ಮಹಿಳಾ ವಿಶ್ವಕಪ್ ಫೈನಲ್‌ಗೆ ಮಳೆ ಭೀತಿ: ಪಂದ್ಯಕ್ಕೆ ವರುಣ ಅಡ್ಡಿ ಪಡಿಸಿದ್ರೆ ಯಾರು ಚಾಂಪಿಯನ್ ಆಗ್ತಾರೆ?

Published : Nov 02, 2025, 11:00 AM IST

ನವಿ ಮುಂಬೈ: 13ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಪ್ರಶಸ್ತಿಗಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳು ಕಾದಾಡಲಿವೆ. ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸಿದ್ರೆ ಏನಾಗಲಿದೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

PREV
18
ಇಂದು ಐತಿಹಾಸಿಕ ಮಹಿಳಾ ಏಕದಿನ ವಿಶ್ವಕಪ್ ಫೈನಲ್

2025ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯು ನಿರ್ಣಾಯಕ ಘಟ್ಟ ತಲುಪಿದ್ದು, ಇಂದು ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಾದಾಡಲಿವೆ.

28
ಮೊದಲ ಸಲ ಫೈನಲ್‌ಗೇರಿರುವ ದಕ್ಷಿಣ ಆಫ್ರಿಕಾ

ಒಂದು ಕಡೆ ದಕ್ಷಿಣ ಆಫ್ರಿಕಾ ತಂಡವು ಸೆಮಿಫೈನಲ್‌ನಲ್ಲಿ 4 ಬಾರಿಯ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದು, ಚೊಚ್ಚಲ ಫೈನಲ್‌ನಲ್ಲೇ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.

38
ಬಲಿಷ್ಠ ಆಸ್ಟ್ರೇಲಿಯಾ ಸೋಲಿಸಿ ಫೈನಲ್‌ಗೇರಿದ ಭಾರತ

ಇನ್ನೊಂದೆಡೆ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಆತಿಥೇಯ ಟೀಂ ಇಂಡಿಯಾ, ಏಳು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಸೆಮೀಸ್‌ನಲ್ಲಿ ಬಗ್ಗುಬಡಿದು ಚೊಚ್ಚಲ ಟ್ರೋಫಿ ಗೆಲ್ಲಲು ತುದಿಗಾಲ್ಲಿ ನಿಂತಿದೆ.

48
ಫೈನಲ್ ಪಂದ್ಯದ ನೇರ ಪ್ರಸಾರದ ವಿವರ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರವಾಗಲಿದೆ.

58
ಸಂಜೆಯ ಮೇಲೆ ಇಂದು ಮಳೆ ಬೀಳುವ ಸಾಧ್ಯತೆ

ಹೀಗಿರುವಾಗಲೇ ಇಂದು ಮಧ್ಯಾಹ್ನ 3 ಗಂಟೆಯಿಂದ ಆರಂಭವಾಗಲಿರುವ ಈ ಹೈವೋಲ್ಟೇಜ್ ವಿಶ್ವಕಪ್ ಫೈನಲ್‌ಗೂ ಮುನ್ನ ಮಳೆರಾಯನ ಭೀತಿ ಎದುರಾಗಿದೆ. ಸಂಜೆ 5 ಗಂಟೆ ಬಳಿಕ ಮಳೆ ಮುನ್ಸೂಚನೆ ಇದೆ

68
ಭಾನುವಾರ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಒಂದು ವೇಳೆ ಪಂದ್ಯಕ್ಕೆ ಮಳೆ ಅಡ್ಡಿಯಾಗಿ, ಭಾನುವಾರ ಪಂದ್ಯ ಮುಕ್ತಾಯಗೊಳಿಸಲು ಸಾಧ್ಯವಾಗದೆ ಇದ್ದರೆ ಪಂದ್ಯ ಮೀಸಲು ದಿನಕ್ಕೆ ಕಾಲಿಡಲಿದೆ.

78
ಭಾನುವಾರ ಮಳೆ ಅಡ್ಡಿಯಾದ್ರೆ ಮೀಸಲು ದಿನ ಪಂದ್ಯ ಮುಂದುವರಿಕೆ

ಭಾನುವಾರ ಪಂದ್ಯ ಎಲ್ಲಿ ಸ್ಥಗಿತಗೊಂಡಿರುತ್ತದೆಯೋ, ಸೋಮವಾರ ಅಲ್ಲಿಂದಲೇ ಮುಂದುವರಿಯಲಿದೆ.

88
ಮೀಸಲು ದಿನವೂ ಪಂದ್ಯ ಮುಕ್ತಾಯಗೊಳ್ಳದಿದ್ರೆ ಜಂಟಿ ಚಾಂಪಿಯನ್

ಒಂದು ವೇಳೆ ಮೀಸಲು ದಿನದಂದೂ ಪಂದ್ಯ ಮುಗಿಸಲು ಸಾಧ್ಯವಾಗದೆ ಇದ್ದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories