IPL 2022 ತಾಹಿರ್ ದಾಖಲೆ ಸರಿಗಟ್ಟಿದ ಚಹಲ್, ಇತಿಹಾಸ ನಿರ್ಮಿಸಲು ಯುಜಿಗೆ ಬೇಕಿದೆ ಇನ್ನೊಂದು ವಿಕೆಟ್‌

First Published May 21, 2022, 12:44 PM IST

ಮುಂಬೈ: 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡವು ಅದ್ಭುತ ಪ್ರದರ್ಶನದ ಮೂಲಕ ಮೂಲಕ ಪ್ಲೇ ಆಫ್‌ಗೇರುವಲ್ಲಿ ಯಶಸ್ವಿಯಾಗಿದೆ. ತನ್ನ ಪಾಲಿನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ರೋಚಕ ಜಯ ಸಾಧಿಸುವ ಮೂಲಕ ರಾಜಸ್ಥಾನ ರಾಯಲ್ಸ್ ತಂಡವು ಮೊದಲ ಕ್ವಾಲಿಫೈಯರ್‌ಗೇರುವಲ್ಲಿ ಯಶಸ್ವಿಯಾಗಿದೆ. ಇದೇ ವೇಳೆ ಲೆಗ್‌ಸ್ಪಿನ್ನರ್‌ ಯುಜುವೇಂದ್ರ ಚಹಲ್, ಆಫ್ರಿಕಾ ಮೂಲದ ಸ್ಪಿನ್ನರ್ ಇಮ್ರಾನ್ ತಾಹಿರ್ ಹೆಸರಿನಲ್ಲಿದ್ದ ದಾಖಲೆ ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೊಂದು ವಿಕೆಟ್ ಕಬಳಿಸಿದರೆ ಐಪಿಎಲ್‌ನಲ್ಲಿ ಚಹಲ್ ಹೊಸ ದಾಖಲೆ ನಿರ್ಮಿಸಲಿದ್ದಾರೆ.

15ನೇ ಆವೃತ್ತಿಯ ಐಪಿಎಲ್‌ನಲ್ಲಿ ಅಭೂತ ಪ್ರದರ್ಶನ ತೋರುತ್ತಿರುವ ರಾಜಸ್ಥಾನ ರಾಯಲ್ಸ್‌ ತಂಡದ ಸ್ಪಿನ್ನರ್ ಯುಜುವೇಂದ್ರ ಚಹಲ್ 14 ಪಂದ್ಯಗಳಲ್ಲಿ 26 ವಿಕೆಟ್ ಕಬಳಿಸಿದ್ದು, ಮತ್ತೊಮ್ಮೆ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಆರ್‌ಸಿಬಿ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದ ಯುಜುವೇಂದ್ರ ಚಹಲ್, ಇದೀಗ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದು, ತಮ್ಮ ಚಾಣಾಕ್ಷ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಾಡುತ್ತಿದ್ದಾರೆ.
 

Latest Videos


ಇದೀಗ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಯುಜುವೇಂದ್ರ ಚಹಲ್‌ ಕೇವಲ 26 ರನ್ ನೀಡಿ 2 ಪ್ರಮುಖ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್‌(26) ಪಡೆದ ಸ್ಪಿನ್ನರ್‌ಗಳ ಪಟ್ಟಿಯಲ್ಲಿ ಇಮ್ರಾನ್ ತಾಹಿರ್ ಜತೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ.
 

2019ರ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಇಮ್ರಾನ್ ತಾಹಿರ್, 17 ಪಂದ್ಯಗಳನ್ನಾಡಿ 26 ವಿಕೆಟ್ ಕಬಳಿಸುವ ಮೂಲಕ, ಐಪಿಎಲ್‌ ಆವೃತ್ತಿಯೊಂದರಲ್ಲಿ ಗರಿಷ್ಟ ವಿಕೆಟ್ ಕಬಳಿಸಿದ ಸ್ಪಿನ್ನರ್ ಎನ್ನುವ ಕೀರ್ತಿಗೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಪಾತ್ರರಾಗಿದ್ದರು.
 

ಇನ್ನು ಐಪಿಎಲ್‌ ಆವೃತ್ತಿಯೊಂದರಲ್ಲಿ ಗರಿಷ್ಟ ವಿಕೆಟ್‌ ಕಬಳಿಸಿದ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್‌ ತಂಡದ ಡ್ವೇನ್ ಬ್ರಾವೋ(2013ರಲ್ಲಿ 32 ವಿಕೆಟ್) ಹಾಗೂ ಹರ್ಷಲ್‌ ಪಟೇಲ್(2021ರಲ್ಲಿ 32 ವಿಕೆಟ್‌) ಜಂಟಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ.

click me!