ರಿಯಲ್​ ಅಮ್ಮನ ಜೊತೆ ನಾ ನಿನ್ನ ಬಿಡಲಾರೆ ಹಿತಾ ಭರ್ಜರಿ ಡಾನ್ಸ್​: ವಿವಿಧ ರೂಪದಲ್ಲಿ ಕಾಣಿಸಿಕೊಂಡ ಪುಟಾಣಿ

Published : Aug 27, 2025, 03:14 PM IST

ನಾನಿನ್ನ ಬಿಡಲಾರೆ ಸೀರಿಯಲ್​ನಲ್ಲಿ ಹಿತಾ ಈಗ ಇನ್ನೊಂದು ಅಮ್ಮ ಬರುವುದನ್ನು ಕಾಯುತ್ತಿದ್ದಾಳೆ. ಆದರೆ ರಿಯಲ್​ ಆಗಿ, ಅಮ್ಮನ ಜೊತೆ ಈಕೆಯ ಬಾಂಡಿಂಗ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಅಮ್ಮ-ಮಗಳ ಭರ್ಜರಿ ರೀಲ್ಸ್​ ನೋಡಿ! 

PREV
18
ಎಲ್ಲ ರೀತಿಯ ಪಾತ್ರಕ್ಕೂ ಸೈ ಈ ಪುಟಾಣಿ

ಪುಟಾಣಿ ಹಿತಾ ಎಂದರೆ ಸಾಕು, ಸೀರಿಯಲ್​ ಪ್ರೇಮಿಗಳ ಗಮನ ಹೋಗುವುದು ನಾನಿನ್ನ ಬಿಡಲಾರೆ ಸೀರಿಯಲ್​ಗೆ. ಇದರಲ್ಲಿ ಮೂಕಿಯಾಗಿ ಆ್ಯಕ್ಟ್​ ಮಾಡಿದ ಹಿತಾಳ ಆ್ಯಕ್ಟಿಂಗ್​ಗೆ ಮನ ಸೋಲದವರೇ ಇಲ್ಲ. ಅಂದಹಾಗೆ ಮಗಳು ಹಿತಾ ಆಗಿ ನಟನೆ ಮಾಡ್ತಿರೋ ಬಾಲಕಿ ಹೆಸರು ಮಹಿತಾ. ಈ ಹಿಂದೆ ನನ್ನಮ್ಮ ಸೂಪರ್ ಸ್ಟಾರ್ ಸೇರಿದಂತೆ ಕೆಲ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದ ಮಹಿತಾ, ನಂತರ ಚುಕ್ಕಿತಾರೆ ಧಾರಾವಾಹಿಯಲ್ಲಿ ಲೀಡ್‌ ರೋಲ್‌ನಲ್ಲಿ ಕಾಣಿಸಿಕೊಂಡಿದ್ದಳು. ಸದಾ ನಟನೆಯಲ್ಲಿ ಮಿಂಚುತ್ತಿರುವ ಮಹಿತಾ ಒಳ್ಳೆಯ ಸಿಂಗರ್​ ಕೂಡ.

28
ಸೀರಿಯಲ್​ನಲ್ಲಿ ಸೂಪರ್​ ಆ್ಯಕ್ಟಿಂಗ್​

ಈಚೆಗಷ್ಟೇ ಮಹಿತಾ, ನಾನಿನ್ನ ಬಿಡಲಾರೆ ಸೀರಿಯಲ್​ನಲ್ಲಿ ಮಾತನಾಡಲು ಪ್ರಯತ್ನ ಪಡುವ ರೀತಿ, ಕೊನೆಗೆ ಅಮ್ಮಾ ಎಂದು ಕೂಗುವ ರೀತಿ ಎಂಥವರ ಕಣ್ಣಲ್ಲೂ ನೀರು ತರಿಸುವಂತಿತ್ತು. ಅಂದಹಾಗೆ ಮಹಿತಾ, ಸ್ಕೂಲ್ ಮತ್ತು ಸೀರಿಯಲ್‌ ಎರಡನ್ನೂ ಮ್ಯಾನೇಜ್ ಮಾಡುತ್ತಿದ್ದಾಳೆ.

