Sambhal crime news: ಪತಿಯೊಂದಿಗೆ ಜಗಳವಾಡಿದ ಪತ್ನಿ ಆತನ ಖಾಸಗಿ ಭಾಗವನ್ನು ಬ್ಲೇಡ್‌ನಿಂದ ಕತ್ತರಿಸಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ತರ ಪ್ರದೇಶದ ಸಂಭಾಲ್‌ನಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಗಂಡನ ಖಾಸಗಿ ಭಾಗವನ್ನು ಬ್ಲೇಡ್‌ನಿಂದ ಕತ್ತರಿಸಿದ್ದಾರೆ. ಪತ್ನಿಯಿಂದಲೇ ತನಗೆ ಈ ಸ್ಥಿತಿ ಬಂದಿದೆ ಎಂದು ಸಂತ್ರಸ್ತ ಗಂಡ ಆರೋಪಿಸಿದ್ದಾನೆ.
25
ಗಂಡ-ಹೆಂಡತಿ ನಡುವೆ ದೀರ್ಘ ಸಮಯದವರೆಗೆ ಮಾತಿನ ಚಕಮಕಿ
ಶುಕ್ರವಾರ ರಾತ್ರಿ ಗಂಡ-ಹೆಂಡತಿ ನಡುವೆ ದೀರ್ಘ ಸಮಯದವರೆಗೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೋಪಗೊಂಡ ಪತ್ನಿ, ಪತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಪತಿಯನ್ನು ಸ್ಥಳೀಯ ಸಾಮುದಾಯಿಕ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಲಿಗಢ್‌ಗೆ ಶಿಫ್ಟ್ ಮಾಡಲಾಗಿದೆ. ಈ ಘಟನೆಯ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
35
ಇಬ್ಬರ ಜಗಳ
ರಾಜು ಎಂಬಾತನ ಮದುವೆ ಮಿರ್ಜಾಪುರುದ ಯುವತಿ ಜೊತೆ ನಡೆದಿತ್ತು. ಮದುವೆ ಬಳಿಕ ರಾಜು ಪತ್ನಿಯೊಂದಿಗೆ ಪುಟ್ಟ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಇಬ್ಬರ ಜಗಳ ನಡೆದಿದೆ. ಹಲ್ಲೆ ಬಳಿಕ ರಕ್ತದ ಮಡುವಿನಲ್ಲಿದ್ದ ರಾಜು ಅವರನ್ನು ಕುಟುಂಬಸ್ಥರು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗಂಡ-ಹೆಂಡತಿ ಮಧ್ಯೆ ಪದೇ ಪದೇ ಜಗಳ ನಡೆಯುತ್ತಿತ್ತು. ಇಬ್ಬರ ದಾಂಪತ್ಯ ಸುಖಮಯವಾಗಿರಲಿಲ್ಲ ಎಂದು ರಾಜು ಕುಟುಂಬಸ್ಥರು ಹೇಳಿದ್ದಾರೆ. ಸದ್ಯ ರಾಜು ಪತ್ನಿ ಪೊಲೀಸರ ವಶದಲ್ಲಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದರೆ ಈವರೆಗೆ ಯಾವುದೇ ಲಿಖಿತ ದೂರು ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಸಂತ್ರಸ್ತ ವ್ಯಕ್ತಿಯ ಖಾಸಗಿ ಭಾಗದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ. ಇಬ್ಬರ ನಡುವೆ ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ ಎಂದು ಠಾಣೆಯ ನಿರೀಕ್ಷಾಧಿಕಾರಿ ಗುನ್ನೈರ್ ಅಖಿಲೇಶ್ ಮಾಹಿತಿ ನೀಡಿದ್ದಾರೆ.