಗೆ ಫಿಟ್ನೆಸ್ ಟೆಸ್ಟ್ ಕೂಡಾ ಪಾಸಾಗಿದ್ದರು.

1112
ರೋಹಿತ್ ಕೆಳಗಿಳಿಸಿದ್ದಕ್ಕೆ ನೆಟ್ಟಿಗರ ಆಕ್ರೋಶ

ಟೆಸ್ಟ್ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಗುಡ್ ಬೈ ಹೇಳಿ ಏಕದಿನ ಕ್ರಿಕೆಟ್‌ನತ್ತ ಗಮನ ಹರಿಸಿದ್ದ ರೋಹಿತ್ ಶರ್ಮಾ ಅವರನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿದ್ದು ಕೇವಲ ಪಾಲಿಟಿಕ್ಸ್ ಎಂದು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕುತ್ತಿದ್ದಾರೆ.

1212
ರೋಹಿತ್ ಶರ್ಮಾ ಯುಗಾಂತ್ಯಕ್ಕೆ ಕ್ಷಣಗಣನೆ?

ಸದ್ಯದ ಭಾರತ ತಂಡದೊಳಗಿನ ಬೆಳವಣಿಗೆಗಳನ್ನು ಗಮನಿಸಿದರೆ, ರೋಹಿತ್ ಶರ್ಮಾ ಪಾಲಿಗೆ ಆಸ್ಟ್ರೇಲಿಯಾ ಎದುರಿನ ಸರಣಿಯೇ ಕೊನೆಯ ಅಂತರಾಷ್ಟ್ರಿಯ ಕ್ರಿಕೆಟ್ ಸರಣಿ ಎನಿಸುವ ಸಾಧ್ಯತೆಯಿದೆ.

Read more Photos on
click me!

Recommended Stories