Vasishta Simha-Haripriya: ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದ ವಸಿಷ್ಠ ಸಿಂಹ-ಹರಿಪ್ರಿಯಾ!

Published : Sep 25, 2023, 11:29 AM IST

ಮೊದಲ ಬಾರಿಗೆ ಮಂತ್ರಾಲಯಕ್ಕೆ ತೆರಳಿ ಹರಿಪ್ರಿಯಾ ದಂಪತಿ ರಾಯರ ದರ್ಶನ ಪಡೆದಿದೆ. ಮಂತ್ರಾಲಯದ ಮಠಕ್ಕೆ ಆಗಮಿಸಿದ ಈ ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು. 

PREV
17
Vasishta Simha-Haripriya: ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದ ವಸಿಷ್ಠ ಸಿಂಹ-ಹರಿಪ್ರಿಯಾ!

ರಾಯಚೂರು (ಸೆ.25): ಸ್ಯಾಂಡಲ್‌ವುಡ್‌ನ ನಟ ವಸಿಷ್ಠ ಸಿಂಹ ಹಾಗೂ ಅವರ ಪತ್ನಿ ಹರಿಪ್ರಿಯಾ ಖುಷಿ-ಖುಷಿಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರು ಒಟ್ಟಾಗಿ ಹಲವು ಕಡೆಗಳಿಗೆ ತೆರಳಿದ್ದಾರೆ. 

27

ಇದೀಗ ಈ ಜೋಡಿ ಮೊದಲ ಬಾರಿಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದಿದೆ. ಮಂತ್ರಾಲಯದ ಮಠಕ್ಕೆ ಆಗಮಿಸಿದ ಈ ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು. 

37

ಬಳಿಕ ಪೀಠಾಧಿಪತಿ ಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ದಂಪತಿಗೆ ಶ್ರೀಗಳು ಫಲಮಂತ್ರಾಕ್ಷತೆ ವಿತರಿಸಿ ನೀಡಿ ಸನ್ಮಾನ ಮಾಡಿದರು.

47

ಇತ್ತೀಚೆಗೆ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ದಂಪತಿಗಳು ಮದುವೆಯಾದ ಬಳಿಕ ಮೊದಲನೆಯ ಗಣೇಶೋತ್ಸವದ ಸಂಭ್ರಮದಲ್ಲಿ ಮಿಂದೆದ್ದರು. ಇಬ್ಬರು ಜೊತೆಯಾಗಿ ತಮ್ಮ ಮನೆಯಲ್ಲಿ ಗಣೇಶನನ್ನು ಕೂರಿಸಿ, ಗೌರಿ, ಗಣೇಶ ಹಬ್ಬವನ್ನು ಆಚರಿಸಿದ್ದಾರೆ. 

57

ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜನವರಿ 26ರಂದು ಗಣರಾಜ್ಯ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೈಸೂರಿನ ಸಚ್ಚಿದಾನಂದ ಆಶ್ರಮದಲ್ಲಿ ಇಬ್ಬರ ಮದುವೆ ಸಮಾರಂಭ ನಡೆದಿತ್ತು. ಇಬ್ಬರು ಸರಳವಾಗಿ ಹಸೆಮಣೆ ಏರಿದ್ದು ಫೋಟೋಗಳು ಎಲ್ಲಾ ಕಡೆ ವೈರಲ್ ಆಗಿತ್ತು.

67

ವಸಿಷ್ಠ ಮತ್ತು ಹರಿಪ್ರಿಯಾ ಮದುವೆ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಹಾಜರಾಗಿದ್ದರು. ಗೆಳೆಯ ಧನಂಜಯ್, ಅಮೃತಾ ಐಯ್ಯಂಗರ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

77

ಹರಿಪ್ರಿಯಾ, ವಸಿಷ್ಠ ಸಿಂಹ ಜೋಡಿ, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಸಿನಿಮಾ ಹಾಗೂ ವೈಯಕ್ತಿಕ ವಿಚಾರವನ್ನು ಇಬ್ಬರೂ ಅಭಿಮಾನಿಗಳ ಜೊತೆ ಹಂಚಿಕೊಳ್ತಾರೆ. 

Read more Photos on
click me!

Recommended Stories