ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕಣಕ್ಕೆ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

Published : Mar 17, 2026, 11:34 AM IST

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕಣಕ್ಕೆ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ, ನಮ್ಮ ಇನ್ಸ್‌ಪೆಕ್ಟರ್ ಮೂಡುಬಿದಿರೆಗೆ ಒಳ್ಳೆಯವರು, ನ್ಯಾಯ ಕೊಡಿಸ್ತಾರೆ, ಆದರೆ ನನ್ನ ಅಕ್ಕ ಸರಿಯಿಲ್ಲ. ಷಡ್ಯಂತ್ರ ಮಾಡಿದ್ದಾಳೆ ಎಂದಿದ್ದಾರೆ. 

PREV
15
ಮೂಡುಬಿದಿರೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಮೂಡುಬಿದಿರೆ ಪೊಲೀಸ್ ಕಾಮಕಾಂಡ ಪ್ರಕರಣ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಮೂಡುಬಿದಿರೆಯಲ್ಲಿ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿರುವ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಇನ್ಸ್‌ಪೆಕ್ಟರ್ ಸಂದೇಶ್ ಮೇಲೆ ಲೈಂಗಿಕ ಆರೋಪ ಮಾಡಿರುವ ಸಂತ್ರಸ್ತ ಮಹಿಳೆ ವಿರುದ್ಧವೇ ಇದೀಗ ಆಕೆಯ ಸಹೋದರಿ ಗಂಬೀರ ಆರೋಪ ಮಾಡಿ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ.

25
ಸಹೋದರಿ ಸರಿಯಿಲ್ಲ ಎಂದ ಸಂತ್ರಸ್ತ ಸಹೋದರಿ

ಏಷ್ಯಾನೆಟ್ ಸುವರ್ಣನ್ಯೂಸ್ ಲೈವ್ ಕಾರ್ಯಕ್ರಮದಲ್ಲಿ ಮೂಡುಬಿದಿರಿ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಮೇಲಿನ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಂತ್ರಸ್ತೆ ಸಹೋದರಿ, ಇಡೀ ಪ್ರಕರಣದಲ್ಲಿ ಸಂದೇಶ್ ನಿರಪರಾಧಿ ಎಂದಿದ್ದಾರೆ. ಕುಟುಂಬ ಕಲಹದ ಮೇಲಿನ ದ್ವೇಷದಿಂದ ಇನ್ಸ್‌ಪೆಕ್ಟರ್ ಮೇಲೆ ಸಂತ್ರಸ್ತೆ ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಸಂದೇಶ್ ಉತ್ತಮ ವ್ಯಕ್ತಿ ಎಂದು ಸರ್ಟಿಫಿಕೇಟ್ ನೀಡಿದ್ದಾರೆ.

35
ಸಂದೇಶ್ ಮೂಡುಬಿದಿರಿಗೆ ಒಳ್ಳೆಯ ಇನ್ಸ್‌ಪೆಕ್ಟರ್

ಸಂದೇಶ್ ಉತ್ತಮ ವ್ಯಕ್ತಿ, ನನ್ನ ಸಹೋದರಿ ಇಲ್ಲ ಸಲ್ಲದ ದ್ವೇಷದಿಂದ ಹಗೆತನ ಸಾಧಿಸುತ್ತಿದ್ದಾರೆ. ಸಂದೇಶ್ ನ್ಯಾಯದ ಪರವಾಗಿದ್ದಾರೆ ಎಂದು ಸಂತ್ರಸ್ತೆ ಸಹೋದರಿ ಏಷ್ಯಾನೆಟ್ ಸುವರ್ಣನ್ಯೂಸ್ ಲೈವ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ನಾನು ಸ್ವಯಂ ಆಗಿ ಹೇಳುತ್ತಿದ್ದೇನೆ, ನನಗೆ ಯಾರೂ ಈ ರೀತಿ ಹೇಳುವಂತೆ ಸೂಚಿಸಿಲ್ಲ ಎಂದು ಸಂತ್ರಸ್ತೆ ಸಹೋದರಿ ಸ್ಪಷ್ಟಪಡಿಸಿದ್ದಾರೆ.

45
ಸಂತ್ರಸ್ತೆ ಸಮಾದಲ್ಲಿ ಕೆಟ್ಟ ಕೆಲಸ ಮಾಡಿದ್ದಾರೆ

ಸಂತ್ರಸ್ತೆ ಸಮಾಜದಲ್ಲಿ ಕೆಟ್ಟ ಕೆಲಸ ಮಾಡುತ್ತಿದ್ದಾರೆ. ಅದನ್ನು ಮುಚ್ಚಿಹಾಕಲು ಸಂದೇಶ್ ವಿರುದ್ಧ ಈ ರೀತಿಯ ಆರೋಪ ಮಾಡುತ್ತಿದ್ದಾರೆ. ನನ್ನ ಸಹೋದರಿ ಸರಿಯಿಲ್ಲ, ಇನ್ಸ್‌ಪೆಕ್ಟರ್ ಸರಿ ಇದ್ದಾರೆ ಎಂದಿದ್ದಾರೆ. ಇದೇ ವೇಳೆ ಪೊಲೀಸ್ ಸಂದೇಶ್ ವಿರುದ್ಧ ಇತರ ಮಹಿಳೆಯರ ಆರೋಪದ ಬಗ್ಗೆ ನನಗೆ ಗೊತ್ತಿಲ್ಲ. ಅದು ನನಗೆ ಬೇಕಾಗಿಲ್ಲ ಎಂದು ಸಂತ್ರಸ್ತೆ ಸಹೋದರಿ ಹೇಳಿದ್ದಾರೆ.

55
ಏನಿದು ಘಟನೆ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ರಾತ್ರಿ ವೇಳೆ ಕೌಂಪೌಂಡ್ ಹಾರಿ ಮನೆಗೆ ನುಗ್ಗುತ್ತಿದ್ದಾರೆ. ಅಡುಗೆ ಮನೆಯಲ್ಲಿ ಮಹಿಳೆ ಜೊತೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿದೆ. ಇದೇ ವೇಳೆ ಮಹಿಳೆ ಜೊತೆಗೆ ಅವಾಚ್ಯ ಶಬ್ದಗಳಲ್ಲಿ ಮಾತನಾಡುತ್ತಿರುವ ಆಡಿಯೋ ಕೂಡ ವೈರಲ್ ಆಗಿದೆ. ಈ ಆಡಿಯೋದಲ್ಲಿ ಅರೆಸ್ಟ್ ಆಗಿರುವ ಗಂಡನ ಬಿಡುಗಡೆ ಮಾಡಲು 25 ಲಕ್ಷ ರೂಪಾಯಿ ಕೊಡಬೇಕು, ಇಲ್ಲದಿದ್ದರೆ ನೀನು ಬಂದು ನನ್ನ ಜೊತೆ ಮಲಗು, ನಿನ್ನ ಮಗಳು ಮುಂದಿನ ಟಾರ್ಗೆಟ್ ಎಂದಿರುವ ವಿಡಿಯೋ ಭಾರಿ ಕೋಲಾಹಲ ಸೃಷ್ಟಿಯಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಕಮಿಷನರ್ ತನಿಖೆಗೆ ಆದೇಶ ನೀಡಿದ್ದಾರೆ.

ಏನಿದು ಘಟನೆ

Read more Photos on
click me!

Recommended Stories