ವಿರಾಟ್ ಕೊಹ್ಲಿ, ಸುನಿಲ್ ಗವಾಸ್ಕರ್ ಸಾರ್ವಕಾಲಿಕ ದಾಖಲೆ ಮುರಿಯಲು ಜೈಸ್ವಾಲ್ ರೆಡಿ..!

First Published | Feb 27, 2024, 6:05 PM IST

ಬೆಂಗಳೂರು: ಟೀಂ ಇಂಡಿಯಾ ಯುವ ಪ್ರತಿಭಾನ್ವಿತ ಬ್ಯಾಟರ್ ಯಶಸ್ವಿ ಜೈಸ್ವಾಲ್ ಸದ್ಯ ಭರ್ಜರಿ ಲಯದಲ್ಲಿದ್ದು, ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕ ಮುನ್ನುಗ್ಗುತ್ತಿದ್ದಾರೆ. ಇದೀಗ ಜೈಸ್ವಾಲ್, ಕ್ರಿಕೆಟ್ ದಂತಕಥೆಗಳಾದ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಗವಾಸ್ಕರ್ ಹೆಸರಿನಲ್ಲಿರುವ ಸಾರ್ವಕಾಲಿಕ ದಾಖಲೆ ಮುರಿಯಲು ಸಜ್ಜಾಗಿದ್ದಾರೆ. 
 

ಟೀಂ ಇಂಡಿಯಾ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್, ಸದ್ಯ ರೆಡ್‌ ಹಾಟ್ ಫಾರ್ಮ್‌ನಲ್ಲಿದ್ದು ಇಂಗ್ಲೆಂಡ್ ಎದುರಿನ ಮೊದಲ 4 ಟೆಸ್ಟ್ ಪಂದ್ಯಗಳಲ್ಲಿ ಮಿಂಚಿನ ಪ್ರದರ್ಶನ ತೋರಿದ್ದಾರೆ.
 

ಯುವ ಪ್ರತಿಭಾನ್ವಿತ ಬ್ಯಾಟರ್ ಯಶಸ್ವಿ ಜೈಸ್ವಾಲ್, ಇಂಗ್ಲೆಂಡ್ ಎದುರಿನ ಮೊದಲ 4 ಟೆಸ್ಟ್ ಪಂದ್ಯಗಳ ಪೈಕಿ 2 ದ್ವಿಶತಕ ಸಹಿತ ಸರಣಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಆಗಿ ಹೊರಹೊಮ್ಮಿದ್ದಾರೆ.

Tap to resize

ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್, ಇಂಗ್ಲೆಂಡ್ ಎದುರಿನ ಮೊದಲ 4 ಟೆಸ್ಟ್ ಪಂದ್ಯಗಳನ್ನಾಡಿ 655 ರನ್ ಬಾರಿಸಿದ್ದಾರೆ. ಇದೀಗ ಈ ಸರಣಿಯಲ್ಲಿ ಉಭಯ ತಂಡಗಳು ಇನ್ನೊಂದು ಪಂದ್ಯ ಆಡುವುದು ಬಾಕಿ ಇದೆ.

ಇದೀಗ ಯಶಸ್ವಿ ಜೈಸ್ವಾಲ್, ಭಾರತದ ಕ್ರಿಕೆಟ್ ಲೆಜೆಂಡ್‌ಗಳಾದ ವಿರಾಟ್ ಕೊಹ್ಲಿ ಹಾಗೂ ಸುನಿಲ್ ಗವಾಸ್ಕರ್ ಹೆಸರಿನಲ್ಲಿರುವ ಅಪರೂಪದ ದಾಖಲೆ ಬ್ರೇಕ್ ಮಾಡುವ ಹೊಸ್ತಿಲಲ್ಲಿದ್ದಾರೆ.

ಹೌದು, ಟೆಸ್ಟ್ ಸರಣಿಯೊಂದರಲ್ಲಿ ಟೀಂ ಇಂಡಿಯಾ ಪರ ಗರಿಷ್ಠ ರನ್ ಬಾರಿಸಿದ ದಾಖಲೆ ಲಿಟ್ಲ್ ಮಾಸ್ಟರ್ ಸುನಿಲ್ ಗವಾಸ್ಕರ್ ಅವರ ಹೆಸರಿನಲ್ಲಿದೆ. ಗವಾಸ್ಕರ್ ಟೆಸ್ಟ್ ಸರಣಿಯೊಂದರಲ್ಲಿ 774 ರನ್ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ.
 

ಕ್ರಿಕೆಟ್ ಬ್ಯಾಟಿಂಗ್ ದಂತಕಥೆ ಸುನಿಲ್ ಗವಾಸ್ಕರ್ 1970-71ರಲ್ಲಿ ಆಗಿನ ಕಾಲದ ಬಲಾಢ್ಯ ತಂಡವಾಗಿ ಗುರುತಿಸಿಕೊಂಡಿದ್ದ ವೆಸ್ಟ್ ಇಂಡೀಸ್ ಎದುರು ಟೆಸ್ಟ್ ಸರಣಿಯಲ್ಲಿ 774 ರನ್ ಬಾರಿಸಿ ಮಿಂಚಿದ್ದರು.

Image credit: PTI

ಇನ್ನು ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ 2014-15ರಲ್ಲಿ ಆಸ್ಟ್ರೇಲಿಯಾ ಎದುರಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 692 ರನ್ ಸಿಡಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

ಇದೀಗ ಈ ಇಬ್ಬರ ಕ್ರಿಕೆಟ್ ದಾಖಲೆ ಅಪಾಯದಲ್ಲಿದೆ. ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಒಂದು ವೇಳೆ ಯಶಸ್ವಿ ಜೈಸ್ವಾಲ್ 120 ರನ್ ಬಾರಿಸಿದರೆ ಗವಾಸ್ಕರ್ ದಾಖಲೆ ನುಚ್ಚುನೂರಾಗಲಿದೆ. ಅದೇ ರೀತಿ ಕೇವಲ 38 ರನ್ ಬಾರಿಸಿದರೆ ಕೊಹ್ಲಿ ರೆಕಾರ್ಡ್ ಕೂಡಾ ಬ್ರೇಕ್ ಆಗಲಿದೆ.

Latest Videos

click me!