ಕನ್ನಡ ಕಿರುತೆರೆ ನಟಿ ತನಿಷಾ ಕುಪ್ಪಂಡ ಬಿಗ್ ಬಾಸ್ ಸೀಸನ್ 10ಕ್ಕೆ ಹೋಗಿ ಬಂದ ನಂತರ ಹೆಚ್ಚು ಫೇಮಸ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆಕ್ಟಿವ್. ತಮ್ಮ ಸ್ಟೈಲಿಶ್ ಫೋಟೋಗಳನ್ನು ಶೇರ್ ಮಾಡುತ್ತಾರೆ. ಇತ್ತೀಚಿಗೆ ಸಾಂಪ್ರದಾಯಿಕ ಲುಕ್‌ನಲ್ಲಿ ಮಿಂಚಿದ್ದಾರೆ.
ಕನ್ನಡ ಕಿರುತೆರೆ ನಟಿ ತನಿಷಾ ಕುಪ್ಪಂಡ ಬಿಗ್‌ಬಾಸ್‌ಗೆ ಹೋಗಿ ಬಂದ ನಂತರ ಹೆಚ್ಚು ಫೇಮಸ್ ಆಗಿದ್ದಾರೆ. ಬಿಗ್ ಬಾಸ್ ಸೀಸನ್ 10ರಲ್ಲಿ ತಮ್ಮ ಆಟ, ಮಾತಿನ ಮೂಲಕ ಬೆಂಕಿ ಅಂತಾನೆ ಫೇಮಸ್ ಆಗಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲೂ ತನಿಷಾ ಸಖತ್ ಆಕ್ಟಿವ್ ಆಗಿದ್ದಾರೆ. ಯಾವಾಗ್ಲೂ ತಮ್ಮ ಸಾಂಪ್ರದಾಯಿಕ ಹಾಗೂ ಮಾಡರ್ನ್ ಡ್ರೆಸ್‌ನ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡುತ್ತಿರುತ್ತಾರೆ.
ಇತ್ತೀಚಿಗೆ ಯೆಲ್ಲೋ ಬ್ಲೌಸ್, ಗ್ರೀನ್ ಸ್ಕರ್ಟ್ ಹಾಗೂ ಪಿಂಕ್ ದುಪ್ಪಟ್ಟಾದಲ್ಲಿ ಮಿಂಚಿದ್ದಾರೆ. ಇದಕ್ಕೆ ಮ್ಯಾಚಿಂಗ್ ಬಳೆಯನ್ನು ಸಹ ಹಾಕಿಕೊಂಡಿದ್ದಾರೆ. ಕರ್ಲಿ ಹೇರ್ ಡಿಫರೆಂಟ್ ಲುಕ್‌ಗೆ ನೆಟ್ಟಿಗರು ವಾವ್ ಅಂದಿದ್ದಾರೆ.
ಬ್ಯಾಕ್ ಡೀಪ್ ಕಟ್, ಲೇಸ್ ಡಿಸೈನ್ ಇರೋ ಬ್ಲೌಸ್ ನೆಟ್ಟಿಗರ ಗಮನ ಸೆಳೆದಿದೆ. ಬೆಂಕಿ ಸಖತ್ ಹಾಟ್ ಮಗಾ ಅಂತ ಕಾಮೆಂಟ್ ಮಾಡಿದ್ದಾರೆ.
ಮತ್ತೆ ಕೆಲ ಅಭಿಮಾನಿಗಳು ಬ್ಯೂಟಿಫುಲ್, ಜಸ್ಟ್ ಲುಕ್ಕಿಂಗ್ ಲೈಕ್ ಎ ವಾವ್, ಪ್ರೆಟ್ಟೀ, ಬ್ಯೂಟಿ ವಿತ್ ಬ್ರೈನ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 'ನಿಮ್ ಹೊಟೇಲ್‌ಗೆ ವಿಸಿಟ್ ಮಾಡ್ಬೇಕು ಅನ್ನೋದು ನನ್ ಡ್ರೀಮ್' ಎಂದು ಮತ್ತೊಬ್ಬ ಅಭಿಮಾನಿ ಕಮೆಂಟಿಸಿದ್ದಾರೆ.
ಬಿಗ್ ಬಾಸ್ ಗೂ ಮುಂಚೆ ಹೆಚ್ಚಿನ ಜನಕ್ಕೆ ಪರಿಚಿತರಾಗಿಲ್ಲದ ತನಿಷಾ, ಬಿಗ್ ಬಾಸ್ ಮೂಲಕ ರಾಜ್ಯದ ಜನರಿಗೆ ಹೆಚ್ಚು ಪರಿಚಿತರಾದರು. ತನಿಷಾ ಅವರಿಗಾಗಿ ಬೆಂಕಿ ಬಂತು ಬೆಂಕಿ ಎನ್ನುವ ಹಾಡನ್ನು ಸಹ ಬಿಡುಗಡೆ ಮಾಡಲಾಗಿತ್ತು. ಬಿಗ್ ಬಾಸ್ ಮೂಲಕ ಅಪಾರ ಅಭಿಮಾನಿಗಳನ್ನು ಪಡೆದಿದ್ದರು ತನಿಷಾ.
ಇದೀಗ ಬಿಗ್ ಬಾಸ್ ನಿಂದ ಹೊರ ಬಂದ ಮೇಲೂ ಸಹ ತನಿಷಾ ಹವಾ ಕಡಿಮೆಯಾಗಿಲ್ಲ. ಜನಪ್ರಿಯತೆ ಹೆಚ್ಚುತ್ತಲೇ ಇದೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ತನಿಷಾ ಜನರ ಜೊತೆ ಮತ್ತಷ್ಟು ಕನೆಕ್ಟ್ ಆಗಲು ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.