ಬೆಂಗಳೂರು: ಪುನೀತ್ ಸ್ಯಾಟ್‌ಲೈಟ್ ವರ್ಕ್ ಸ್ಟೇಷನ್‌ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

First Published | Oct 29, 2022, 2:52 PM IST

ಬೆಂಗಳೂರು(ಅ.29): ನಗರದ ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಶನ್ ವತಿಯಿಂದ ಸ್ಥಾಪಿಸಿರುವ ಪುನೀತ್ ಸ್ಯಾಟ್‌ಲೈಟ್ ವರ್ಕ್ ಸ್ಟೇಷನ್‌ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು(ಶನಿವಾರ) ಉದ್ಘಾಟಿಸಿದ್ದಾರೆ. 

ಪುನೀತ್ ರಾಜ್‌ಕುಮಾರ್‌ ಅವರ ಪ್ರಥಮ ಪುಣ್ಯ ಸ್ಮರಣೆ ಹಿನ್ನೆಲೆ ಮಲ್ಲೇಶ್ವರದ ಬಾಲಕರ ಶಾಲೆಯಲ್ಲಿ ಸ್ಯಾಟ್‌ಲೈಟ್ ಕೇಂದ್ರವನ್ನ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ ಬಳಿಕ ಪುನೀತ್ ಸ್ಯಾಟ್‌ಲೈಟ್ ವರ್ಕ್ ಸ್ಟೇಷನ್‌ ಬಗ್ಗೆ ಮಾಹಿತಿಯನ್ನ ಪಡೆದುಕೊಂಡಿದ್ದಾರೆ. 

ಮಲ್ಲೇಶ್ವರ ಸ್ಕೂಲ್ ಮಾಡೆಲ್ ಹಾಗೂ ಪುನೀತ್ ಸ್ಯಾಟ್‌ಲೈಟ್ ವರ್ಕ್ ಸ್ಟೇಷನ್ ಉದ್ಘಾಟನೆ ಬಳಿಕ ಅಪ್ಪು ಭಾವಚಿತ್ರಕ್ಕೆ ಸಿಎಂ ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥ್‌ ನಾರಾಯಣ್ ಅವರು ಪುಷ್ಪಾರ್ಪಣೆ ಮಾಡಿದ್ದಾರೆ. 

Tap to resize

ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಇಂದು ಪುನೀತ್ ಸ್ಯಾಟಲೈಟ್ ಕೇಂದ್ರ ಉದ್ಘಾಟನೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಅಶ್ವತ್ಥ್‌ ನಾರಾಯಣ್ ಅವರು ಸಾಥ್ ನೀಡಿದ್ದರು. 

ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಅಶ್ವತ್ಥ್‌ ನಾರಾಯಣ್ ಸೇರಿದಂತೆ ಗತರ ಗಣ್ಯರು  ಭಾಗವಹಿಸಿದ್ದರು.

Latest Videos

click me!