ಶಾಲಾ-ಕಾಲೇಜುಗಳು ಆರಂಭ: ವಿದ್ಯಾರ್ಥಿಗಳಿಗೆ ವಿಶೇಷ ಸ್ವಾಗತ ಕೋರಿದ ಶಿಕ್ಷಕರು

First Published | Jan 1, 2021, 2:40 PM IST

 ಕೊರೋನಾ ಹಿನ್ನೆಲೆಯಲ್ಲಿ ಕಳೆದ ಒಂಭತ್ತು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನವಾದ ಇಂದು ಮಕ್ಕಳು ಲವಲವಿಕೆಯಿಂದಲೇ ಶಾಲಾ-ಕಾಲೇಜುಗಳಿಗೆ ಆಗಮಿಸುತ್ತಿದ್ದುದು ಕಂಡುಬಂತು. ಕೋವಿಡ್-19 ಮಾರ್ಗಸೂಚಿ ಮೇರೆಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ರಾಜ್ಯಾದ್ಯಂತ ಇಂದಿನಿಂದ ಆರಂಭವಾದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇನ್ನು ಬಹಳ ದಿನಗಳ ನಂತರ ಶಾಲೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಣ ವಿಶೇಷವಾಗಿ ಸ್ವಾಗತಕೋರಿದರು.

ಕೊರೋನಾ ಹಿನ್ನೆಲೆಯಲ್ಲಿ ಕಳೆದ ಒಂಭತ್ತು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನವಾದ ಇಂದು ಮಕ್ಕಳು ಲವಲವಿಕೆಯಿಂದಲೇ ಶಾಲಾ-ಕಾಲೇಜುಗಳಿಗೆ ಆಗಮಿಸುತ್ತಿದ್ದುದು ಕಂಡುಬಂತು.
SSLC, PUC ವಿದ್ಯಾರ್ಥಿಗಳಿಗೆ ತರಗತಿ ಶುರುವಾಗಿದ್ದು, ಪೋಷಕರ ಅನುಮತಿಯೊಂದಿಗೆ ಮಕ್ಕಳು ಹಾಜರ್​
Tap to resize

ಬೆಂಗಳೂರಿನ ಮಾಗಡಿ ರಸ್ತೆ ಬಿಬಿಎಂಪಿ ಶಾಲೆಯಲ್ಲಿ ಎರಡನೇ ಪಾಳಿ ಆರಂಭವಾಗಿದ್ದು, ಬರುವ ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಭರ್ಜರಿ ಸ್ವಾಗತ ಸಿಕ್ಕಿದೆ.
ಹೂವು, ಚಾಕಲೇಟ್ ಕೊಟ್ಟು ಸ್ವಾಗತಕೋರಿದ ಶಿಕ್ಷಕರು
ವಿಭಿನ್ನವಾಗಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಿಕ್ಷಕರು
ಶಿಕ್ಷಕರ ಈ ಸ್ವಾಗತಕ್ಕೆ ವಿದ್ಯಾರ್ಥಿಗಳು ಫುಲ್ ಖುಷ್
ಇನ್ನೂ ಕೆಲ ಕಡೆಗಳಲ್ಲಿ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಸ್ವಾಗತಿಸಲಾಗಿದೆ.

Latest Videos

click me!