ಶಾಲೆ-ಕಾಲೇಜು ಪುನರಾರಂಭ: ನಡೆದಿವೆ ಮಹತ್ವದ ಬೆಳವಣಿಗೆಗಳು

First Published Sep 26, 2020, 3:22 PM IST

ಈಗಾಗಲೇ 2020-21 ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಬೇಕಿತ್ತು. ಆದ್ರೆ, ಕೊರೋನಾ ಮಾಹಾಮಾರಿ ಎದುರಾಗಿದ್ದರಿಂದ ಈ ವರ್ಷ ಹೊಸ ಶೈಕ್ಷಣಿಕ ವರ್ಷವನ್ನು ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಿಲ್ಲ. ಇದರಿಂದ ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಇದೀಗ ಲಾಕ್‍ಡೌನ್ ಬಳಿಕ ಶಾಲೆ ಕಾಲೇಜುಗಳು ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. 

ಇಂದಿನಿಂದ ಹರಿಯಾಣ, ಅಸ್ಸಾಂ ಮತ್ತು ಜಮ್ಮು ಕಾಶ್ಮೀರದಲ್ಲಿ ಶಾಲಾ-ಕಾಲೇಜುಗಳು ಪ್ರಾಯೋಗಿಕವಾಗಿ ಪುನಾರಂಭಕ್ಕೆ ರಾಜ್ಯ ಸರ್ಕಾರಗಳು ಗ್ರೀನ್ ಸಿಗ್ನಲ್ ನೀಡಿವೆ.
undefined
ಖಾಸಗಿ ಶಾಲೆಗಳ ಒತ್ತಡ ಹಿನ್ನೆಲೆ ಮತ್ತಷ್ಟು ರಾಜ್ಯಗಳಲ್ಲಿ ಶಾಲೆ ಕಾಲೇಜುಗಳನ್ನು ಪುನಾರಂಭಿಸುವ ನಿಟ್ಟಿನಲ್ಲಿ ತಯಾರಿಗಳು ನಡೆದಿದೆ.
undefined
ಬಿಹಾರದಲ್ಲಿ ಸೆಪ್ಟೆಂಬರ್ 28 ರಿಂದ ಕಂಟೈನ್ಮೆಂಟ್ ಝೋನ್ ಹೊರತಾದ ಪ್ರದೇಶಗಳಲ್ಲಿ 9 ರಿಂದ 12ನೇ ತರಗತಿ ಮಕ್ಕಳು ಶಾಲೆಗೆ ತೆರಳಿ ಶಿಕ್ಷಕರಿಂದ ಶೈಕ್ಷಣಿಕ ಮಾಹಿತಿ ಪಡೆದುಕೊಳ್ಳಬಹುದು ಎಂದು ಸೂಚಿಸಲಾಗಿದೆ.
undefined
ತ್ರಿಪುರದಲ್ಲಿ ಅಕ್ಟೋಬರ್ 5 ರಿಂದ 9-12ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಬಂದು ಶಿಕ್ಷಕರನ್ನು ಸಂಪರ್ಕಿಸಬಹುದು ಎಂದು ಶಿಕ್ಷಣ ಸಚಿವ ರತನ್ ಲಾಲ್ ನಾಥ್ ಹೇಳಿದ್ದಾರೆ. ಆದರೆ ಶಾಲೆಗೆ ಬರುವ ಮುನ್ನ ಪೊಷಕರ ಅನುಮತಿ ಕಡ್ಡಾಯ ಎಂದು ತಿಳಿಸಿದ್ದಾರೆ.
undefined
ಅಕ್ಟೋಬರ್ 1 ರಿಂದ ತಮಿಳುನಾಡಿನಲ್ಲಿ 10,11,12 ನೇ ತರಗತಿ ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ತೆರಳಬಹುದಾಗಿದ್ದು ಶಿಕ್ಷಕರಿಂದ ಪ್ರಾಥಮಿಕ ಮಾಹಿತಿ ಪಡೆದುಕೊಳ್ಳಬಹುದು, ಶಾಲಾ ಕಾಲೇಕು ತೆರಳುವ ಮುನ್ನ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಹೇಳಿದೆ.
undefined
ದುರ್ಗಾ ಪೂಜೆ ಹಿನ್ನಲೆ ಅಕ್ಟೋಬರ್ ಮಧ್ಯ ಭಾಗದಲ್ಲಿ ಪಶ್ಚಿಮ ಬಂಗಾಳದಲ್ಲಿ ಶಾಲೆಗಳ ಆರಂಭ ಅನುಮಾನ ಎನ್ನಲಾಗಿದ್ದು ನವೆಂಬರ್ ಮಧ್ಯಭಾಗದಲ್ಲಿ ಪುನಾರಂಭವಾಗಬಹುದು ಎಂದು ಹೇಳಲಾಗಿದೆ.
undefined
ದೆಹಲಿಯಲ್ಲಿ ಅಕ್ಟೋಬರ್ 5 ರಿಂದ ಶಾಲೆ ಕಾಲೇಜು ಪುನಾರಂಭಿಸಲು ಕೇಜ್ರಿವಾಲ್ ಸರ್ಕಾರ ನಿರ್ಧಾರ ಮಾಡಿದ್ದು ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಿದ್ದತೆ ಮಾಡಿಕೊಳ್ಳುತ್ತಿದೆ.
undefined
ಉತ್ತರ ಪ್ರದೇಶದಲ್ಲಿ ಖಾಸಗಿ ಶಾಲೆ ಸಂಘ ಡಿಸಿಎಂ ದಿನೇಶ್ ಶರ್ಮಾ ಭೇಟಿ ಮಾಡಿ ಶಾಲೆಗಳ ಪುನಾರಂಭಕ್ಕೆ ಒತ್ತಾಯಿಸಿದ್ದಾರೆ. ಅರ್ಧ ವಾರ್ಷಿಕ ಪರೀಕ್ಷೆ ದೃಷ್ಟಿಯಲ್ಲಿಟ್ಟುಕೊಂಡು ಅಕ್ಟೋಬರ್ 12 ರಿಂದ 9-12ನೇ ತರಗತಿ ಮಕ್ಕಳಿಗೆ ಶಾಲೆ ತೆರಳಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಯುಪಿ ಸರ್ಕಾರ ತಯಾರಿ ಆರಂಭಿಸಿದ್ದು ಈವರೆಗೂ ದಿನಾಂಕ ಪ್ರಕಟಿಸಿಲ್ಲ.
undefined
ಇನ್ನು ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಚರ್ಚೆಗಳು ನಡೆದಿವೆ. ಆದ್ರೆ, ಇದುವರೆಗೂ ಯಾವುದೇ ಶಾಲಾ-ಕಾಲೇಜು ಪ್ರಾರಂಭದ ಬಗ್ಗೆ ಮಾಹಿತಿ ನೀಡಿಲ್ಲ.
undefined
click me!