38
ಅಮ್ಮನ ಜೊತೆ ಮಗಳ ರೀಲ್ಸ್​

ಈಕೆಯ ಅಮ್ಮನ ಹೆಸರು ತನುಜಾ. ಅಮ್ಮನ ಜೊತೆ ಸೋಷಿಯಲ್​ ಮೀಡಿಯಾದಲ್ಲಿ ಮಹಿತಾ ಫುಲ್​ ಬಿಜಿ. ಸದಾ ಅಮ್ಮ-ಮಗಳು ವಿಧವಿಧವಾದ ರೀಲ್ಸ್​ ಮಾಡುತ್ತಾ ಶೇರ್​ ಮಾಡುತ್ತಿರುತ್ತಾರೆ. ಇವರ ಹಲವು ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿರುತ್ತವೆ.

48
ಮಗಳ ಟ್ಯಾಲೆಂಟ್​ ಬಗ್ಗೆ ಹೇಳಿದ ಅಮ್ಮ

ಹಿಂದೊಮ್ಮೆ ಮಗಳ ಕುರಿತು ಅಮ್ಮ ತನುಜಾ ಮಾಧ್ಯಮದ ಜೊತೆ ಮಾತನಾಡಿದ್ದರು. 'ಚಿಕ್ಕ ವಯಸ್ಸಿನಲ್ಲಿ ಮಹಿತಾಗೆ ಹಾಡಿನಲ್ಲಿ ತುಂಬಾ ಆಸಕ್ತಿ ಇತ್ತು. ಕೋವಿಡ್​ ಸಮಯದಲ್ಲಿ ನಾನು ಜನರಿಗೆ ಅರಿವು ಮೂಡಿಸುವ ವಿಡಿಯೋ ಮಾಡುತ್ತಿದ್ದ ವೇಳೆ ಅವಳಲ್ಲಿ ಇದ್ದ ನಟನೆಯ ಕಲೆಯನ್ನು ಗುರುತಿಸಿದೆ.

58
ಮಗಳ ಬಗ್ಗೆ ಅಮ್ಮನ ಮಾತು

ಮಗಳು ಬರೀ ಓದಬೇಕು ಎಂದು ನಾನು ಯಾವತ್ತೂ ಒತ್ತಡ ಹಾಕುವುದಿಲ್ಲ. ಆಕೆಗೆ ಯಾವುದೇ ಟ್ಯಾಲೆಂಟ್ ಇದ್ದರೂ ಸಪೋರ್ಟ್ ಮಾಡಬೇಕು ಅನ್ನೋ ಆಸೆ ನನಗೆ ಇತ್ತು. ಅದರಂತೆಯೇ ಅವಳ ಆಸಕ್ತಿಗೆ ನೀರೆರೆದೆ. ಅವರಿಗೆ ಒಳ್ಳೆಯ ವೇದಿಕೆಯೂ ಸಿಗುತ್ತಾ ಹೋಯಿತು ಎಂದಿದ್ದರು. ಅವಳ ಹಣೆಯಲ್ಲಿ ನಟಿಯಾಗುವುದೇ ಬರೆದಿದ್ದರೆ ಅದೇ ಆಗುತ್ತಾಳೆ. ಅವಳಿಗೆ ಏನೇ ಆಸಕ್ತಿ ಇದ್ದರೂ ಆ ಕ್ಷೇತ್ರದಲ್ಲಿ ನಾವು ಮುಂದುವರೆಯಲು ಬಿಡುತ್ತೇವೆ ಎಂದಿದ್ದರು.

68
ಶರತ್ ಮತ್ತು ಅಂಬಿಕಾ ಪುತ್ರಿ ಹಿತಾ

ಇನ್ನು ನಾನಿನ್ನ ಬಿಡಲಾರೆ ಸೀರಿಯಲ್​ನಲ್ಲಿ ಮಹಿತಾ ಅರ್ಥಾತ್​ ಸೀರಿಯಲ್​ನಲ್ಲಿ ಹಿತಾ ಶರತ್ ಮತ್ತು ಅಂಬಿಕಾ ಪುತ್ರಿ. ಇವರ ಮುದ್ದಾದ ಸಂಸಾರಕ್ಕೆ ಕೊಳ್ಳಿ ಇಟ್ಟವಳು ಮಾಯಾ. ಶರತ್‌ನನ್ನು ತನ್ನ ವಶಮಾಡಿಕೊಳ್ಳಬೇಕು ಎಂಬ ಆಸೆಯಿಂದ ಆಕೆ ಅಂಬಿಕಾಳನ್ನು ಮಾಯಾ ಸಾಯಿಸುತ್ತಾಳೆ. ಅಮ್ಮನ ಸಾವನ್ನು ಕಂಡ ಹಿತಾ, ಅದೇ ಶಾಕ್​ನಲ್ಲಿ ಮೂಕಿಯಾಗುತ್ತಾಳೆ.

78
ನಾನಿನ್ನೆ ಬಿಡಲಾರೆ ಸೀರಿಯಲ್​ನಲ್ಲಿ ಹಿತಾ

ಅಮ್ಮನ ಪ್ರೀತಿಯಿಲ್ಲದೇ ಬೆಳೆಯುವ ಹಿತಾ, ತನ್ನ ಅಮ್ಮನ ಸಾವಿಗೆ ತಂದೆಯೇ ಕಾರಣ ಎಂದುಕೊಂಡು ಮಾತು ಬಿಡುತ್ತಾಳೆ. ಇತ್ತ ಮಾಯಾ ತನ್ನ ದಾರಿಗೆ ಹಿತಾ ಅಡ್ಡವಾಗಿದ್ದಾಳೆ ಎಂದು ಅವಳನ್ನು ಕೊಲ್ಲುವುದಕ್ಕೆ ಸಂಚು ರೂಪಿಸುತ್ತಾಳೆ. ಯಾವಾಗ ಹಿತಾಳಿಗೆ ತೊಂದರೆಯಾಗುತ್ತದೆ ಅಂತ ಗೊತ್ತಾಗುತ್ತದೋ, ಆಗ ಸತ್ತುಹೋದ ತಾಯಿ ಅಂಬಿಕಾ ಆಕೆಯ ರಕ್ಷಣೆಗೆ ನಿಲ್ಲಿತ್ತಾಳೆ. ಆತ್ಮವಾಗಿ ಮಗಳ ರಕ್ಷಣೆಯಲ್ಲಿ ತೊಡಗುತ್ತಾಳೆ.

88
ನಾನಿನ್ನೆ ಬಿಡಲಾರೆ ಸೀರಿಯಲ್​ ಸ್ಟೋರಿ

ಪತಿಯ ಕಚೇರಿಯಲ್ಲಿ ಕೆಲಸ ಮಾಡುವ ದುರ್ಗಾಳ ಗುಣ ಇಷ್ಟವಾಗಿ ಹಿತಾಳಿಗೆ ಅಮ್ಮನ ಪ್ರೀತಿ ಅವಳು ಕೊಡಲು ಸಾಧ್ಯ ಎಂದು ಅವಳಿಗೆ ಮಾತ್ರ ಕಾಣಿಸಿಕೊಳ್ಳುತ್ತಾಳೆ ಅಂಬಿಕಾ. ಆದರೆ ಇದರ ಅರಿವು ದುರ್ಗಾಗೆ ಇರುವುದೇ ಇಲ್ಲ. ಆದರೆ ಆಕೆ ಹಿತಾಳಿಗೆ ಅಮ್ಮನ ಪ್ರೀತಿ ಕೊಡುತ್ತಾಳೆ. ಇವರಿಬ್ಬರ ಮದುವೆಯಾಗುವ ಕಾಲ ಸನ್ನಿಹಿತವಾಗಿದ್ದು, ಬಾಲಕಿ ಮಹಿತಾ ಆ್ಯಕ್ಟಿಂಗ್​ಗೆ ವೀಕ್ಷಕರು ಫುಲ್​ ಮಾರ್ಕ್ಸ್​ ಕೊಟ್ಟಿದ್ದಾರೆ.

Read more Photos on
click me!

Recommended Stories