ವಿವಿಧ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ ಸಚಿವರು

First Published | Dec 31, 2020, 9:06 PM IST

 ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಗರದ ವಿವಿಧ ಸರ್ಕಾರಿ-ಖಾಸಗಿ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಮುಂಜಾಗ್ರತಾ ಕ್ರಮಗಳು, ಸಿದ್ಧತೆಯನ್ನು ಪರಿಶೀಲನೆ ಮಾಡಿದರು. ಕೊವಿಡ್​ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್​ಒಪಿಗಳನ್ನು ಅನುಸರಿಸಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಂಡರು.

ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ) ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಗರದ ವಿವಿಧ ಸರ್ಕಾರಿ-ಖಾಸಗಿ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಮುಂಜಾಗ್ರತಾ ಕ್ರಮಗಳು, ಸಿದ್ಧತೆಯನ್ನು ಪರಿಶೀಲನೆ ಮಾಡಿದರು.
ಕೊವಿಡ್​ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್​ಒಪಿಗಳನ್ನು ಅನುಸರಿಸಲಾಗುತ್ತಿದೆಯಾ ಎಂಬುದನ್ನು ಖಚಿತಪಡಿಸಿಕೊಂಡರು.
Tap to resize

ವಿದ್ಯಾರ್ಥಿಗಳು, ಶಿಕ್ಷಕರು ಮೊದಲ ದಿನದ ತರಗತಿ ಅವಧಿಯಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳನ್ನು ವಿವರಿಸಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪೋರ್ಷನ್ ಮುಗಿಸುವುದರತ್ತ ಗಮನ ಹರಿಸಬೇಕು ಎಂದರು.
ಜನವರಿ 1ರಿಂದ 10-12ರವರೆಗಿನ ತರಗತಿಗಳು ಪ್ರಾರಂಭವಾಗುತ್ತವೆ. ಪಾಲಕರ ಜತೆ ಸಮೀಕ್ಷೆಯೂ ಆಗಿದೆ. ಇಷ್ಟುದಿನ ಮಕ್ಕಳನ್ನು ಮನೆಯಲ್ಲಿ ಪಾಲಕರು ಎಷ್ಟು ಜೋಪಾನ ಮಾಡಿದ್ದರೋ, ಅಷ್ಟೇ ಜೋಪಾನವಾಗಿ ನೋಡಿಕೊಳ್ಳುತ್ತೇವೆ. ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಎಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೋ, ಹಾಗೇ ಈಗಲೂ ಎಚ್ಚರಿಕೆ ವಹಿಸಲಾಗುತ್ತದೆ ಎಂದು ತಿಳಿಸಿದರು.
ಶಿಕ್ಷಣ ಸಚಿವರು ಮಲ್ಲೇಶ್ವರಂನ 18ನೇ ಕ್ರಾಸ್​, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು, ಹೆಬ್ಬಾಳ ಕಡೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
Suresh Kumar

Latest Videos

click me!