‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಇಂದು (ಅ.29) ಮೊದಲ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಅಪ್ಪು ಸಮಾಧಿಗೆ ಡಾ. ರಾಜ್ಕುಮಾರ್ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದ್ದಾರೆ.
ಅಪಾರ ಸಂಖ್ಯೆಯಲ್ಲಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಕೂಡ ಸಮಾಧಿಗೆ ಭೇಟಿ ನೀಡಿ, ನಮನ ಸಲ್ಲಿಸುತ್ತಿದ್ದಾರೆ. ಕುಟುಂಬದವರು ಕೂಡಾ ಸಮಾಧಿಗೆ ಪೂಜೆ ಮಾಡಿದ್ದಾರೆ.
29
ಫೋಟೋ: ರವಿ, ಕನ್ನಡಪ್ರಭ
ಅಶ್ವಿನಿ ಪುನೀತ್ ರಾಜ್ಕುಮಾರ್, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಇದರಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ, ಅಪ್ಪು ಆಪ್ತರು ಮತ್ತು ಸ್ನೇಹಿತರು ಕೂಡ ಜೊತೆಗೆ ಇದ್ದರು.
39
ಫೋಟೋ: ರವಿ, ಕನ್ನಡಪ್ರಭ
ಅಪ್ಪುಗೆ ಇಷ್ಟವಾದ ತಿಂಡಿ, ತಿನಿಸುಗಳನ್ನು ಇಟ್ಟು ಕುಟುಂಬಸ್ಥರು ಸಮಾಧಿ ಮುಂದೆ ಪೂಜೆ ಮಾಡಿದ್ದಾರೆ. ಕಂಠೀರವ ಸ್ಟುಡಿಯೊ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
49
ಫೋಟೋ: ರವಿ, ಕನ್ನಡಪ್ರಭ
ಸಮಾಧಿ ಬಳಿ ಒಂದು ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದು ಪುಣ್ಯತಿಥಿ ಹಿನ್ನೆಲೆಯಲ್ಲಿ ಆಗಮಿಸುವವರಿಗೆ ಉಪಹಾರ, ಊಟ, ನೀರಿನ ವ್ಯವಸ್ಥೆ ಏರ್ಪಡಿಸಲಾಗಿತ್ತು.
59
ಫೋಟೋ: ರವಿ, ಕನ್ನಡಪ್ರಭ
ಪುನೀತ್ ರಾಜ್ಕುಮಾರ್ ಸಮಾಧಿ ಇರುವ ಬೆಂಗಳೂರಿನ ಕಂಠೀರವ ಸ್ಟುಡಿಯೋ ಹೊರಗೆ ಅಪ್ಪು ಅವರ ವಿಶೇಷವಾದ ಕಟೌಟ್‌ಗಳನ್ನು ಹಾಕಲಾಗಿತ್ತು.
69
ಫೋಟೋ: ರವಿ, ಕನ್ನಡಪ್ರಭ
ಪುನೀತ್ ಅಭಿನಯದ ಸಿನಿಮಾಗಳ ಕಟೌಟ್ ಜೊತೆಯಲ್ಲಿ ಡಾ. ರಾಜ್ಕುಮಾರ್ ಹಾಗೂ ಪಾರ್ವತಮ್ಮ ಅವರ ಕಟೌಟ್ಗಳನ್ನೂ ಹಾಕುವ ಮೂಲಕ ಅಭಿಮಾನ ಮೆರೆಯಲಾಗಿತ್ತು.
79
ಫೋಟೋ: ರವಿ, ಕನ್ನಡಪ್ರಭ
ಅಪ್ಪು ಸಮಾಧಿಗೆ ಪೂಜೆ ಮಾಡಿದ ನಂತರ ಕುಟುಂಬ ಮನೆಗೆ ಮರಳಿ ವರ್ಷದ ಕಳಸ ಪೂಜೆಯನ್ನು ಮಾಡಿದ್ದಾರೆ. ಬಳಿಕ ಬಂಧು ಬಳಗಕ್ಕೆ ಭೋಜನ ವ್ಯವಸ್ಥೆ ಮಾಡಲಾಗಿತ್ತು.
89
ಫೋಟೋ: ರವಿ, ಕನ್ನಡಪ್ರಭ
ಪುನೀತ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿತ್ತು. ಎಷ್ಟೇ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದರೂ ಊಟದ ವ್ಯವಸ್ಥೆ ಮಾಡಲು ಸಿದ್ಧತೆಯನ್ನು ಮಾಡಲಾಗಿತ್ತು.
99
ಫೋಟೋ: ರವಿ, ಕನ್ನಡಪ್ರಭ
ಅಪ್ಪು ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೊ ಬಳಿ ಇಂದು ದಿನವಿಡೀ ಗೀತ ನಮನ ಕಾರ್ಯಕ್ರಮವಿದ್ದು, ಕನ್ನಡ ಚಿತ್ರರಂಗದ ಕಲಾವಿದರು, ಅಪ್ಪು ಅಭಿಮಾನಿಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ.