ಬೆಳಗಾವಿ(ಜ. 24) ಗೋವಾಕ್ಕೆ ಹೊರಟಿದ್ದ ಬಾಲ್ಯ ಗೆಳತಿಯರು ಧಾರವಾಡದ ಬಳಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಮತ್ತೆ ಅಂತಹುದೆ ಘೋರ ಅಪಘಾತವೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದುಹೋಗಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಚಡಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಬಳಿ ಅಪಘಾತವಾಗಿದ್ದು ಡಿಕ್ಕಿಯ ರಭಸಕ್ಕೆ ಕಾರು ಬಸ್ ನ ಅಡಿ ಸೇರಿದೆ. ಕ್ರೇನ್ ಮೂಲಕ ಕಾರು ಹೊರ ತೆಗೆಯಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಯರಗಟ್ಟಿಯಿಂದ ಬೆಳಗಾವಿಯತ್ತ ಕಾರು ಸಂಚಾರ ಮಾಡುತ್ತಿತ್ತು. ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. Four Killed as KSRTC Bus Hits Car Saundatti Belagavi ಬೆಳಗಾವಿ; ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