40 ವರ್ಷಗಳ ಬಳಿಕ ಅಭಿಮಾನಿಗಳ ಜತೆ 'ಜೈಲರ್ 2' ವೀಕ್ಷಿಸಿದ ರಜನಿಕಾಂತ್: 600 ಕೋಟಿ ಕ್ಲಬ್‌ಗೆ ಎಂಟ್ರಿ

Published : Oct 26, 2026, 03:16 PM IST

ಸೂಪರ್‌ಸ್ಟಾರ್ ರಜನಿಕಾಂತ್ 40 ವರ್ಷಗಳ ಬಳಿಕ ಅಭಿಮಾನಿಗಳ ಜೊತೆ ಥಿಯೇಟರ್‌ನಲ್ಲಿ ‘ಜೈಲರ್ 2’ ಸಿನಿಮಾ ವೀಕ್ಷಿಸಿದ್ದಾರೆ. ಚೆನ್ನೈನ ಐಮ್ಯಾಕ್ಸ್ ಚಿತ್ರಮಂದಿರದಲ್ಲಿ ರಜನಿಕಾಂತ್ ಸಿನಿಮಾ ನೋಡಿದ ಅಪರೂಪದ ವಿಡಿಯೋ ವೈರಲ್ ಆಗಿದೆ.

PREV
14
ಅಭಿಮಾನಿಗಳ ಜತೆ ಸಿನಿಮಾ ವೀಕ್ಷಣೆ

ಸೂಪರ್‌ಸ್ಟಾರ್ ರಜನಿಕಾಂತ್ ಅಪರೂಪದ ವಿದ್ಯಮಾನವೊಂದರಲ್ಲಿ ‘ಜೈಲರ್ 2’ ಚಿತ್ರವನ್ನು ಅಭಿಮಾನಿಗಳೊಂದಿಗೆ ಚಿತ್ರಮಂದಿರದಲ್ಲಿ ಕುಳಿತು ವೀಕ್ಷಿಸಿದ್ದಾರೆ. ಈ ಮೂಲಕ ಬರೋಬ್ಬರಿ ನಾಲ್ಕು ದಶಕಗಳ ಬಳಿಕ ರಜನಿಕಾಂತ್ ಅವರು ಥಿಯೇಟರ್‌ನಲ್ಲಿ ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿದಂತಾಗಿದೆ.

24
ಬೆಳ್ಳಿತೆರೆಯಲ್ಲಿ ರಜನಿಕಾಂತ್

ಈ ಕುರಿತು ಚಿತ್ರದ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ವಿಡಿಯೋ ಹಂಚಿಕೊಂಡಿದ್ದು, ‘40 ವರ್ಷಗಳಲ್ಲೇ ಮೊದಲ ಬಾರಿಗೆ ರಜನಿಕಾಂತ್ ಬೆಳ್ಳಿತೆರೆಯಲ್ಲಿ ‘ಜೈಲರ್ 2’ ಚಿತ್ರವನ್ನು ಅಭಿಮಾನಿಗಳ ಜತೆ ಕಣ್ತುಂಬಿಕೊಂಡಿದ್ದಾರೆ’ ಎಂದು ತಿಳಿಸಿದೆ.

34
ಎಲ್ಲರಿಗೂ ಧನ್ಯವಾದ

ಚೆನ್ನೈನ ಪ್ರತಿಷ್ಠಿತ ಐಮ್ಯಾಕ್ಸ್ ಚಿತ್ರಮಂದಿರದಲ್ಲಿ ರಜನಿಕಾಂತ್ ಸಿನಿಮಾ ವೀಕ್ಷಿಸಿದ ವಿಡಿಯೋ ವೈರಲ್ ಆಗಿದೆ. ಚಿತ್ರಮಂದಿರಕ್ಕೆ ಪ್ರವೇಶಿಸಿದ ರಜನಿ, ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಹಾಗೂ ನಿರ್ದೇಶಕ ನೆಲ್ಸನ್ ಅವರನ್ನು ಆತ್ಮೀಯವಾಗಿ ಆಲಂಗಿಸಿ, ಶೋ ಮುಗಿದ ನಂತರ ಎಲ್ಲರಿಗೂ ಧನ್ಯವಾದ ತಿಳಿಸಿ ತೆರಳಿದರು.

44
600 ಕೋಟಿ ರೂ. ಕ್ಲಬ್ ಸೇರಿದ ಜೈಲರ್ 2

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ‘ಜೈಲರ್ 2’ 600 ಕೋಟಿ ರು. ಕ್ಲಬ್ ಸೇರಿದೆ. ಈ ಸಿನಿಮಾದ ಈಗಿನ ಗಳಿಕೆ 600 ಕೋಟಿ ರೂ. ದಾಟಿರಬಹುದು ಎಂದು ಅಂದಾಜಿಸಲಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories