ಶಾಲಾ-ಕಾಲೇಜುಗಳ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಂಡರೂ ಮಕ್ಕಳ ಸುರಕ್ಷತೆ, ಆರೋಗ್ಯದ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಮಕ್ಕಳ ಸುರಕ್ಷತೆ, ಆರೋಗ್ಯ ಮತ್ತು ಶಿಕ್ಷಣ ಎರಡನ್ನು ಮನಸ್ಸಿನಲ್ಲಿಟ್ಟುಕೊಂಡು ತೀರ್ಮಾನ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಕೇಂದ್ರ ಸರ್ಕಾರ ಶಾಲೆಗಳನ್ನು ತೆರೆಯಲು ಆದೇಶ ಹೊರಡಿಸಿದೆ. ಇದರ ಪ್ರಕಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು 3 ವಿಷಯಗಳ ಕುರಿತು ಆರೋಗ್ಯ ಇಲಾಖೆಯ ಸಲಹೆ-ಸೂಚನೆಗಳನ್ನು ಕೇಳಿದ್ದಾರೆ. ರಾಜ್ಯದಲ್ಲಿ LKG-PUC ತನಕ ಯಾವಾಗ ಪ್ರಾರಂಭಿಸಬಹುದು, ಒಂದು ವೇಳೆ ಶಾಲೆ ಆರಂಭ ಮಾಡಿದಲ್ಲಿ ಯಾವ ತರಗತಿಗಳನ್ನು ನಾವು ಮೊದಲು ಪ್ರಾರಂಭಿಸಬಹುದು ಹಾಗೆಯೇ ಸಮುದಾಯ ಜನಪ್ರತಿನಿಧಿಗಳಿಂದ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ಸಲಹೆ ಕೇಳಿದೆ.
ಇಂದು ತಜ್ಞರ , ಅಧಿಕಾರಿಗಳ, ವೈದ್ಯರುಗಳ Technical Experts ಗಳ , ಹಾಗೂ ಶಿಕ್ಷಣ ತಜ್ಞರ ಜತೆ ಆರೋಗ್ಯ ಸಚಿವ ಶ್ರೀರಾಮುಲು ಪ್ರಾಥಮಿಕ ಸಭೆ ನಡೆಸಿ ಚರ್ಚಿಸಿದರು. ಸಭೆ ನಂತರ ಮಾತನಾಡಿದ ಸಚಿವ ಶ್ರೀರಾಮುಲು, ಒಂದೆಡೆ Covid ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ, ಮತ್ತೊಂದೆಡೆ ಮಕ್ಕಳ ಕುರಿತ ವಿಷಯ ಆಗಿರುವುದರಿಂದ ಇದು ತುಂಬಾ ಸೂಕ್ಷ್ಮ ವಿಷಯವಾಗಿದೆ. ಆದ್ದರಿಂದ ಎಲ್ಲಾ ಆಯಾಮಗಳಲ್ಲಿ ಸಮಾಲೋಚನೆ ಮಾಡಲಾಗಿದೆ.Pros and Cons (positive ಮತ್ತು negative) ಅಂಶಗಳನ್ನ ಚರ್ಚಿಸಿದ್ದೇವೆ. ತಜ್ಞರ ಜತೆ ಸಭೆ ಹಾಗೂ ವಿಸ್ತೃತ ಅಧ್ಯಯನದ ನಂತರ ನಮ್ಮ ಇಲಾಖೆ ಶಿಕ್ಷಣ ಇಲಾಖೆಗೆ ವಿಸ್ತೃತ ವರದಿ ಸಲ್ಲಿಸಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ “ಮಕ್ಕಳ – ಪೋಷಕರ – ಶಿಕ್ಷಕರ ಸುರಕ್ಷತೆ, ಆರೋಗ್ಯ ನಮ್ಮ ಸರ್ಕಾರದ ಆದ್ಯತೆ ….ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಯಾವುದೇ ನಿರ್ಧಾರ ಕೈಗೊಂಡರೂ ಮಕ್ಕಳ ಸುರಕ್ಷತೆ, ಆರೋಗ್ಯದ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಮಕ್ಕಳ ಸುರಕ್ಷತೆ, ಆರೋಗ್ಯ ಮತ್ತು ಶಿಕ್ಷಣ ಎರಡನ್ನು ಮನಸ್ಸಿನಲ್ಲಿಟ್ಟುಕೊಂಡು ನಿರ್ಧಾರ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಕೇಂದ್ರ ಸರ್ಕಾರ ಶಾಲೆಗಳನ್ನು ತೆರೆಯಲು ಆದೇಶ ಹೊರಡಿಸಿದೆ. ಇದರ ಪ್ರಕಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಲಾಗಿದೆ.