ಲಂಡನ್: ಭಾರತ ಮಹಿಳಾ ಕ್ರಿಕೆಟ್ ತಂಡದ 2026ರ ಐಸಿಸಿ ಟಿ20 ವಿಶ್ವಕಪ್ ಸೆಮೀಸ್‌ಗೇರುವ ಕನಸು ಆಸೀಸ್ ಎದುರು ಸೋಲುವುದರೊಂದಿಗೆ ನುಚ್ಚುನೂರಾಗಿದೆ. ಇದರ ಬೆನ್ನಲ್ಲೇ ನಾಯಕಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವ ಹಾಗೂ ಭವಿಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಕೋಚ್ ಮೌನ ಮುರಿದಿದ್ದಾರೆ.
ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಆರು ವಿಕೆಟ್ ಅಂತರದ ಹೀನಾಯ ಸೋಲು ಕಂಡಿದೆ. ಸೆಮೀಸ್ ಪ್ರವೇಶಸುವ ನಿಟ್ಟಿನಲ್ಲಿ ಮಾಡು ಇಲ್ಲವೇ ಮಡಿ ಎನಿಸಿಕೊಂಡಿದ್ದ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಸೋತು ಟೂರ್ನಿಯಿಂದ ಹೊರಬಿದ್ದಿದೆ.
26
ಆಸೀಸ್ ಎದುರು ಸೋಲು ಕಂಡ ಭಾರತ
ಭಾರತ ತಂಡವು ಈ ಬಾರಿ ಸೆಮೀಸ್‌ಗೇರಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. 'ಎ' ಆರಂಭಿಕ ಎರಡು ಪಂದ್ಯಗಳಲ್ಲಿ ಪಾಕಿಸ್ತಾನ ಹಾಗೂ ನೆದರ್‌ಲೆಂಡ್ಸ್‌ಗೆ ಸೋಲುಣಿಸಿತ್ತು. ಇದಾದ ಬಳಿಕ ದಕ್ಷಿಣ ಆಫ್ರಿಕಾ ಎದುರು ಸೋಲುಂಡ ಭಾರತ, ಆನಂತರ ಬಾಂಗ್ಲಾದೇಶವನ್ನು ಸೋಲಿಸಿ ಸೆಮೀಸ್ ಕನಸು ಜೀವಂತವಾಗಿಟ್ಟುಕೊಂಡಿತ್ತು. ಆದರೆ ಆಸೀಸ್ ಎದುರು ಸೋಲುವುದರೊಂದಿಗೆ ಭಾರತದ ಅಭಿಯಾನ ಮುಗಿದಿದೆ.
36
ಹರ್ಮನ್‌ಪ್ರೀತ್ ಕ್ರಿಕೆಟ್ ಭವಿಷ್ಯದ ಬಗ್ಗೆ ಪ್ರಶ್ನೆ
ಇನ್ನು ಭಾರತ ತಂಡವು ಐಸಿಸಿ ಟಿ20 ಮಹಿಳಾ ವಿಶ್ವಕಪ್‌ನಿಂದ ಹೊರಬಿದ್ದ ಬೆನ್ನಲ್ಲೇ ಮಹಿಳಾ ಕ್ರಿಕೆಟ್ ತಂಡದ ಹೆಡ್‌ಕೋಚ್ ಅಮೂಲ್ ಮಜುಂದಾರ್ ಪೋಸ್ಟ್ ಮ್ಯಾಚ್ ಪ್ರೆಸ್ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿ ಮಾತನಾಡಿದರು. ಈ ವೇಳೆ ಪತ್ರಕರ್ತರು, ಹರ್ಮನ್‌ಪ್ರೀತ್ ಕೌರ್ ಮತ್ತೆ ನಾಯಕಿಯಾಗಿ ಭಾರತ ತಂಡವನ್ನು ಮುನ್ನಡೆಸುತ್ತಾರೆಯೇ ಎನ್ನುವ ಪ್ರಶ್ನೆಗೂ ಪ್ರತಿಕ್ರಿಯೆ ನೀಡಿದರು.
ನಿಮ್ಮ ಪ್ರಕಾರ ಹರ್ಮನ್‌ಪ್ರೀತ್ ನಾಯಕಿಯಾಗಿ ಮುಂದುವರೆಯುತ್ತಾರೆಯೇ ಎನ್ನುವ ಪ್ರಶ್ನೆಗೆ ಮಜುಂದಾರ್, 'ಅದು ಆಯ್ಕೆ ಸಮಿತಿಯು ತೀರ್ಮಾನ ಮಾಡಲಿದೆ'. ಆದ್ರೆ ನನ್ನ ಶಾರ್ಟ್ ಅಂಡ್ ಸ್ವೀಟ್ ಉತ್ತರವೇನಂದ್ರೆ ಹೌದು, ಅವರು ನಾಯಕಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ.
56
ಟಿ20 ವಿಶ್ವಕಪ್ ಗೆಲ್ಲುವ ಹರ್ಮನ್‌ಪ್ರೀತ್ ಕೌರ್ ಕನಸು ನುಚ್ಚುನೂರು
ಕಳೆದ ವರ್ಷ ಭಾರತದಲ್ಲೇ ನಡೆದ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಮೂಲಕ ಭಾರತ ಮಹಿಳಾ ತಂಡವು ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದೀಗ ಟಿ20 ವಿಶ್ವಕಪ್ ಗೆಲ್ಲುವ ಹರ್ಮನ್‌ಪ್ರೀತ್ ಕೌರ್ ಪಡೆಯ ಕನಸು ಕನಸಾಗಿಯೇ ಉಳಿದಿದೆ.
66
ಸೋಲಿನ ಪರಾಮರ್ಶೆ ಮಾಡಿದ ಹೆಡ್ ಕೋಚ್
ಇನ್ನು ಪಂದ್ಯದ ಸೋಲಿನ ಬಗ್ಗೆ ಮಾತನಾಡಿದ ಮಜುಂದಾರ್, ಭಾರತ ತಂಡದ ಬೌಲಿಂಗ್ ಹಾಗೂ ಕ್ಷೇತ್ರರಕ್ಷಣೆಯಲ್ಲಿ ಸಾಕಷ್ಟು ಸುಧಾರಣೆಯಾಗಬೇಕಿದೆ ಎನ್ನುವುದನ್ನು ಒತ್ತಿ ಹೇಳಿದರು. ಇನ್ನು ಬ್ಯಾಟಿಂಗ್‌ನಲ್ಲಿ 15-20 ರನ್ ಹೆಚ್ಚು ಬಂದಿದ್ದರೇ ಬಹುಶಃ ಮ್ಯಾಚ್ ಇನ್ನಷ್ಟು ರೋಚಕತೆಯಿಂದ ಕೂಡಿರುವ ಸಾಧ್ಯತೆಯಿತ್ತು ಎಂದು ಮಜುಂದಾರ್ ಅಭಿಪ್ರಾಯಪಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.