ನಗರದಲ್ಲಿ ಶನಿವಾರ ಅಸೋಚಂ ಏರ್ಪಡಿಸಿದ್ದ ‘ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಉನ್ನತ ಶಿಕ್ಷಣದಲ್ಲಿ ಆಗುವ ಬದಲಾವಣೆ ಮತ್ತು ಬೀರುವ ಪ್ರಭಾವ’ ಕುರಿತ ಸಂವಾದದಲ್ಲಿ ವರ್ಚುವಲ್ ವೇದಿಕೆ ಮೂಲಕ ಮಾತನಾಡಿದ ಅವರು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಶೈಕ್ಷಣಿಕವಾಗಿ ಶರವೇಗದಲ್ಲಿ ಬೆಳೆಯುತ್ತಿದೆ. ಸರಾಸರಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಎರಡು ವಿಶ್ವವಿದ್ಯಾಲಯಗಳಿವೆ. ಬೆಂಗಳೂರು ನಗರದಲ್ಲಿಯೇ 880ಕ್ಕೂ ಹೆಚ್ಚು ಕಾಲೇಜುಗಳಿವೆ. ಹೀಗಾಗಿ, ಶಿಕ್ಷಣದ ರಾಜಧಾನಿಯಾಗಿ ಹೊರಹೊಮ್ಮುವ ಎಲ್ಲ ಶಕ್ತಿಯೂ ಈ ನಗರಕ್ಕಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಈ ಗುರಿಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಎಂದು ಹೇಳಿದರು.
ಧಾರವಾಡದಲ್ಲಿ 100 ಕೋಟಿ ರು. ವೆಚ್ಚದಲ್ಲಿ ಸ್ಥಾಪಿಸಿರುವ ಉನ್ನತ ಶಿಕ್ಷಣ ಅಕಾಡೆಮಿ ಕೂಡ ಅನುಕೂಲವಾಗಲಿದೆ. ಇದರ ಜೊತೆ ಜೊತೆಯಲ್ಲಿಯೇ ಬಹು ಉದ್ದೇಶಿತ ಹಾಗೂ ಬಹು ವಿಷಯಗಳನ್ನು ಬೋಧನೆ ಮಾಡುವ ವಿವಿಗಳನ್ನು ಕೂಡ ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದ ಅಶ್ವತ್ಥ ನಾರಾಯಣ
ಶಿಕ್ಷಣ ಕ್ಷೇತ್ರದಲ್ಲಿ ದೇಶದಲ್ಲಿಯೇ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದಷ್ಟುಬೇಗ ನೀತಿ ಜಾರಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಒಮ್ಮೆ ನೀತಿಯನ್ನು ಜಾರಿಗೊಳಿಸಿದರೆ ರಾಜ್ಯದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಗುರುತರ ಬದಲಾವಣೆಗಳು ಗೋಚರವಾಗುತ್ತವೆ. ರಾಜ್ಯದ ಶಿಕ್ಷಣದ ದಿಕ್ಕನ್ನೇ ಬದಲಿಸುವಂತಹ ಅಂಶಗಳು ಈ ನೀತಿಯಲ್ಲಿವೆ ಎಂದು ನುಡಿದರು.
ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದ ಹಂತದವರೆಗೂ ಅಪಾರ ಬದಲಾವಣೆಗಳನ್ನು ಕಾಣಬಹುದು. ಈ ಮೂಲಕ ಭಾರತವು ಜಗತ್ತಿನ ಜ್ಞಾನ ಕಣಜವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅಶ್ವತ್ಥ ನಾರಾಯಣ
ಸಂವಾದದಲ್ಲಿ ಅಸೋಚಂ ರಾಜ್ಯ ಘಟಕದ ಅಧ್ಯಕ್ಷ ಬಿ.ವಿ. ನಾಯ್ಡು, ಪ್ರಾದೇಶಿಕ ನಿರ್ದೇಶಕಿ ಉಮಾ ನಾಯರ್, ಎಐಸಿಟಿಇ ಅಧ್ಯಕ್ಷ ಪೊ. ಅನಿಲ್ ಸಹಸ್ರಬುದ್ಧೆ, ಬೆಂಗಳೂರಿನ ಐಐಐಟಿ-ಬಿ ನಿರ್ದೇಶಕ ಪೊ›. ಎಸ್. ಸಡಗೋಪನ್ ಮುಂತಾದವರು ಪಾಲ್ಗೊಂಡಿದ್ದರು.