ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡ ಡಾಲಿ ಧನಂಜಯ್-ಧನ್ಯತಾ:‌ ಪಕ್ಕಾ ಗಂಡು ಮಗುನೇ ಎಂದ ಫ್ಯಾನ್ಸ್

Published : Apr 29, 2026, 03:09 PM IST

Daali Dhananjay Dhanyatha baby bump photos: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ 'ಡಾಲಿ' ಧನಂಜಯ್ ಹಾಗೂ ಧನ್ಯತಾ ದಂಪತಿ ಈಗ ಹೊಸ ಅತಿಥಿಯ ಆಗಮನದ ಸಂಭ್ರಮದಲ್ಲಿದ್ದಾರೆ. ಇತ್ತೀಚೆಗೆ ಈ ದಂಪತಿ ಮಾಡಿಸಿಕೊಂಡಿರುವ ಕ್ಯೂಟ್ 'ಬೇಬಿ ಬಂಪ್' ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. 

PREV
16
ಬೇಬಿ ಬಂಪ್ ಫೋಟೋಶೂಟ್

ಪರಸ್ಪರ ಪ್ರೀತಿಸಿ ಮದುವೆಯಾದ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಬೇಬಿ ಬಂಪ್ (Baby Bump) ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

26
ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

ಇದನ್ನು ಡಾಲಿ ತಮ್ಮ ಸೋಷಿಯಲ್‌ ಮೀಡಿಯಾ ಪೇಜ್‌ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ.

36
ಹೀಗಿವೆ ಫೋಟೋಸ್

ಈ ಫೋಟೋದಲ್ಲಿ ದಂಪತಿ ಖುಷ್ ಖುಷಿಯಾಗಿ ಇರುವುದನ್ನ ನೀವೂ ನೋಡಬಹುದು. ಡಾಲಿ ಹೆಂಡತಿ ಧನ್ಯತಾ ಅವರನ್ನ ಅಪ್ಪಿಕೊಂಡು ಸೋಫಾದ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಹಾಗೂ ಕೈ ಹಿಡಿದು ನಡೆಯುತ್ತಿರುವ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ.

46
ವಿಶ್ ಮಾಡಿದ ಅಭಿಮಾನಿಗಳು

ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡುವಾಗ ಡಾಲಿ Our universe is expanding ಎಂದು ಶೀರ್ಷಿಕೆ ನೀಡಿದ್ದು, ಫೋಟೋ ಅಪಪಲೋಡ್ ಆಗಿ ಕೆಲವೇ ಗಂಟೆಗಳಲ್ಲಿ ಅಭಿಮಾನಿಗಳಿಂದ ಶುಭಾಷಯಗಳ ಸುರಿಮಳೆಯೇ ಹರಿದು ಬರುತ್ತಿದೆ.

56
ಉದಯ ಕನ್ನಡಿಗ ಕಾರ್ಯಕ್ರಮದಲ್ಲಿ ಘೋಷಣೆ

ಕೆಲವು ತಿಂಗಳ ಹಿಂದೆಯಷ್ಟೇ ಉದಯ ಕನ್ನಡಿಗ ಕಾರ್ಯಕ್ರಮದಲ್ಲಿ "ಒಂದು ಗುಲಾಬಿ ನನ್ನ ಹೆಂಡ್ತಿಗೆ, ಇನ್ನೊಂದು ನನ್ನ ಅಪ್ಪ ಅಂತ ಕರಿಯೋಕೆ ಬರ್ತಿರೋ ಮಗುಗೆ" ಎಂದು ಹೇಳುವ ಮೂಲಕ ತಂದೆ ಆಗುತ್ತಿರುವ ವಿಚಾರವನ್ನು ಹಂಚಿಕೊಂಡಿದ್ದರು.

66
2025ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಧನಂಜಯ್ ಮತ್ತು ಡಾಕ್ಟರ್ ಆಗಿರುವ ಧನ್ಯತಾ ಹಲವು ವರ್ಷಗಳಿಂದ ಪ್ರೀತಿಸಿ, ಪರಸ್ಪರ ಒಪ್ಪಿ ಮೈಸೂರಿನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದು, 2025ರಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಈ ವಿವಾಹ ಮಹೋತ್ಸವದಲ್ಲಿ ಚಿತ್ರರಂಗದ ಗಣ್ಯರು, ರಾಜಕಾರಣಿಗಳು, ಅಭಿಮಾನಿಗಳು ಭಾಗವಹಿಸಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories