ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ (yuzvendra chahal) ಅವರನ್ನು ಹೋಲುವ ವ್ಯಕ್ತಿಯೊಬ್ಬರು ಧೂಮಪಾನ (smoking) ಮಾಡಿ, ಸಿಗರೇಟ್ ತುಂಡನ್ನು ರಸ್ತೆಗೆ ಎಸೆದ ವಿಡಿಯೋ ವೈರಲ್ ಆಗಿದೆ. ಈ ಘಟನೆಯು ಸಾರ್ವಜನಿಕರಿಂದ ತೀವ್ರ ಟೀಕೆಗೆ (controversy) ಗುರಿಯಾಗಿದ್ದಾರೆ.
ಟೀಮ್ ಇಂಡಿಯಾ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ (yuzvendra chahal) ಅವರನ್ನು ಹೋಲುವಂಥ ವ್ಯಕ್ತಿಯೊಬ್ಬರು ಐಷಾರಾಮಿ ಕಾರನ್ನು ಚಾಲನೆ ಮಾಡುವಾಗ ಧೂಮಪಾನ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಆ ವ್ಯಕ್ತಿ ಸಿಗರೇಟ್ ಸೇದಿ, ಅದರ ತುಂಡನ್ನು ರಸ್ತೆಯ ಮೇಲೆ ಎಸೆಯುತ್ತಿರುವುದು ಕಂಡುಬಂದಿದೆ. ಈ ವರ್ತನೆಗೆ ಕ್ರಿಕೆಟ್ ಅಭಿಮಾನಿಗಳಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ಆದರೆ, ಈ ವಿಡಿಯೋದಲ್ಲಿ ಇರುವುದು ಯಜುವೇಂದ್ರ ಚಾಹಲ್ ಹೌದೋ? ಅಲ್ಲವೋ ಎನ್ನುವುದು ಇನ್ನೂ ಖಚಿತವಾಗಿಲ್ಲ.
25
ಮೌನ ವಹಿಸಿದ ಚಾಹಲ್ ಟೀಮ್
ಈ ವಿಡಿಯೋ ಎಲ್ಲಿ ಮತ್ತು ಯಾವಾಗ ಚಿತ್ರೀಕರಣಗೊಂಡಿದೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಶುಕ್ರವಾರದಿಂದ ಎಕ್ಸ್ (ಟ್ವಿಟರ್) ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೋ ಸಾವಿರಾರು ವೀಕ್ಷಣೆಗಳನ್ನು ಪಡೆದಿದ್ದು, ರಾಷ್ಟ್ರೀಯ ಕ್ರೀಡಾಪಟುಗಳ ಜವಾಬ್ದಾರಿಯ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಈ ವಿವಾದದ ಬಗ್ಗೆ ಚಾಹಲ್ ಆಗಲಿ ಅಥವಾ ಅವರ ಪ್ರತಿನಿಧಿಗಳಾಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.
35
ಬದಲಾದ ಜೀವನಶೈಲಿಯ ಬಗ್ಗೆ ಹೇಳಿಕೊಂಡಿದ್ದ ಚಾಹಲ್
ಕೆಲವೇ ವಾರಗಳ ಹಿಂದೆ ಚಾಹಲ್ ಅವರು ಎಬಿ ಡಿ ವಿಲಿಯರ್ಸ್ ಅವರ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡುತ್ತಾ, ತಮ್ಮ ವೃತ್ತಿಜೀವನವನ್ನು ವಿಸ್ತರಿಸಲು ಜೀವನಶೈಲಿಯಲ್ಲಿ ಶಿಸ್ತು ಅಳವಡಿಸಿಕೊಂಡಿರುವುದಾಗಿ ಹೇಳಿದ್ದರು. "ಗಾಯಗಳಿಂದ ದೂರವಿರಲು ಮತ್ತು ಫಿಟ್ನೆಸ್ ಕಾಪಾಡಿಕೊಳ್ಳಲು ನಾನು ಕಳೆದ ಆರು ತಿಂಗಳಿನಿಂದ ಮದ್ಯಪಾನವನ್ನು ಸಂಪೂರ್ಣವಾಗಿ ಬಿಟ್ಟಿದ್ದೇನೆ. ಯುವ ಆಟಗಾರರಿಗೆ ಮಾದರಿಯಾಗಲು ಬಯಸುತ್ತೇನೆ" ಎಂದು ಚಾಹಲ್ ತಿಳಿಸಿದ್ದರು. ಅಂತಹದರಲ್ಲಿ ಈ ಧೂಮಪಾನದ ವಿಡಿಯೋ ಹೊರಬಂದಿರುವುದು ಅವರ ಅಭಿಮಾನಿಗಳಿಗೆ ಆಶ್ಚರ್ಯ ತಂದಿದೆ.
ವಿಡಿಯೋದಲ್ಲಿ ಕಂಡುಬಂದ ವ್ಯಕ್ತಿ ಸಾರ್ವಜನಿಕ ರಸ್ತೆಯ ಮೇಲೆ ಸಿಗರೇಟ್ ತುಂಡನ್ನು ಎಸೆದಿರುವುದು ನೆಟ್ಟಿಗರನ್ನು ಕೆರಳಿಸಿದೆ. ಕ್ರೀಡಾಪಟುಗಳು ಸಾರ್ವಜನಿಕವಾಗಿ ಇಂತಹ ಬೇಜವಾಬ್ದಾರಿ ವರ್ತನೆ ತೋರುವುದು ಎಷ್ಟು ಸರಿ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಚಾಹಲ್ ಈಗ 35 ವರ್ಷ ವಯಸ್ಸಿನ ಹಿರಿಯ ಆಟಗಾರನಾಗಿದ್ದು, ತಂಡದಲ್ಲಿ ಶೇ. 150ರಷ್ಟು ಶ್ರಮ ಹಾಕಲು ಬಯಸುತ್ತೇನೆ ಎಂದು ಇತ್ತೀಚೆಗಷ್ಟೇ ಹೇಳಿದ್ದರು.
55
ಐಪಿಎಲ್ 2026ರ ಪ್ರದರ್ಶನ
ಪ್ರಸ್ತುತ ಐಪಿಎಲ್ 2026ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಚಹಲ್, ಈಗಾಗಲೇ ಆಡಿದ ಮೂರು ಪಂದ್ಯಗಳಲ್ಲಿ ಮೂರು ವಿಕೆಟ್ ಪಡೆದಿದ್ದಾರೆ. ಕಳೆದ ಆವೃತ್ತಿಯಲ್ಲೂ 14 ಪಂದ್ಯಗಳಲ್ಲಿ 16 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮುಂದಿನ ಪಂದ್ಯಕ್ಕೆ ಪಂಜಾಬ್ ಸಿದ್ಧವಾಗುತ್ತಿರುವಾಗಲೇ ಈ ಆಫ್-ಫೀಲ್ಡ್ ವಿವಾದವು ಚಾಹಲ್ ಅವರಿಗೆ ತಲೆನೋವಾಗಿ ಪರಿಣಮಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.