ಹೊರ ವರ್ತುಲ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಟ ಕೆ. ಭರತ್ ಕಾಂತ್ ಮತ್ತು ಅವರ ಸ್ನೇಹಿತ ಸಾವನ್ನಪ್ಪಿದ್ದಾರೆ. ನಿಯಂತ್ರಣ ತಪ್ಪಿದ ಅವರ ಕಾರು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಭಾನುವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇರ್ವರ ಪೈಕಿ ಓರ್ವ ತೆಲಗು ನಟರೊಬ್ಬರು ನಿಧನರಾಗಿದ್ದಾರೆ. ಹೈದರಾಬಾದ್ ನಗರದ ಆದಿಬಟ್ಲಾ ಬಳಿಯ ಹೊರ ವರ್ತುಲ ರಸ್ತೆಯಲ್ಲಿ (ORR) ಅಪಘಾತ ಸಂಭವಿಸಿದೆ.
25
ನಟ ಸೇರಿದಂತೆ ಇಬ್ಬರ ಸಾವು
ಮೃತ ನಟನನ್ನು ಕೆ ಭರತ್ ಕಾಂತ್ (31) ಎಂದು ಗುರುತಿಸಲಾಗಿದೆ. ಇದೇ ಅಪಘಾತದಲ್ಲಿ ಜಿ ಸಾಯಿ ತ್ರಿಲೋಕ್ (31) ಎಂಬವರು ಸಹ ಮೃತರಾಗಿದ್ದಾರೆ. ಕೆ.ಭರತ್ ಕಾಂತ್ ಮತ್ತು ಜಿ.ಸಾಯಿ ತ್ರಿಲೋಕ್ ಇಬ್ಬರು ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆ ಮೂಲದವರು ಎಂದು ತಿಳಿದು ಬಂದಿದೆ.
35
ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಕಾರ್
ವರದಿಗಳ ಪ್ರಕಾರ, ನಗರದ ಔಟರ್ ರಿಂಗ್ ರೋಡ್ (ORR) ಕಾರ್‌ನಲ್ಲಿ ಭರತ್ ಕಾಂತ್ ಮತ್ತು ಜಿ ಸಾಯಿ ತ್ರಿಲೋಕ್ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕ ಭರತ್ ನಿಯಂತ್ರಣ ತಪ್ಪಿದ ಕಾರ್ ಮುಂದೆ ಚಲಿಸುತ್ತದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರ್ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರ್‌ನಲ್ಲಿದ್ದ ಭರತ್ ಕಾಂತ್ ಮತ್ತು ಸಾಯಿ ತ್ರಿಲೋಕ್ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳದಲ್ಲಿ ಉಂಟಾಗಿದ್ದ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿ, ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಿದರು. ಮೃತ ಭರತ್, ತೆಲಗು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಟೆನೆಂಟ್ ಮತ್ತು ಗ್ರಾಮಮ್ ಎಂಬ ಕಿರುಚಿತ್ರಗಳಲ್ಲಿ ನಟಿಸಿದ್ದಾರೆ.
55
ನಟ ಭರತ್ ಕೊನೆಯ ಪೋಸ್ಟ್ ವೈರಲ್
ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದ ಭರತ್, ಇನ್‌ಸ್ಟಾಗ್ರಾಂನಲ್ಲಿ ಸುಮಾರು 40 ಸಾವಿರ ಫಾಲೋವರ್ಸ್ ಮತ್ತು ಯುಟ್ಯೂಬ್‌ನಲ್ಲಿ 30 ಸಾವಿರಕ್ಕೂ ಅಧಿಕ ಸಬ್‌ಸ್ಕ್ರೈಬರ್ಸ್ ಹೊಂದಿದ್ದರು.ಭರತ್ ಕಾಂತ್ ಅವರ ಅಪಘಾತದ ಸುದ್ದಿ ಹೊರಬಿದ್ದ ನಂತರ ಅವರ ಕೊನೆಯ ಇನ್ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.