ಮೈಸೂರು ಸಿಲ್ಕ್ ಸೀರೆಯುಟ್ಟ ಅನುಪಮಾ ಗೌಡ, ಮುದ್ದು ಮುದ್ದಾದ ಫೋಸ್‌ಗೆ ಫ್ಯಾನ್ಸ್ ಫಿದಾ!

First Published Mar 11, 2024, 12:25 PM IST

ಬಿಗ್ ಬಾಸ್ ಸ್ಪರ್ಧಿ, ನಿರೂಪಕಿ, ನಟಿ ಅನುಪಮಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಆಗಾಗ ತಮ್ಮ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಹಸಿರು ಮತ್ತು ನೇರಳೆ ಬಣ್ಣದ ಸೀರೆಯುಟ್ಟು ಮುದ್ದು ಮುದ್ದಾಗಿ ಫೋಟೋಗಳಿಗೆ ಫೋಸ್ ನೀಡಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ, ನಿರೂಪಕಿ ಮತ್ತು ಕಿರುತೆರೆ ನಟಿ ಅನುಪಮಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್. ಆಗಾಗ ತಮ್ಮ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಇತ್ತೀಚಿಗೆ ಹಸಿರು ಮತ್ತು ನೇರಳೆ ಬಣ್ಣದ ಸೀರೆಯುಟ್ಟು ಮುದ್ದು ಮುದ್ದಾಗಿ ಫೋಟೋಗಳಿಗೆ ಫೋಸ್ ನೀಡಿದ್ದಾರೆ.

ಕಿರುತೆರೆ ನಟಿ ಮತ್ತು ನಿರೂಪಕಿಯಾಗಿ ಜನಪ್ರಿಯತೆ ಪಡೆದಿರುವ ಅನುಪಮಾ ಗೌಡ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಸಿರು ಮತ್ತು ನೇರಳೆ ಬಣ್ಣದ ಸೀರೆಯುಟ್ಟ ಹೊಸ ಫೋಟೊಗಳನ್ನು ಶೇರ್ ಮಾಡಿಕೊಂಡಿದ್ದಾರೆ. 

ಅನುಪಮಾ ಗೌಡ, ಹಸಿರು ಒಡಲಿಗೆ ನೇರಳೆ ಬಣ್ಣದ ಬಾರ್ಡರ್ ಇರೋ ಸೀರೆಯುಟ್ಟು ಸಖತ್ತಾಗಿ ಫೋಸ್ ಕೊಟ್ಟಿದ್ದಾರೆ. ಹಸಿರು ಬಣ್ಣದ ಬಳೆಗಳನ್ನು ತೊಟ್ಟಿರೋ ಅನುಪಮಾ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಟ್ರೆಡಿಶನಲ್‌ ಲುಕ್‌ಗೆ ಅಭಿಮಾನಿಗಳು ಲೈಕ್ಸ್‌, ಹಾರ್ಟ್ ಎಮೋಜಿಗಳನ್ನು ಕಳುಹಿಸಿಕೊಟ್ಟಿದ್ದಾರೆ. ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಸೋ ಕ್ಯೂಟ್, ಬ್ಯೂಟಿಫುಲ್‌, ಡಾಲ್, ಗಾರ್ಜಿಯಸ್‌, ಬ್ಯೂಟಿಫುಲ್‌ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು, ಯಾರಮ್ಮ ಚೆಲುವೆ ನೀನು ನನ್ನ ಕಣ್ಣಿಗೆ ಬಿತ್ತು, ಹೊಗಳಲು ಪದಗಳೇ ಸಾಲದು ಎಂದೆಲ್ಲಾ ಕಾಮೆಂಟ್ ಮಾಡಿ ಹೊಗಳಿದ್ದಾರೆ. 
ಮತ್ತೆ ಕೆಲವರು, ಜಸ್ಟ್ ಲುಕ್ಕಿಂಗ್ ಲೈಕ್ ಎ ವಾವ್‌', ಸೂಪರ್ ಅನು, ಸೋ ಕ್ಯೂಟ್‌ ಎಂದಿದ್ದಾರೆ.

ಅಕ್ಕ ಧಾರಾವಾಹಿಯಲ್ಲಿ ಡಬಲ್ ರೋಲ್ ಮಾಡಿ ಎಲ್ಲರ ಮನಸ್ಸು ಗೆದ್ದಿದ್ದ ನಟಿ ಅನುಪಮಾ ಗೌಡ. ಕನ್ನಡದ ಕಿರುತೆರೆ ನಟಿ 'ಅಕ್ಕ' ಸೀರಿಯಲ್‌ನಲ್ಲಿ ಭೂಮಿಕಾ ಮತ್ತು ದೇವಿಕಾ ಎಂಬ ಎರಡು ಮುಖ್ಯ ಪಾತ್ರದಲ್ಲಿ ನಟಿಸುವ ಮೂಲಕ ಖ್ಯಾತಿಯನ್ನು ಪಡೆದವರು. 

ಆ ನಂತರ ಬಿಗ್ ಬಾಸ್ ಮೂಲಕ ಹೆಚ್ಚು ಜನಪ್ರಿಯತೆ ಪಡೆದಿದ್ದರು. ಅದರಿಂದ ಬಂದ ಮೇಲೆ ನಿರೂಪಕಿಯಾಗಿ ಮಿಂಚುತ್ತಿದ್ದಾರೆ. ಲಕ್ಷಾಂತರ ಅಭಿಮಾನಿಗಳನ್ನೂ ಹೊಂದಿದ್ದಾರೆ. ಈ ಗೆಲುವೇ ಅವರನ್ನು ಎರಡು ಬಾರಿ ಬಿಗ್ ಬಾಸ್ ಮನೆಗೆ ಹೋಗುವಂತೆ ಮಾಡಿತ್ತು.

ಆ ಕರಾಳ ರಾತ್ರಿ, ಪುಟ 109, ಬೆಂಕಿಯಲ್ಲಿ ಅರಳಿದ ಹೂವು ಸೇರಿದಂತೆ ಹಲವು ಸಿನಿಮಾಗಳಲ್ಲಿ ಅನುಪಮಾ ನಾಯಕಿಯಾಗಿ ನಟಿಸಿದ್ದರು. ಆ ಕರಾಳ ರಾತ್ರಿ ಸಿನಿಮಾ ಅವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. 

click me!