ಫೈನಲ್ ರೇಸ್‌ನಿಂದ ಹೊರಗುಳಿದಿಲ್ಲ ಪಂಜಾಬ್; ಮತ್ತೆ ಆರ್‌ಸಿಬಿಗೆ ಎದುರಾಗುತ್ತಾ?

Published : May 29, 2025, 11:09 PM IST

ಕ್ವಾಲಿಫೈಯರ್-1 ರಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್ ಕಿಂಗ್ಸ್ ಸೋತರೂ ಐಪಿಎಲ್ 2025ರಿಂದ ಹೊರಬಿದ್ದಿಲ್ಲ. ಎರಡನೇ ಕ್ವಾಲಿಫೈಯರ್‌ನಲ್ಲಿ ಗೆದ್ದರೆ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಮತ್ತೆ ಸೆಣಸಲಿದ್ದಾರೆ.

PREV
15

ಲೀಗ್ ಹಂತದಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್, ಕ್ವಾಲಿಫೈಯರ್-1 ರಲ್ಲಿ ಆರ್‌ಸಿಬಿ ವಿರುದ್ಧ ಹೀನಾಯವಾಗಿ ಸೋತಿದೆ. ಪಂಜಾಬ್ ವಿರುದ್ಧ 8 ವಿಕೆಟ್‌ಗಳಿಂದ ಗೆದ್ದು, ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಈ ಮೂಲಕ 9 ವರ್ಷಗಳ ಬಳಿಕ ಆರ್‌ಸಿಬಿ ಫೈನಲ್ ಪ್ರವೇಶಿಸಿದೆ.

25

ಕ್ವಾಲಿಫೈಯರ್-1 ರಲ್ಲಿ ಸೋತಿದ್ದರಿಂದ ಪಂಜಾಬ್ ಕಿಂಗ್ಸ್ ಐಪಿಎಲ್‌ನಿಂದ ಹೊರಗೆ ಬಿದ್ದಿಲ್ಲ. ಫೈನಲ್ ರೇಸ್‌ನಲ್ಲಿರುವ ಪಂಜಾಬ್ ಕಿಂಗ್ಸ್ ಮತ್ತೆ ಆರ್‌ಸಿಬಿ ತಂಡಕ್ಕೆ ಮುಖಾಮುಖಿ ಆಗೋದನ್ನು ಅಲ್ಲಗಳೆಯುವಂತಿಲ್ಲ. ಐಪಿಎಲ್ 2025 ರ ಫೈನಲ್ ಪಂಜಾಬ್ ಕಿಂಗ್ಸ್ ಮತ್ತು ಆರ್‌ಸಿಬಿ ನಡುವೆಯೂ ನಡೆಯಲೂಬಹುದು.

35

ಕ್ವಾಲಿಫೈಯರ್-1 ರಲ್ಲಿ ತನ್ನ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡ ಪಂಜಾಬ್ ತಂಡ ಕೇವಲ 101 ರನ್ ಗಳಿಸುವಲ್ಲಿ ಮಾತ್ರ ಶಕ್ತವಾಗಿತ್ತು. ಸರಳ ಮೊತ್ತವನ್ನು ಬೆನ್ನಟ್ಟಿದ್ದ ಆರ್‌ಸಿಬಿ 10 ಓವರ್‌ಗಳು ಬಾಕಿ ಇರುವಾಗ ಪಂದ್ಯವನ್ನು ಗೆದ್ದುಕೊಂಡಿತು. ಸುಯಶ್ ಶರ್ಮಾ ಮತ್ತು ಜೋಶ್ ಹ್ಯಾಜಲ್‌ವುಡ್ ತಲಾ 3 ವಿಕೆಟ್‌ಗಳನ್ನು ಪಡೆಯುವ ಮೂಲಕ ಬೌಲಿಂಗ್‌ನಲ್ಲಿ ಪಂಜಾಬ್ ತಂಡವನ್ನು ಕಟ್ಟಿ ಹಾಕಿದರು. ಇನ್ನು 27 ಎಸೆತಗಳಲ್ಲಿ 56 ರನ್ ಗಳಿಸಿದ ನಂತರ ಸಾಲ್ಟ್ ಅಜೇಯರಾಗಿ ಮರಳಿದರು.

45

ಪಂಜಾಬ್ ಕಿಂಗ್ಸ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಸೋತರೂ, ಐಪಿಎಲ್ 2025 ರಿಂದ ಹೊರಗುಳಿದಿಲ್ಲ. ಪಂಜಾಬ್ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ-2 ರಲ್ಲಿ ಸ್ಥಾನ ಪಡೆದ ಲಾಭವನ್ನು ಪಡೆಯಲಿದೆ. ಈಗ ಪಂಜಾಬ್ ಕಿಂಗ್ಸ್ ತಂಡವು ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವಿಜೇತರನ್ನು ಎದುರಿಸಲಿದೆ.

55

ಪಂಜಾಬ್ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಗೆದ್ದರೆ ಫೈನಲ್ ಪ್ರವೇಶಿಸುತ್ತದೆ. ನಂತರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಆದರೆ ಫೈನಲ್ ತಲುಪಲು, ಪಂಜಾಬ್ ಈಗ ಯಾವುದೇ ಬೆಲೆ ತೆತ್ತಾದರೂ ಕ್ವಾಲಿಫೈಯರ್ -2 ಅನ್ನು ಗೆಲ್ಲಬೇಕಾಗುತ್ತದೆ.

Read more Photos on
click me!

Recommended Stories