ಟಾಕ್ಸಿಕ್ ಬಿಡುಗಡೆ ಮುಂದೂಡಿಕೆಗೆ ಅಸಲಿ ಕಾರಣವೇನು? ಚಿತ್ರತಂಡದಿಂದ ಅಧಿಕೃತ ಹೇಳಿಕೆ

Published : Mar 04, 2026, 11:19 AM IST

ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಜಾಗತಿಕ ಅನಿಶ್ಚಿತತೆಯ ಕಾರಣದಿಂದ, ಮಾರ್ಚ್ 19ರ ಬದಲು ಇದೀಗ 2026ರ ಜೂನ್ 4 ರಂದು ಚಿತ್ರವು ವಿಶ್ವಾದ್ಯಂತ ತೆರೆಕಾಣಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

PREV
15
ಟಾಕ್ಸಿಕ್ ಸಿನಿಮಾದ ಬಿಡುಗಡೆ ದಿನಾಂಕ

ದೇಶದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಬಿಡುಗಡೆ ದಿನಾಂಕ ಮಂದೂಡಿಕೆಯಾಗಿದೆ. ಈ ಮೊದಲು ಮಾರ್ಚ್ 19ರಂದು ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿತ್ತು. ಇಂದು ಬೆಳಗ್ಗೆ ಚಿತ್ರತಂಡ ಮಾರ್ಚ್ 19ರ ಬದಲಾಗಿ ಜೂನ್ 4ರಂದು ಟಾಕ್ಸಿಕ್ ಬೆಳ್ಳಿ ಪರದೆ ಮೇಲೆ ತೆರೆಕಾಣಲಿದೆ. ಬಿಡುಗಡೆ ಮುಂದೂಡಿಕೆಯಾಗಿದ್ದೇಕೆ ಎಂಬುದಕ್ಕೆ ಚಿತ್ರತಂಡ ಅಧಿಕೃತ ಹೇಳಿಕೆಯನ್ನು ನೀಡಿದೆ.

25
ಚಿತ್ರತಂಡದ ಹೇಳಿಕೆ

ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರವನ್ನು ನಾವು ಜಾಗತಿಕ ಪ್ರೇಕ್ಷಕರಿಗಾಗಿ ಸಿನಿಮಾ ನಿರ್ಮಿಸುವ ಆಶಯದೊಂದಿಗೆ ರೂಪಿಸಿದ್ದೇವೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾದ ಈ ಸಿನಿಮಾ, ದೇಶದ ಹಾಗೂ ವಿದೇಶದ ಪ್ರೇಕ್ಷಕರನ್ನು ತಲುಪುವ ದೃಢ ವಿಶ್ವಾಸದೊಂದಿಗೆ ಸಿದ್ಧವಾಗಿದೆ ಎಂದಿದ್ದಾರೆ

35
ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್

ಹಲವು ವರ್ಷಗಳ ಶ್ರಮದ ನಂತರ, ನಮ್ಮ ಚಿತ್ರವನ್ನು ಮಾರ್ಚ್ 19 ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದೆವು. ಆದರೆ, ಪ್ರಸ್ತುತ ಜಗತ್ತಿನಲ್ಲಿ (ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ) ಉಂಟಾಗಿರುವ ಅನಿಶ್ಚಿತತೆಯು, ಚಿತ್ರವನ್ನು ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರಿಗೆ ತಲುಪಿಸುವ ನಮ್ಮ ಗುರಿಯ ಮೇಲೆ ಪರಿಣಾಮ ಬೀರಿದೆ.

45
ಪ್ರೇಕ್ಷಕರ ಹಿತದೃಷ್ಟಿ

ಆದ್ದರಿಂದ, ನಮ್ಮ ಪಾಲುದಾರರ ಮತ್ತು ಪ್ರೇಕ್ಷಕರ ಹಿತದೃಷ್ಟಿಯಿಂದ, ಚಿತ್ರದ ಬಿಡುಗಡೆಯ ದಿನಾಂಕವನ್ನು ಮರುನಿಗದಿಪಡಿಸುವ ಕಠಿಣ ಹಾಗೂ ಎಚ್ಚರಿಕೆಯ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ. ನಿಮ್ಮ ತಿಳುವಳಿಕೆ ಮತ್ತು ತಾಳ್ಮೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಹಾಗೂ ನಿಮ್ಮ ಪ್ರೀತಿ ಮತ್ತು ಬೆಂಬಲ ಹೀಗೆಯೇ ಇರಲಿ ಎಂದು ಆಶಿಸುತ್ತೇವೆ.

ಇದನ್ನೂ ಓದಿ: ರಾಜಮೌಳಿ ಮೇಲೆ 'ಕ್ಯಾಪಿ ಕ್ಯಾಟ್' ಆರೋಪ; ಆ ಖ್ಯಾತ ನಿರ್ದೇಶಕನ ಜೊತೆ ಹೋಲಿಸಿ ಮರ್ಯಾದೆ ಹರಾಜು ಹಾಕುವ ಹುನ್ನಾರ?

55
ಜೂನ್ 4 ರಂದು ಬಿಡುಗಡೆ

ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್, ಈಗ ಜಗತ್ತಿನಾದ್ಯಂತ ಇಂಗ್ಲಿಷ್ ಮತ್ತು ಭಾರತೀಯ ಭಾಷೆಗಳಲ್ಲಿ 2026ರ ಜೂನ್ 4 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಇದನ್ನೂ ಓದಿ: ಟಾಕ್ಸಿಕ್‌ ಬಿಡುಗಡೆ ಮುಂದೂಡಿಕೆ, ಹೊಸ ದಿನಾಂಕ ಪ್ರಕಟ ; ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಬಿಗ್ ಶಾಕ್

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories