Digitization in Education System: ಶಿಕ್ಷಣ ವ್ಯವಸ್ಥೆ ಡಿಜಿಟಲೀಕರಣ: ಸಚಿವ ಅಶ್ವತ್ಥ

First Published | Jan 13, 2022, 7:32 AM IST

ಬೆಂಗಳೂರು(ಜ.13):  ಮುಂದಿನ ಒಂದು ವರ್ಷದಲ್ಲಿ ಇಡೀ ಶಿಕ್ಷಣ ವ್ಯವಸ್ಥೆ(Education System) ಡಿಜಿಟಲೀಕರಣಗೊಳ್ಳಲಿದೆ. ದೇಶದ ಎಲ್ಲ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ಲಭ್ಯವಾಗಲಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಸಮಾನತೆ ಸಾಧಿಸಲಿದ್ದೇವೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ(Dr CN Ashwathnarayan) ತಿಳಿಸಿದ್ದಾರೆ.

‘ಸಮರ್ಥ ಭಾರತ’ ಸಂಘಟನೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 159ನೇ ಜಯಂತಿಯಲ್ಲಿ ಭಾಗವಹಿಸಿದ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ

ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಡಿಜಿಟಲ್‌ ವ್ಯವಸ್ಥೆ ಜಾರಿಯಲ್ಲಿ ಇರದ ಹಿನ್ನೆಲೆಯಲ್ಲಿ ಎಲ್ಲರಿಗೂ ಒಂದೇ ರೀತಿಯ ಶಿಕ್ಷಣ ನೀಡಲು ಅಸಾಧ್ಯವಾಗಿತ್ತು. ಹೀಗಾಗಿ ಇಡೀ ಶಿಕ್ಷಣ ವ್ಯವಸ್ಥೆಯನ್ನು ಡಿಜಿಟಲೀಕರಣ(Digitization) ಮಾಡುತ್ತಿರುವುದರಿಂದ ಮುಂದಿನ ವರ್ಷಗಳಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಲಭ್ಯವಾಗಲಿದೆ ಎಂದು ತಿಳಿಸಿದ ಸಚಿವ ಅಶ್ವತ್ಥನಾರಾಯಣ

Tap to resize

ಬೆಂಗಳೂರು ನಗರ ವಿವಿ ರಿಜಿಸ್ಟ್ರಾರ್‌ ಶ್ರೀಧರ್‌, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ವಿಭಾಗದ ಉಪನಿರ್ದೇಶಕ ಡಾ. ಎಂ.ಜಯಪ್ರಕಾಶ್‌, ಬೆಂಗಳೂರು ನಗರ ವಿವಿಯ ಪ್ರೊ.ನರಸಿಂಹಮೂರ್ತಿ ಉಪಸ್ಥಿತರಿದ್ದರು.

‘ಸಮರ್ಥ ಭಾರತ’ ಸಂಘಟನೆ ಬುಧವಾರ ನಗರದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ, ಬೆಂಗಳೂರು ನಗರ ವಿವಿ ರಿಜಿಸ್ಟ್ರಾರ್‌ ಶ್ರೀಧರ್‌, ಪ್ರೊ.ನರಸಿಂಹಮೂರ್ತಿ, ಡಾ. ಎಂ.ಜಯಪ್ರಕಾಶ್‌ ಉಪಸ್ಥಿತರಿದ್ದರು.

Latest Videos

click me!