Published : May 04, 2021, 08:56 PM ISTUpdated : May 04, 2021, 10:26 PM IST
ಬೆಂಗಳೂರು(ಮೇ 04) ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್ ರೂಂಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಡ್ ಬ್ಲಾಕಿಂಗ್ ದಂಧೆಯನ್ನು ಬಟಾಬಯಲು ಮಾಡಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.