ಮಂಗಳವಾರ ಬೆಂಗಳೂರಿನಲ್ಲಿ ನಡೆದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವ
undefined
ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ 3 ಲಕ್ಷ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಸರ್ಕಾರಿ ಆರೋಗ್ಯ ಕೇಂದ್ರಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ ಎಂದು ಸಾಮಾನ್ಯ ಜನರು ಹೇಳುತ್ತಾರೆ. ವೈದ್ಯರು ತಮ್ಮ ಕುಟುಂಬದ ಸದಸ್ಯರು ಬಂದಾಗ ಹೇಗೆ ಚಿಕಿತ್ಸೆ ನೀಡುತ್ತಾರೋ ಹಾಗೆಯೇ ಪ್ರತಿ ರೋಗಿಯ ಬಗ್ಗೆ ಕಾಳಜಿ ವಹಿಸಬೇಕು ಎಂದು ತಿಳಿಸಿದ ಸಚಿವ ಸುಧಾಕರ್
undefined
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಲಿರುವ ಬಜೆಟ್, ರಾಜ್ಯದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆ ನಿರ್ಮಾಣಕ್ಕೆ ಕಾರಣವಾಗಲಿದೆ. ಇದಕ್ಕೆ ವೈದ್ಯರ ಸಹಕಾರ ಅತಿ ಅಗತ್ಯವಾಗಿದೆ. ಶೇ.70ರಷ್ಟುಜನರು ಗ್ರಾಮೀಣ ಪ್ರದೇಶಗಳಲ್ಲಿ ನೆಲೆಸಿದ್ದು, ಶೇ.20-25 ರಷ್ಟು ಆರೋಗ್ಯ ಕೇಂದ್ರಗಳು ಹಳ್ಳಿಗಳಲ್ಲಿವೆ. ಆದ್ದರಿಂದ ವೈದ್ಯರು ಹಳ್ಳಿಗಳಲ್ಲಿ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.
undefined
ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಗ್ರಾಮೀಣ ಪ್ರದೇಶಗಳ ಪ್ರಮುಖ ಆರೋಗ್ಯ ಸೇವಾ ಕೇಂದ್ರಗಳಾಗಿದ್ದು, ಮೇಲ್ದರ್ಜೆಗೇರಿಸಲು ಯೋಜನೆ ರೂಪಿಸಲಾಗಿದೆ. ಕೇಂದ್ರ ಸರ್ಕಾರ ಈ ಬಾರಿ 2.3 ಲಕ್ಷ ಕೋಟಿ ರು. ಅನುದಾನವನ್ನು ಆರೋಗ್ಯ ಕ್ಷೇತ್ರಕ್ಕೆ ನೀಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.137ರಷ್ಟು ಹೆಚ್ಚಿದೆ ಎಂದರು.
undefined
ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಕಾಲೇಜು ಜೀವನದ ಬಳಿಕ ಹೊರ ಜಗತ್ತಿಗೆ ಕಾಲಿಡಬೇಕಾಗುತ್ತದೆ. ಆದರೆ, ಕಾಲೇಜು ಮುಗಿದ ಕೂಡಲೇ ಕಲಿಕೆ ಮುಗಿಯುವುದಿಲ್ಲ. ಕಲಿಕೆ, ಅಧ್ಯಯನ, ಆವಿಷ್ಕಾರ ಜೀವನದುದ್ದಕ್ಕೂ ನಿರಂತರವಾಗಿರುತ್ತದೆ. ಕೋವಿಡ್ ಸಮಯದಲ್ಲಿ ಎಲ್ಲ ವೈದ್ಯರು, ವೈದ್ಯ ವಿದ್ಯಾರ್ಥಿಗಳು ಧೈರ್ಯ ತೋರಿ ಕಾರ್ಯನಿರ್ವಹಿಸಿದ್ದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
undefined
ಈಗ ನಾವು ಕೊರೋನಾದ ಕೊನೆಯ ಹಂತದಲ್ಲಿದ್ದೇವೆ. ಕೊರೋನಾ ಸೋಂಕು ಆರಂಭದ 10 ತಿಂಗಳ ಬಳಿಕ ಲಸಿಕೆ ದೊರೆತಿದ್ದು, ರಾಜ್ಯದಲ್ಲಿ ಸುಮಾರು 5 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
undefined
19 ಚಿನ್ನದ ಪದಕ ಸೇರಿದಂತೆ 250 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
undefined
ಕಾರ್ಯಕ್ರಮದಲ್ಲಿ ಆರ್‌ಜಿಯುಎಚ್‌ಎಸ್ ಕುಲಪತಿ ಡಾ. ಎಸ್. ಸಚ್ಚಿದಾನಂದ, ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್, ಕಾಲೇಜಿನ ನಿರ್ದೇಶಕಿ ಡಾ. ಸಿ.ಆರ್. ಜಯಂತಿ ಹಾಗೂ ಪ್ರಾಂಶುಪಾಲ ಡಾ. ಎಚ್.ಎಲ್. ವಿಶ್ವನಾಥ್ ಉಪಸ್ಥಿತರಿದ್ದರು.
undefined