ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಶೂಟಿಂಗ್!
ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಹೊಸ ದಾಖಲೆ ಬರೆಯಲು ಸಜ್ಜಾಗಿದೆ. ಈ ಚಿತ್ರವನ್ನು ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ ಎಂಬ ಅಚ್ಚರಿಯ ವಿಷಯವನ್ನು ಕಿಯಾರಾ ಹಂಚಿಕೊಂಡಿದ್ದಾರೆ. ಇದು ಕೇವಲ ಭಾರತಕ್ಕೆ ಸೀಮಿತವಾಗದೆ ಜಾಗತಿಕ ಮಟ್ಟದ ಪ್ರೇಕ್ಷಕರನ್ನು ತಲುಪುವ ಪ್ಲಾನ್ ಆಗಿದೆ. ಆಗಸ್ಟ್ 26ರಂದು ಈ ಚಿತ್ರ ವಿಶ್ವಾದ್ಯಂತ ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಒಟ್ಟಿನಲ್ಲಿ, ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ಈ ಹೊಸ ಜುಗಲ್ಬಂದಿ ಬೆಳ್ಳಿತೆರೆಯ ಮೇಲೆ ಧೂಳೆಬ್ಬಿಸುವುದು ಗ್ಯಾರಂಟಿ. ಕಿಯಾರಾ ಅವರ ಈ ಬೋಲ್ಡ್ ಹೇಳಿಕೆಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, 'ಟಾಕ್ಸಿಕ್' ಮೇಲಿನ ನಿರೀಕ್ಷೆ ಹತ್ತರಷ್ಟು ಹೆಚ್ಚಾಗಿದೆ!