ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡದ ಗತ್ತು: ಇಫಿಯಲ್ಲಿ ಮತ್ತೊಮ್ಮೆ ರಿಷಬ್ ಶೆಟ್ಟಿ ಹವಾ

Published : Nov 28, 2026, 04:09 PM IST

ಗೋವಾದ 57ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭಕ್ಕೆ ರಿಷಬ್ ಶೆಟ್ಟಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ರಿಷಬ್ ಶೆಟ್ಟಿ ಕುರಿತ ಸಂಪೂರ್ಣ ಸುದ್ದಿ ಓದಿ.

PREV
14
ವಿಶೇಷ ಆಹ್ವಾನ

ಗೋವಾದಲ್ಲಿ ನಡೆಯುತ್ತಿರುವ 57ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (ಇಫಿ) ಸಮಾರೋಪ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ನವೆಂಬರ್‌ 28ರಂದು ನಡೆಯಲಿರುವ ಭವ್ಯ ಸಮಾರೋಪ ಸಮಾರಂಭದಲ್ಲಿ ರಿಷಬ್‌ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

24
ಕನ್ನಡ ಚಿತ್ರರಂಗಕ್ಕೆ ಹೆಮ್ಮೆ

ವಿಶೇಷವೆಂದರೆ, ಕಳೆದ ವರ್ಷವೂ ಸಮಾರೋಪ ಸಮಾರಂಭದಲ್ಲಿ ರಿಷಬ್‌ ಶೆಟ್ಟಿ ಪಾಲ್ಗೊಂಡಿದ್ದು, ಈ ವರ್ಷವೂ ಪ್ರತಿಷ್ಠಿತ ಸಿನಿಮೋತ್ಸವದ ಸಮಾರೋಪ ವೇದಿಕೆಯನ್ನು ಅಲಂಕರಿಸುತ್ತಿರುವುದು ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಸಂಗತಿಯಾಗಿದೆ.

34
ಪನೋರಮಾ ವಿಭಾಗದಲ್ಲಿ ಪ್ರದರ್ಶನ

‘ಕಾಂತಾರ’ ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಕನ್ನಡ ಸಿನಿಮಾದ ಕೀರ್ತಿ ಪತಾಕೆ ಹಾರಿಸಿದ ರಿಷಬ್‌ ಶೆಟ್ಟಿ, ಭಾರತೀಯ ಚಿತ್ರರಂಗದ ಪ್ರಮುಖ ಸಾಧಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಈ ಬಾರಿ ಈ ಚಿತ್ರೋತ್ಸವದಲ್ಲಿ ‘ಕಾಂತಾರ 1’ ಭಾರತೀಯ ಪನೋರಮಾ ವಿಭಾಗದಲ್ಲಿ ಪ್ರದರ್ಶನವಾಗಿದೆ.

44
ಪ್ರಶಸ್ತಿ ಪ್ರದಾನ

ಇಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ರಿಷಬ್‌ ಶೆಟ್ಟಿ ಅವರೊಂದಿಗೆ ಭಾರತೀಯ ಹಾಗೂ ಅಂತಾರಾಷ್ಟ್ರೀಯ ಚಿತ್ರರಂಗದ ಹಲವು ಗಣ್ಯರು, ಕೇಂದ್ರ ಸಚಿವರು ಮತ್ತು ತೀರ್ಪುಗಾರರ ಮಂಡಳಿಯ ಸದಸ್ಯರು ಉಪಸ್ಥಿತರಿರಲಿದ್ದಾರೆ. ಈ ವೇಳೆ ಚಿತ್ರೋತ್ಸವದ ವಿವಿಧ ವಿಭಾಗಗಳಲ್ಲಿ ವಿಜೇತರಾದ ಸಿನಿಮಾಗಳಿಗೆ ಪ್ರತಿಷ್ಠಿತ ಗೋಲ್ಡನ್‌ ಪೀಕಾಕ್‌ ಮತ್ತು ಸಿಲ್ವರ್‌ ಪೀಕಾಕ್‌ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories