WPL 2026: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್‌ ಫೈನಲ್‌ಗೆ! ಚೊಚ್ಚಲ ಕಪ್‌ಗಾಗಿ ಆರ್‌ಸಿಬಿ ಜತೆ ಫೈಟ್

Published : Feb 04, 2026, 09:26 AM IST

ವಡೋದರಾ: ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯ ನಾಲ್ಕನೇ ಆವೃತ್ತಿಯಲ್ಲೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಈ ಬಾರಿಯಾದರೂ ಡೆಲ್ಲಿ ಟ್ರೋಫಿ ಬರ ನೀಗಿಸಿಕೊಳ್ಳುತ್ತಾ ಕಾದು ನೋಡಬೇಕಿದೆ. 

PREV
16
ಫೈನಲ್‌ಗೇರಿದ ಡೆಲ್ಲಿ ಕ್ಯಾಪಿಟಲ್ಸ್

ಡಬ್ಲ್ಯುಪಿಎಲ್‌ನ 4ನೇ ಆವೃತ್ತಿಯಲ್ಲೂ ಡೆಲ್ಲಿ ಕ್ಯಾಪಿಟಲ್ಸ್‌ ಫೈನಲ್‌ಗೇರಿದೆ. ಎಲಿಮಿನೇಟರ್‌ನಲ್ಲಿ ಮಂಗಳವಾರ ಗುಜರಾತ್‌ ಜೈಂಟ್ಸ್ ವಿರುದ್ಧ ಡೆಲ್ಲಿ 7 ವಿಕೆಟ್‌ನಿಂದ ಗೆದ್ದಿತು.

26
ಸತತ ಮೂರು ಬಾರಿ ಫೈನಲ್‌ನಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್

ಆರಂಭಿಕ 3 ಆವೃತ್ತಿಗಳಲ್ಲೂ ಫೈನಲ್‌ನಲ್ಲಿ ಸೋತಿದ್ದ ಡೆಲ್ಲಿ, ಈ ಬಾರಿಯಾದರೂ ಕಪ್‌ ಗೆಲ್ಲುವ ವಿಶ್ವಾಸದಲ್ಲಿದೆ. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

36
ಸುಲಭ ಗೆಲುವು ಸಾಧಿಸಿದ ಡೆಲ್ಲಿ

ಮೊದಲು ಬ್ಯಾಟ್‌ ಮಾಡಿದ ಗುಜರಾತ್‌ 7 ವಿಕೆಟ್‌ಗೆ 168 ರನ್ ಗಳಿಸಿತು. ಬೆಥ್‌ ಮೂನಿ ಔಟಾಗದೆ 62 ರನ್‌ ಸಿಡಿಸಿದರು. ಸ್ಪರ್ಧಾತ್ಮಕ ಗುರಿಯನ್ನು ಡೆಲ್ಲಿ ತಂಡ 15.4 ಓವರ್‌ನಲ್ಲೇ ಬೆನ್ನತ್ತಿ ಗೆದ್ದಿತು. ಲಿಜೆಲ್‌ ಲೀ್‌ 24 ಎಸೆತಕ್ಕೆ 43, ಶಫಾಲಿ 31, ನಾಯಕಿ ಜೆಮಿಮಾ ಕೇವಲ 23 ಎಸೆತಗಳಲ್ಲಿ 41 ರನ್‌ ಗಳಿಸಿದರು.

46
ಆರ್‌ಸಿಬಿ-ಡೆಲ್ಲಿ ಫೈನಲ್‌ ನಾಳೆ

ಫೈನಲ್‌ ಪಂದ್ಯ ಗುರುವಾರ ನಡೆಯಲಿದ್ದು, ಆರ್‌ಸಿಬಿ ಹಾಗೂ ಡೆಲ್ಲಿ ಸೆಣಸಾಡಲಿದೆ. ಈ ಪಂದ್ಯವು ವಡೋದರದ ಬಿಸಿಎ ಮೈದಾನದಲ್ಲಿ ನಡೆಯಲಿದೆ. ಸ್ಮೃತಿ ಮಂದನಾ ನೇತೃತ್ವದ ಆರ್‌ಸಿಬಿ ಈ ಬಾರಿ ಲೀಗ್‌ ಹಂತದಿಂದ ನೇರವಾಗಿ ಫೈನಲ್‌ಗೇರಿತ್ತು.

56
ಎರಡನೇ ಸೀಸನ್‌ WPL ನಲ್ಲಿ ಆರ್‌ಸಿಬಿ ಚಾಂಪಿಯನ್

2024ರ ಎರಡನೇ ಸೀಸನ್ ವುಮೆನ್ಸ್ ಪ್ರೀಮಿಯರ್ ಲೀಗ್ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಆರ್‌ಸಿಬಿ ಚಾಂಪಿಯನ್‌ ಆಗಿತ್ತು. ಈ ಬಾರಿಯ ಯಾವ ತಂಡ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

66
ಭರ್ಜರಿ ಫಾರ್ಮ್‌ನಲ್ಲಿರುವ ಸ್ಮೃತಿ ಮಂಧನಾ

ಈ ಬಾರಿಯ ವುಮೆನ್ಸ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರ್‌ಸಿಬಿ ನಾಯಕಿ ಸ್ಮೃತಿ ಮಂಧನಾ(290) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್ ಕೀಪರ್ ಬ್ಯಾಟರ್ ಲಿಜೆಲ್ಲಿ ಲೀ(283) ಭರ್ಜರಿ ಫಾರ್ಮ್‌ನಲ್ಲಿದ್ದು, ಇದೀಗ ಫೈನಲ್ ಮ್ಯಾಚ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories