ಭಾರತದ ಶ್ರೀಮಂತ ಅಂಬಾನಿ ಕುಟುಂಬದಲ್ಲಿ ಯಾರು ಎಷ್ಟು ಓದಿದ್ದಾರೆ? ಸೊಸೆಯಂದಿರ ಶೈಕ್ಷಣಿಕ ಅರ್ಹತೆಯೇನು?

First Published Aug 2, 2023, 12:06 PM IST

ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ವಿಶ್ವದ ಶ್ರೀಮಂತ ಕುಟುಂಬಗಳಲ್ಲಿ ಒಂದು, ಇವರ ಕುಟುಂಬವು ಉನ್ನತ ಶಿಕ್ಷಣ ಪಡೆದ್ದಾರೆ. ಪತ್ನಿ ನೀತಾ ಅಂಬಾನಿ ಮತ್ತು ಮಕ್ಕಳಾದ ಆಕಾಶ್ ಅಂಬಾನಿ, ಇಶಾ ಅಂಬಾನಿ ಮತ್ತು ಅನಂತ್ ಅಂಬಾನಿ ಸೇರಿದಂತೆ ಅವರ ಕುಟುಂಬದ ಸದಸ್ಯರು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ವಿವಿಧ ಪಾತ್ರಗಳಿಗೆ ಸಕ್ರಿಯವಾಗಿ ಕೊಡುಗೆ ನೀಡುತ್ತಿದ್ದಾರೆ.  ಫೋರ್ಬ್ಸ್ ಪ್ರಕಾರ ಅಂಬಾನಿ ಕುಟುಂಬವು ಸುಮಾರು 77 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಭಾರತದ ಶ್ರೀಮಂತ ಕುಟುಂಬವಾಗಿದೆ.

ಮುಕೇಶ್ ಅಂಬಾನಿ ಅವರು ಬಾಂಬೆ ವಿಶ್ವವಿದ್ಯಾನಿಲಯದಿಂದ (ಈಗ ಮುಂಬೈ ವಿಶ್ವವಿದ್ಯಾಲಯ) ರಾಸಾಯನಿಕ ಎಂಜಿನಿಯರಿಂಗ್‌ನಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಅವರು ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಎಂಬಿಎ ಮಾಡಿದ್ದಾರೆ. ಅವರು ಮುಂಬೈನ ಪೊದ್ದಾರ್ ರಸ್ತೆಯಲ್ಲಿರುವ ಹಿಲ್ ಗ್ರ್ಯಾಂಜ್ ಹೈಸ್ಕೂಲ್‌ನಲ್ಲಿ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದರು.
 

ambani

ಮುಕೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರು ಮುಂಬೈನ ನಾರ್ಸಿ ಮೊಂಜಿ ಕಾಮರ್ಸ್ ಮತ್ತು ಅರ್ಥಶಾಸ್ತ್ರ ಕಾಲೇಜಿನಲ್ಲಿ ವಾಣಿಜ್ಯದಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಅವರು ಪ್ರಸ್ತುತ ರಿಲಯನ್ಸ್ ಫೌಂಡೇಶನ್ ಮತ್ತು ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ನ ಅಧ್ಯಕ್ಷೆ ಮತ್ತು ಸಂಸ್ಥಾಪಕರಾಗಿದ್ದಾರೆ. ನೀತಾ ಅಂಬಾನಿ ರಿಲಯನ್ಸ್ ಇಂಡಸ್ಟ್ರೀಸ್‌ನ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ತಂಡದ ಮುಂಬೈ ಇಂಡಿಯನ್ಸ್‌ನ ಮಾಲೀಕರಾಗಿದ್ದಾರೆ.

ಆಕಾಶ್ ಅಂಬಾನಿ ಮುಂಬೈನ ಧೀರೂಭಾಯಿ ಅಂಬಾನಿ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮಾಡಿದ್ದಾರೆ. 2013 ರಲ್ಲಿ, US ನ ಬ್ರೌನ್ ವಿಶ್ವವಿದ್ಯಾಲಯದಿಂದ ಅವರು ಅರ್ಥಶಾಸ್ತ್ರದಲ್ಲಿ ತಮ್ಮ ಪದವಿಯನ್ನು ಪೂರ್ಣಗೊಳಿದ್ದಾರೆ. ಅವರು ಈಗ ರಿಲಯನ್ಸ್ ಜಿಯೋ ಅಧ್ಯಕ್ಷರಾಗಿದ್ದಾರೆ.

ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ಅಮೆರಿಕದ ಯೇಲ್ ವಿಶ್ವವಿದ್ಯಾಲಯದಿಂದ ಮನೋವಿಜ್ಞಾನದಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ  MBA ಮಾಡಿದ್ದಾರೆ. ಇಶಾ ಅಂಬಾನಿ ಮೆಕಿನ್ಸೆ & ಕಂಪನಿಯಲ್ಲಿ ವ್ಯಾಪಾರ ವಿಶ್ಲೇಷಕರಾಗಿಯೂ ಕೆಲಸ ಮಾಡಿದ್ದಾರೆ.
 

ಅನಂತ್ ಅಂಬಾನಿ ಕೂಡ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಅನಂತ್ ಅಂಬಾನಿ  USನ ರೋಡ್ ಐಲ್ಯಾಂಡ್‌ನಲ್ಲಿರುವ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಪದವಿ ಅಧ್ಯಯನ ಮಾಡಿದ್ದಾರೆ.

ಶ್ಲೋಕಾ ಮೆಹ್ತಾ ಆಕಾಶ್ ಅಂಬಾನಿ ಪತ್ನಿ. ಅವರು ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ ಮತ್ತು ನ್ಯೂಜೆರ್ಸಿಯ ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಿಂದ ಮಾನವಶಾಸ್ತ್ರದಲ್ಲಿ (Anthropology ) ಪದವಿಪೂರ್ವ ಪದವಿಯನ್ನು ಪಡೆದರು. ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಪೊಲಿಟಿಕಲ್ ಸೈನ್ಸ್‌ನಿಂದ ಕಾನೂನು ಪದವಿಯನ್ನು ಗಳಿಸಿದ್ದಾರೆ.

ಅನಂತ್ ಅಂಬಾನಿ ಪತ್ನಿ ಆಗಲಿರುವ ರಾಧಿಕಾ ಮರ್ಚೆಂಟ್ ಮುಂಬೈನ ದಿ ಕ್ಯಾಥೆಡ್ರಲ್ ಮತ್ತು ಜಾನ್ ಕಾನನ್ ಸ್ಕೂಲ್, ಎಕೋಲ್ ಮೊಂಡಿಯೇಲ್ ವರ್ಲ್ಡ್ ಸ್ಕೂಲ್‌ ನಲ್ಲಿ ತಮ್ಮ ಶಿಕ್ಷಣ ಮಾಡಿದ್ದಾರೆ. ಬಿಡಿ ಸೋಮಾನಿ ಇಂಟರ್‌ನ್ಯಾಶನಲ್ ಸ್ಕೂಲ್‌ನಿಂದ ಇಂಟರ್‌ನ್ಯಾಶನಲ್ ಬ್ಯಾಕಲೌರಿಯೇಟ್ ಡಿಪ್ಲೋಮಾ ಮಾಡಿದ್ದಾರೆ. ಬಳಿಕ ನ್ಯೂಯಾರ್ಕ್ ವಿಶ್ವವಿದ್ಯಾನಿಲಯದಲ್ಲಿ ರಾಜಕೀಯ ಮತ್ತು ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು ಮತ್ತು ವೃತ್ತಿಪರ ಭರತನಾಟ್ಯ ನೃತ್ಯಗಾರ್ತಿಯೂ ಆಗಿದ್ದಾರೆ.
 

click me!