ಚಿತ್ರಗಳು: ಇವರೇ ಕರ್ನಾಟಕ SSLC ಟಾಪರ್ಸ್, 625ಕ್ಕೆ 625 ಅಂಕ ಪಡೆದ ಸಾಧಕರು

First Published | Aug 10, 2020, 6:23 PM IST

ಕೊರೋನಾ ಆತಂಕದ ನಡುವೆಯೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಭಾರೀ ನಿರೀಕ್ಷೆಯಿಂದ ಕಾದಿದ್ದ ಎಸ್​ಎಸ್ಎಲ್‌ಸಿ
 ಪರೀಕ್ಷೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. 2019-20ನೇ ಸಾಲಿನ ಎಸ್​ಎಸ್‌ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6 ಮಕ್ಕಳು ರಾಜ್ಯಕ್ಕೆ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. 625/625 ಗಳಿಸಿದ ವಿದ್ಯಾರ್ಥಿಗಳ ವಿವರ ಈ ಕೆಳಗಿನಂತಿದೆ ನೋಡಿ

625ಕ್ಕೆ 625 ಅಂಕ ಪಡೆದ ಶಿರಸಿಯ ಸರ್ಕಾರಿ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ,
ಬೆಂಗಳೂರಿನ ನಾಗಸಂದ್ರದ ಸೇಂಟ್​ ಮೇರಿಸ್​ ಶಾಲೆಯ ಚಿರಾಯು ಕೆ.ಎಸ್​ ಸಹ 625ಕ್ಕೆ 625 ಅಂಕ ಪಡೆದು ಫಸ್ಟ್ ಬಂದಿದ್ದಾರೆ.
Tap to resize

ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ‌ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಅನುಷ್ ಎ.ಎಲ್ 625625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.ಈತ ಬಳ್ಪ ಗ್ರಾಮದ ಎಣ್ಣೆಮಜಲು ಲೋಕೇಶ್ ಮತ್ತು ಉಷಾ ದಂಪತಿಗಳ ಪುತ್ರ
ಚಿಕ್ಕಮಗಳೂರಿನ ಸೆಂಟ್ ಜೋಸೆಫ್ ಕಾನ್ವೆಂಟ್ ಗರ್ಲ್ಸ್​ ಹೈಸ್ಕೂಲ್​ನ ತನ್ಮಯಿ ಐಪಿ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.
ಮತ್ತೊಬ್ಬ ಟಾಪರ್ ಎಂ.ಪಿ. ಧೀರಜ್ ರೆಡ್ಡಿ ಮೂಲತಃ ಬಂಗಾರಪೇಟೆ ತಾಲೂಕಿ ಕ್ಯಾಸಂಬಳ್ಳಿ ಗ್ರಾಮದ ವಿದ್ಯಾರ್ಥಿ. ಮಂಡ್ಯ ತಾಲೂಕಿನ ಮಾರದೇವನಹಳ್ಳಿ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲೀಷ್ ಮಾಧ್ಯಮ ಹೈಸ್ಕೂಲ್‌ನಲ್ಲಿ ವಿದ್ಯಾಬ್ಯಾಸ್ ಮಾಡುತ್ತಿದ್ದರು.
ಬೆಂಗಳೂರಿನ ಪೂರ್ಣಪ್ರಜ್ಞಾ ಎಜುಕೇಷನ್ ಸೆಂಟರ್​ನ ನಿಖಿಲೇಶ್ ಎನ್​ ಮರಲಿ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

Latest Videos

click me!