ಪ್ರವಾಹದಲ್ಲಿ ಪುಸ್ತಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳನ್ನ ಕರೆಯಿಸಿ ನೆರವು ನೀಡಿದ ಸಿಎಂ
First Published | Oct 27, 2020, 8:40 PM ISTಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಹೊಸಕೆರೆಹಳ್ಳಿಯ ಕೆಲ ವಿದ್ಯಾರ್ಥಿಗಳ ನೋಟ್ ಬುಕ್ ಮತ್ತು ಓದುವ ಪುಸ್ತಕ ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದವು. ಈ ಬಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ಗಮನಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸಕ್ಕೆ ವಿದ್ಯಾರ್ಥಿಗಳನ್ನು ಕರೆಯಿಸಿ ಅವರಿಗೆ ನೋಟ್ ಬುಕ್ ಗಳನ್ನು ವಿತರಿಸಿ ಪುಸ್ತಕಗಳನ್ನು ಕೊಂಡುಕೊಳ್ಳಲು ಆರ್ಥಿಕ ನೆರವನ್ನು ನೀಡಿದರು